ಇಚ್ಲಂಪಾಡಿ: ಮನೆಗೆ ನುಗ್ಗಿ ದರೋಡೆ

Team Udayavani, Mar 22, 2018, 8:55 AM IST

Robbery-Symbolic-600.jpg

ಕಡಬ/ ಉಪ್ಪಿನಂಗಡಿ: ಇಚ್ಲಂಪಾಡಿ ಗ್ರಾಮದ ಮಾನಡ್ಕದ ವೃದ್ಧ ದಂಪತಿ ನಾರಾಯಣ ಪಿಳ್ಳೆ (70) ಹಾಗೂ ಶ್ಯಾಮಲಾದೇವಿ (65) ಅವರ ಮನೆಗೆ ಯುವಕರಿಬ್ಬರು ನುಗ್ಗಿ  ಪಿಸ್ತೂಲು ಹಾಗೂ ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂ. ಮೌಲ್ಯದ ನಗ ಹಾಗೂ ನಗದನ್ನು ಅಪಹರಿಸಿದ ಘಟನೆ ಬುಧವಾರ ರಾತ್ರಿ 7.30 ರ ಸುಮಾರಿಗೆ ಸಂಭವಿಸಿದೆ. ನಾರಾಯಣ ಪಿಳ್ಳೆ ನಿವೃತ್ತ ಸೈನಿಕರಾಗಿದ್ದು, ಅವರ ಇಬ್ಬರು ಪುತ್ರರೂ ಸೇನೆಯಲ್ಲಿದ್ದು, ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇದ್ದಾರೆ. ಅವರು ಟಿವಿ ವೀಕ್ಷಿಸುತ್ತಿದ್ದ ವೇಳೆ ತೆರೆದಿದ್ದ ಮುಂಬಾಗಿಲಿನಿಂದ ಒಳ ಪ್ರವೇಶಿಸಿದ ಯುವಕರು ಅವರನ್ನು ಬೆದರಿಸಿ ಶ್ಯಾಮಲಾದೇವಿ ಧರಿಸಿದ್ದ ಚಿನ್ನದ 2 ಬಳೆ, 2 ಚೈನ್‌ ಹಾಗೂ ಉಂಗುರಗಳನ್ನು ಕಿತ್ತುಕೊಂಡಿದ್ದಾರೆ.  

ಕಪಾಟಿನೊಳಗಿದ್ದ ಸುಮಾರು 37, 500 ರೂ. ನಗದು, 2 ಮೊಬೈಲ್‌ ಹಾಗೂ ಎಟಿಎಂ ಕಾರ್ಡ್‌ಗಳನ್ನೂ ಕೊಂಡೊಯ್ದಿದ್ದಾರೆ. ತಮ್ಮ ಕೆಲಸ ಮುಗಿಸಿದ ಕಳ್ಳರು ಮನೆಯ ಹೊರಗೆ ಬರಬಾರದು ಮತ್ತು ಯಾರಿಗೂ ಮಾಹಿತಿ ನೀಡಬಾರದು, ನಾವು ಹೊರಗಡೆ ಕಾಯುತ್ತಿರುತ್ತೇವೆ, ಹೊರಗೆ ಬಂದರೆ ಕೊಲ್ಲುತ್ತೇವೆ ಎಂದು ಬೆದರಿಸಿ ಪರಾರಿಯಾಗಿದ್ದಾರೆ. 

ಘಟನೆ ನಡೆದು ಒಂದು ತಾಸು ಕಳೆದ ಮೇಲೆ ಹೊರಬಂದ ದಂಪತಿ ಸ್ವಲ್ಪ ದೂರದಲ್ಲಿರುವ ಸಂಬಂಧಿಯ ಮನೆಗೆ ತೆರಳಿ ವಿಚಾರ ತಿಳಿಸಿದ ಮೇಲೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕಡಬ ಎಸ್‌ಐ ಪ್ರಕಾಶ್‌ ದೇವಾಡಿಗ, ಉಪ್ಪಿನಂಗಡಿ ಎಸ್‌ಐ ನಂದಕುಮಾರ್‌ ಹಾಗೂ ಧರ್ಮಸ್ಥಳ ಎಸ್‌ಐ ಅವಿನಾಶ್‌ ಸ್ಥಳದಲ್ಲಿದ್ದು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳವನ್ನು ಕರೆಸಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ಆಗಮಿಸುತ್ತಿದ್ದಾರೆ. ದರೋಡೆಕೋರರು ಬ್ಯಾರಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸೊತ್ತುಗಳ ನಿಖರ ಮೌಲ್ಯ ಇನ್ನಷ್ಟೇ ತಿಳಿದುಬರಬೇಕಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.