ಪರವಾನಿಗೆ ಇಲ್ಲದ, ನವೀಕರಿಸದ ಅಂಗಡಿ ಮಾಲಕರಿಗೆ ದಂಡ ವಿಧಿಸಲು ತೀರ್ಮಾನ

Team Udayavani, Jan 21, 2018, 3:17 PM IST

21-Jan-15.jpg

ಉಪ್ಪಿನಂಗಡಿ: ಪರವಾನಿಗೆ ಹೊಂದಿರದ ಹಾಗೂ ನವೀಕರಿಸದ ಅಂಗಡಿ ಮಾಲಕರಿಗೆ ಯಾವುದೇ ಕಾರಣ ನೀಡದೇ ದಂಡ ವಿಧಿಸಲು ಉಪ್ಪಿನಂಗಡಿ ಗ್ರಾ.ಪಂ. ನಿರ್ಣಯ ಕೈಗೊಂಡಿದೆ.

ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ. ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ಕೆಲವರು ಪರವಾನಿಗೆ ಇಲ್ಲದೆ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿದ್ದಾರೆ. ಇನ್ನು ಕೆಲವರು ಪರವಾನಿಗೆ ನವೀಕರಿಸುವ ಗೋಜಿಗೆ ಹೋಗುತ್ತಿಲ್ಲ. ಇದರಿಂದ ಗ್ರಾ.ಪಂ.ಗೆ ನಷ್ಟವಾಗಲಿದ್ದು, ಆದ್ದರಿಂದ ಅಂಥಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಈ ಬಗ್ಗೆ ಚರ್ಚೆ ನಡೆದು ಮುಂದಕ್ಕೆ ಅಂಥಹವರಿಗೆ ಕಾರಣ ನೀಡದೇ ದಂಡ ವಿಧಿಸುವ ನಿರ್ಣಯ ಕೈಗೊಳ್ಳಲಾಯಿತು.

ಗ್ರಾ.ಪಂ. ಸದಸ್ಯ ಚಂದ್ರಶೇಖರ ಮಡಿವಾಳ ಮಾತನಾಡಿ, ಪಂಚಾಯತ್‌ ವ್ಯಾಪ್ತಿಯಲ್ಲಿ ಅಧಿಕೃತವಾಗಿ ಹಾಗೂ ಅನಧಿಕೃತವಾಗಿ ಪಂಚಾಯತ್‌ನ ಕುಡಿಯುವ ನೀರಿನ ಸಂಪರ್ಕ ಪಡೆದು ಕೊಂಡವರ ಮಾಹಿತಿಯನ್ನು ನೀರು ನಿರ್ವಾಹಕರು ಕಲೆ ಹಾಕಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ನಿರ್ಣಯ ಅಂಗೀಕರಿಸಲಾಯಿತು.

ಪತ್ರ ಬರೆಯಲು ನಿರ್ಧಾರ
ಉಪ್ಪಿನಂಗಡಿ ಪೇಟೆಯಲ್ಲಿ ಶೀತಲೀಕರಣ ವ್ಯವಸ್ಥೆಯುಳ್ಳ ಮೀನು ಮಾರುಕಟ್ಟೆ ತೆರೆಯಲು ಸಭೆಯಲ್ಲಿ ಆಗ್ರಹ ಕೇಳಿಬಂತು. ಹಿರೇಬಂಡಾಡಿಗೆ ತೆರಳುವ ಜೀಪುಗಳಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಈಗ ಎಲ್ಲ ಜೀಪುಗಳು ಹಳೆ ಬಸ್‌ ನಿಲ್ದಾಣದಲ್ಲಿಯೇ ಠಿಕಾಣಿ ಹೂಡುತ್ತಿವೆ. ಆದ್ದರಿಂದ ಈ ಬಗ್ಗೆ ಕ್ರಮಕ್ಕೆ ಸಂಚಾರಿ ಪೊಲೀಸರಿಗೆ ಪತ್ರ ಬರೆಯಲು ನಿರ್ಧರಿಸಲಾಯಿತು.

ಖಾಸಗಿ ವಾಹನ ನಿಲುಗಡೆಗೆ ನಿರ್ಬಂಧ ವಿಧಿಸಲು ತೀರ್ಮಾನ
ಹೊಸ ಬಸ್‌ ನಿಲ್ದಾಣದಲ್ಲಿ ಬೇಕಾ ಬಿಟ್ಟಿಯಾಗಿ ಖಾಸಗಿ ವಾಹನಗಳನ್ನು ನಿಲುಗಡೆಗೊಳಿಸಲಾಗುತ್ತಿದೆ. ಇದಕ್ಕೊಮ್ಮೆ ಪಂಚಾಯತ್‌ ದಂಡ ಕೂಡ ವಿಧಿಸಿತ್ತು. ಆದರೂ ಮರುದಿನದಿಂದ ಮತ್ತೆ ಅದೇ ಸ್ಥಿತಿಯಿರುವುದರಿಂದ ದಿನಕ್ಕೊಬ್ಬರಂತೆ ಪಂಚಾಯತ್‌ ಸಿಬಂದಿಯನ್ನು ಅಲ್ಲಿ ನಿಲ್ಲಿಸಿ, ಬಸ್‌ಗಳು ಹಾಗೂ ಇತರ ಅಗತ್ಯದ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳು ಬಸ್‌ ನಿಲ್ದಾಣ ಪ್ರವೇಶಿಸದಂತೆ ನಿರ್ಬಂಧ ವಿಧಿಸಲು ತೀರ್ಮಾನಿಸಲಾಯಿತು.

ಪಿಡಿಒ ಅಬ್ದುಲ್ಲಾ ಅಸಾಫ್ ಮಾತನಾಡಿ, ವಸತಿ ಯೋಜನೆಯಡಿ ಮನೆಗಳನ್ನು ಪಡೆದ ಫ‌ಲಾನುಭವಿಗಳು ನಿಗದಿತ ಅವಧಿಗೆ ಮನೆಗಳನ್ನು ಪೂರ್ಣಗೊಳಿಸದಿದ್ದರೆ ಅಂಥವರನ್ನು ಪಟ್ಟಿಯಿಂದ ಕೈಬಿಡುವ ಅನಿವಾರ್ಯತೆ ಇದ್ದು, ಸದಸ್ಯರು ಫ‌ಲಾನುಭವಿಗಳಿಗೆ ಮನವರಿಕೆ ಮಾಡುವಂತೆ ಸೂಚಿಸಿದರು. ಸದಸ್ಯರಾದ ಗೋಪಾಲ ಹೆಗ್ಡೆ, ಸುನೀಲ್‌ ದಡ್ಡು, ಸುರೇಶ್‌ ಅತ್ರಮಜಲು, ಯು.ಟಿ. ತೌಸೀಫ್, ಚಂದ್ರಾವತಿ, ಭಾರತಿ, ಯೋಗಿನಿ, ಜಮೀಳಾ, ಸುಶೀಲಾ, ಝರೀನಾ ಉಪಸ್ಥಿತರಿದ್ದರು. ಕಾರ್ಯದರ್ಶಿ ಶಾರದಾ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.