ಮಾತಿನ ಮತ, ಸಂದರ್ಶನ: ಕೆ. ಕುಶಲ ಮಾಜಿ ಶಾಸಕರು, ಸುಳ್ಯ 

Team Udayavani, Mar 1, 2018, 2:08 PM IST

1-Mar-12.jpg

1985, 1994ರ ಅವಧಿಯ ಅಭಿವೃದ್ಧಿಗಳು ಏನು?
ನನ್ನ ಎರಡು ಅವಧಿಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅರಂತೋಡು ಸೇತುವೆ ಸಹಿತ, ಪ್ರಮುಖ ಸಂಪರ್ಕ ರಸ್ತೆಗಳ ಅಭಿವೃದ್ಧಿ ಆಗಿದೆ. 110 ಕೆ.ವಿ. ಸಬ್‌ಸ್ಟೇಶನ್‌ ಗೆ ಮಂಜೂರಾತಿ, ತಾಲೂಕು ಕ್ರೀಡಾಂಗಣಕ್ಕೆ ಮಂಜೂರಾತಿ, ಅಂಬೇಡ್ಕರ್‌ ಭವನಕ್ಕೆ ಮಂಜೂರಾತಿ ಇವೆಲ್ಲವೂ ನನ್ನ ಅವಧಿಯಲ್ಲೇ ಆದ ಕೆಲಸಗಳು.

ನೀವು ಮಾಜಿ ಶಾಸಕನಾದ ಅನಂತರದ 25 ವರ್ಷಗಳಲ್ಲಿ ಕ್ಷೇತ್ರ ಅಭಿವೃದ್ಧಿ ಕಂಡಿದೆಯೇ?
ಇಲ್ಲ. ಉದಾಹರಣೆ ಅಂದರೆ, ನನ್ನ ಅವಧಿಯಲ್ಲಿ ಮಂಜೂರುಗೊಂಡ 110 ಕೆ.ವಿ. ವಿದ್ಯುತ್‌ ಸಬ್‌ಸ್ಟೇಶನ್‌, ತಾಲೂಕು ಮೈದಾನ, ಅಂಬೇಡ್ಕರ್‌ ಭವನ ಇತ್ಯಾದಿ ಯೋಜನೆಗಳನ್ನು ಈಗಿನ ಶಾಸಕರಿಗೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಹೇಳಿಕೊಳ್ಳುವಂತೆ ಯಾವುದೇ ಯೋಜನೆಗಳನ್ನು ಅವರು ನೀಡಿಲ್ಲ.

ತಾಲೂಕಿಗೆ ಆಗಬೇಕಾದ ಪ್ರಮುಖ ಕೆಲಸಗಳು ಏನು?
ಮಂಜೂರುಗೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸುವುದು. ರಬ್ಬರ್‌ ಫ್ಯಾಕ್ಟರಿ, ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಅಡಿಕೆ ಮಂಡಳಿ, ಸರಕಾರಿ ತಾಂತ್ರಿಕ ಕಾಲೇಜು ಸ್ಥಾಪನೆ ಆಗಬೇಕು.

25 ವರ್ಷಗಳ ಹಿಂದಿನ ರಾಜಕೀಯ ವ್ಯವಸ್ಥೆಗೂ ಈಗಿನ ವ್ಯವಸ್ಥೆಗೂ ಬದಲಾವಣೆ ಕಂಡುಬರುತ್ತಿದೆಯೇ?
ಹೌದು. ಈಗ ಮೌಲ್ಯಯುತ ರಾಜಕಾರಣಿಗಳ ಕೊರತೆ ಇದೆ. ವಿಧಾನಸಭೆಯಲ್ಲಿ ಚರ್ಚಿಸುವ ಧಾಟಿ ಇತ್ಯಾದಿಗಳಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತಿದೆ. ಈಗಲೂ 1980-90ರ ಕಾಲದ ಜನಪ್ರತಿನಿಧಿಗಳ ವರ್ತನೆ, ಕಾಳಜಿ, ಪ್ರಾಮಾಣಿಕತೆಯ ಬಗ್ಗೆ ಮಾತನಾಡುವವರು ಇದ್ದಾರೆ. ಅಂತಹ ಜನಪ್ರತಿನಿಧಿಗಳ ಅಗತ್ಯ ಈಗಲೂ ಇದೆ ಅನ್ನುವುದು ಜನಸಾಮಾನ್ಯರ ಅಭಿಮತ.

ನೀವು ಶಾಸಕರಾಗಿದ್ದಾಗ ಸೌಲಭ್ಯಗಳು ಹೇಗಿದ್ದವು?
ಆಗ ಕೈ ಬರಹದಲ್ಲಿ ಮನವಿ ಬರೆದು ಸರಕಾರಕ್ಕೆ ಕಳುಹಿಸಬೇಕಿತ್ತು. ಈಗ ಎಲ್ಲವೂ ಬದಲಾಗಿದೆ. ಕಂಪ್ಯೂಟರ್‌ ನಿಂದ ಹಿಡಿದು ಪೂರ್ಣ ಪ್ರಮಾಣದ ಸೌಲಭ್ಯ ಶಾಸಕರಿಗೆ ಇದೆ. ನಮಗೆ 2,500 ರೂ. ಗೌರವ ಧನ ಇತ್ತು. 1,800 ರೂ. ಪಿಂಚಣಿ ಇತ್ತು. ಈಗ ಎಲ್ಲವೂ ದುಪ್ಪಟ್ಟಾಗಿವೆ. ವ್ಯತ್ಯಾಸ ಅಂದರೆ ಆಗ ಸೌಲಭ್ಯಗಳ ಕೊರತೆ ಇದ್ದರೂ ಜನಪ್ರತಿನಿಧಿಗಳು ಜನರ ಸೇವಕರಾಗಿ ಪ್ರಾಮಾಣಿಕತೆಯಿಂದ ದುಡಿಯುತ್ತಿದ್ದರು. ಈಗ ಎಲ್ಲ ಸೌಲಭ್ಯಗಳು ಸಿಕ್ಕಿದರೂ ಜನಪ್ರತಿನಿಧಿಗಳಲ್ಲಿ ಪ್ರಾಮಾಣಿಕತೆ ಉಳಿದುಕೊಂಡಿಲ್ಲ.

„ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.