ಎತ್ತಿನಹೊಳೆ ಯೋಜನೆಗೆ ವಿರೋಧವಿದೆ: ಬಂಗೇರ


Team Udayavani, Mar 27, 2018, 7:43 PM IST

Bangera-27-3.jpg

ಬೆಳ್ತಂಗಡಿ: ಎತ್ತಿನಹೊಳೆ ಯೋಜನೆಗೆ ಸರಕಾರ ಮೀಸಲಿಟ್ಟ 12 ಸಾವಿರ ಕೋಟಿ ರೂ. ನೀರಲ್ಲಿ ಮಾಡಿದ ಹೋಮದಂತೆ. ಈ ಹಣ ವ್ಯರ್ಥವಾಗುತ್ತದೆ. ಎತ್ತಿನ ಹೊಳೆ ಯೋಜನೆಯಿಂದ ಜನರಿಗೆ ಯಾವುದೇ ಉಪಯೋಗವಾಗುವುದಿಲ್ಲ ಎಂದು ಸರಕಾರಕ್ಕೆ ಮನವರಿಕೆ ಮಾಡಿದ್ದೆ. ಈಗಲೂ ನನ್ನ ಮಾತಿಗೆ ನಾನು ಬದ್ಧ, ಎತ್ತಿನ ಹೊಳೆ ಯೋಜನೆಗೆ ವಿರೋಧವಿದೆ ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು. ಅವರು ಗುರುನಾರಾಯಣ ಸಭಾ ಭವನದಲ್ಲಿ  ನಾಗರಿಕ ಸೇವಾ ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ನಾಗರೀಕ ಸೇವಾ ಬಳಗಗಳ ಸಕ್ರಿಯ ಸದಸ್ಯರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಡವರಿಗೆ ಮಂಜೂರಾಗುವ ಕುಮ್ಕಿ ಜಮೀನು ಮಂಜೂರಾತಿಗೆ ಸಚಿವ ಕಾಗೋಡು ತಿಮ್ಮಪ್ಪ ಜತೆ ನಾನೂ ಕೈಜೋಡಿಸಿದ್ದೇನೆ. ಈ ಹೋರಾಟಕ್ಕೆ ಜಯವಾಗಬೇಕಿದೆ. ಅರಣ್ಯವಾಸಿಗಳಿಗೆ ಭೂಮಿ ಸಿಗಲು ಶ್ರಮಿಸುತ್ತಿದ್ದೇನೆ. ಸಮಾಜದ ಅಭಿವೃದ್ಧಿಗೆ ಟ್ರಸ್ಟ್‌ಶ್ರಮಿಸುತ್ತಿದೆ. ಇದು ಹೀಗೇ ಮುಂದುವರಿಯಬೇಕು ಎಂದು ಅವರು ಆಶಿಸಿದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸ್ವಯಂ ಸೇವಾಸಂಸ್ಥೆಗಳ ಒಕ್ಕೂಟ ಉಪಾಧ್ಯಕ್ಷ ಎಸ್‌. ಕುಮಾರ್‌, ಮೈಕ್ರೋ ಫೈನಾನ್ಸ್‌ನಿಂದ ಜನತೆ ಸಮಸ್ಯೆಗೊಳಗಾಗುವಂತೆ ಅಗಿದೆ. ತುರ್ತಾಗಿ ಸಾಲ ಪಡೆದು ಮುಂದೆ ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಎಲ್ಲೆಡೆ ಅರಿವು ಮೂಡಿಸುವ ಕೆಲಸಗಳೂ ನಡೆಯುತ್ತಿದ್ದು, ಜನತೆ ಈ ಬಗ್ಗೆ ತಿಳಿದುಕೊಂಡು ಉತ್ತಮ ಜೀವನ ನಡೆಸಬೇಕು. ಜನತೆಗೆ ಪಾರದರ್ಶಕ ಆಡಳಿತಬೇಕಾಗಿದೆ. ಆದ್ದರಿಂದ ಜನತೆ ಈ ಕುರಿತು ಉತ್ತಮ ಆಡಳಿತ ನೀಡುವವರ ಜತೆ ಕೈಜೋಡಿಸಬೇಕು ಎಂದು ತಿಳಿಸಿದರು.

ಜಿ.ಪಂ ಆಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಕೃಷಿಕರ, ದಲಿತರ, ಕೂಲಿಕಾರ್ಮಿಕರ ಬಗೆಗೆ ಕಾಳಜಿ ವಹಿಸುವ ಸಂಸ್ಥೆಗಳು ಹೆಚ್ಚಬೇಕು. ಸರಕಾರಿ ಇಲಾಖೆಗಳಲ್ಲಿ ಸಾರ್ವಜನಿಕರು ಮುಕ್ತವಾಗಿ ತಮ್ಮ ಕೆಲಸಗಳನ್ನು ಮಾಡುವಂತಾಗಬೇಕು ಎಂದು ತಿಳಿಸಿದರು. ಸಾಹಿತಿ ಲಕ್ಷ್ಮೀಶ ತೋಳ್ಪಾಡಿ, ಬಲ ಇಲ್ಲದವರಿಗೆ ಬಲ ತುಂಬುವ ಕಾರ್ಯವನ್ನು ಸಮಾಜದಲ್ಲಿ ಮಾಡಬೇಕಿದೆ. ಮೂಲಹಕ್ಕುಗಳನ್ನು ಪಡೆಯಲು ಹೋರಾಟ ಮಾಡುವುದು ಆವಶ್ಯಕ. ಸಮಾಜದ ಅಗತ್ಯತೆಗಳನ್ನು ಮನಗಂಡು ಕಾರ್ಯನಿರ್ವಹಿಸುವ ಕಾರ್ಯ ಎಲ್ಲೆಡೆ ನಡೆಯಬೇಕು ಎಂದು ಹೇಳಿದರು.

ವಿದ್ಯಾ ನಾಯಕ್‌ ಅಧ್ಯಕ್ಷತೆಯಲ್ಲಿ ಅತಿ ಬಳಕೆ, ದುರ್ಬಳಕೆಯಿಂದ ಬರಿದಾಗುತ್ತಿರುವ ನೀರು- ಕಾಡು ಸಂರಕ್ಷಣೆ ಬಗ್ಗೆ ಶ್ರೀಪಡ್ರೆ ಪ್ರಬಂಧ ಮಂಡನೆ ಮಾಡಿದರು. ರಾಜಸ್ಥಾನದ ಜನತೆ ಬರದ ಜತೆ ಬದುಕು ನಡೆಸಲು ಕಲಿತಿದ್ದಾರೆ. ಮಹಾರಾಷ್ಟ್ರದ ಹಲವು ಜಿಲ್ಲೆಗಳು ಬರಪೀಡಿತವಾಗಿದೆ. ಜಲಪೂರಣ ಕಾರ್ಯಕ್ರಮ ಮೂಲಕ ಜಲಸಂರಕ್ಷಣೆ ಎಲ್ಲೆಡೆ ನಡೆಸಬೇಕಿದೆ ಎಂದು ಶ್ರೀ ಪಡ್ರೆ ಅವರು ಹೇಳಿದರು. ಅರಣ್ಯೀಕರಣದ ಮೂಲಕ ಪರಿಸರವನ್ನು ಸೃಷ್ಟಿಸುವ ಕಾರ್ಯ ನಡೆಸಬೇಕು. ಮನೆಯ ಮೇಲೆ ಬಿದ್ದ ನೀರನ್ನು ಮರುಪೂರಣ ಮಾಡಿದರೆ ಅಂತರ್ಜಲ ವೃದ್ಧಿ ನಡೆಸಬಹುದು ಎಂದರು.

ಪ್ರಬಂಧ ಮಂಡನೆ
ಕೃಷಿ ಕಾರ್ಮಿಕರಿಗೆ, ದಲಿತರಿಗೆ ಸರಕಾರಿ ಭೂಮಿ, ಡಿ.ಸಿ. ಮನ್ನಾ ಭೂಮಿ ಹಂಚಿಕೆ ಕುರಿತು ನಾರಾಯಣ ಕಿಲಂಗೋಡಿ, ಸ್ವ ಸಹಾಯ ಸಂಘಗಳ ಮೂಲ ಕಲ್ಪನೆ- ಕಾರ್ಯ ವಿಧಾನ- ಸ್ವಾಯತ್ತತೆ ಕುರಿತು ಹೇಮಂತ ಭಿಡೆ ಪ್ರಬಂಧ ಮಂಡನೆ ಮಾಡಿದರು. ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು. ಎನ್‌ಎಸ್‌ಟಿ ಕಾರ್ಯದರ್ಶಿ ಜಯ ಪ್ರಕಾಶ್‌ಭಟ್‌ ಸಿ. ಎಚ್‌. ಸ್ವಾಗತಿಸಿದರು. ಸಮಾರೋಪ ಸಮಾರಂಭವನ್ನು ದ.ಕ. ಪರಿಸರಾಸಕ್ತರ ಒಕ್ಕೂಟದ ಅಧ್ಯಕ್ಷ  ಉಮೇಶ ನಿರ್ಮಲ್‌ ನಿರ್ವಹಿಸಿದರು.

ಸಮಾರೋಪ
ಸಮಾರೋಪ ಸಮಾರಂಭದಲ್ಲಿ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ ನಿರ್ಣಯ ಮಂಡಿಸಿದರು. ಅವಿಭಜಿತ ದ.ಕ. ಜಿಲೆಗಳಲ್ಲಿ ಲಭ್ಯವಿರುವ ಸರಕಾರಿ ಭೂಮಿ ಭೂರಹಿತರಿಗೆ, ಬಡವರಿಗೆ ಹಂಚಬೇಕು, ಸಕಲ ಜೀವರಾಶಿಗಳಿಗೆ ಜೀವನಾಧಾರವಾದ ನೀರು ಅಗತ್ಯ. ಆದರೆ ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗುತ್ತಿದೆ. ಆದ್ದರಿಂದ ಜಲಸಂರಕ್ಷಣೆ ಮಾಡುವ ಶ್ರೀ ಪಡ್ರೆಯವರ ಸಾಹಿತ್ಯ ಲೇಖನ ಪ್ರಚಾರ ಮಾಡಬೇಕು. ಕಮಿಷನ್‌ ಪಡಯುವ ಕಾನೂನುಬಾಹಿರ ಮೈಕ್ರೋ ಫೈನಾನ್ಸ್‌ – ಎನ್‌ಐ ವ್ಯವಹಾರಕ್ಕೆ ಕಡಿವಾಣ, ಎತ್ತಿನ ಹೊಳೆ ಯೋಜನೆಗೆ ಕಡಿವಾಣ ಹಾಕಿ ಬರಪೀಡಿತ ಜಿಲ್ಲೆಗಳಲ್ಲಿ ಮಳೆಯಾಧಾರಿತ ಯೋಜನೆ ರೂಪಿಸುವುದು ಸೇರಿದಂತೆ ಹತ್ತು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.