ಕಟ್ಟಡ ಮಾಲಕರು, ಗುತ್ತಿಗೆದಾರ, ಎಂಜಿನಿಯರ್‌ ವಿರುದ್ಧ  ಕೇಸ್‌


Team Udayavani, Apr 26, 2018, 10:14 AM IST

26-April-3.jpg

ಪುತ್ತೂರು: ಬರೆಯ ಮಣ್ಣು ಬಿದ್ದು ಎರಡು ಜೀವಗಳು ಬಲಿಯಾದ ಪ್ರಕರಣದಲ್ಲಿ ಕಟ್ಟಡದ ಇಬ್ಬರು ಮಾಲಕರು, ಗುತ್ತಿಗೆದಾರರು ಹಾಗೂ ಎಂಜಿನಿಯರ್‌ ವಿರುದ್ಧ ಠಾಣೆಯಲ್ಲಿ ದೂರು ದಾಖಲಾಗಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದೇ ದುರಂತಕ್ಕೆ ಕಾರಣ ಎಂದು ಉಲ್ಲೇಖಿಸಲಾಗಿದೆ.

ಮಂಗಳವಾರ ಬೆಳಗ್ಗೆ 10.26ಕ್ಕೆದು ರ್ಘ‌ಟನೆ ಸಂಭವಿಸಿತ್ತು. ಕಟ್ಟಡ ಎಬ್ಬಿಸಲೆಂದು ನೆಲದಿಂದ 30 ಅಡಿಯಷ್ಟು ಆಳ ಗುಂಡಿಗಳನ್ನು ತೋಡಿದ್ದು, ಇದರ ತಳಭಾಗದಲ್ಲಿ ಒಟ್ಟು ಆರು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭ ಬರೆ ಕುಸಿದು ಬಿದ್ದು, ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಪದ್ಮನಾಭ (35) ಹಾಗೂ ಕೊಪ್ಪಳದ ಅಡವಿಬಾವಿ ನಿವಾಸಿ ಶಿವು ಯಾನೆ ಶಿವಣ್ಣ (40) ಮೃತಪಟ್ಟವರು. ಕೊಪ್ಪಳ ಜಿಲ್ಲೆ ಕುಷ್ಟಗಿಯ ಮಹಾಂತೇಶ್‌ ತಲೆಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೋಕಟ್ಟೆಯ ಯಶವಂತ್‌ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ. ಕೊಪ್ಪಳದ ಕುಷ್ಟಗಿ ನಿವಾಸಿಗಳಾದ ನಾಗರಾಜ್‌ ಹಾಗೂ ಮೃತಪಟ್ಟ ಶಿವಣ್ಣ ಪತ್ನಿ ಹನುಮವ್ವ ಹಸುಗೂಸಿನೊಂದಿಗೆ ಘಟನಾ ಸ್ಥಳದಿಂದ ಸ್ವಲ್ಪ ದೂರ ಇದ್ದುದರಿಂದ ಅಪಾಯವಿಲ್ಲದೆ ಪಾರಾಗಿದ್ದಾರೆ.

ಮೃತ ಶಿವಣ್ಣನ ಪತ್ನಿ ಹನುಮವ್ವ ಹಾಗೂ ಪುತ್ತೂರು ನಗರಸಭೆಯಿಂದ ನಗರ ಠಾಣೆಗೆ ದೂರು ನೀಡಲಾಗಿದೆ. ಪರವಾನಿಗೆ ನವೀಕರಣಕ್ಕೆ ಅರ್ಜಿ ನೀಡಿದ್ದು, ಅನುಮತಿ ಪತ್ರ ಸಿಗುವ ಮೊದಲೇ ಕಾಮಗಾರಿ ಆರಂಭಿಸಲಾಗಿದೆ. ಆದ್ದರಿಂದ ಇದು ಅನಧಿಕೃತ ಕಟ್ಟಡ ಎಂಬ ತೀರ್ಮಾನಕ್ಕೆ ನಗರಸಭೆ ಬಂದಿದೆ. ಇದೇ ಆಧಾರದಲ್ಲಿ ಠಾಣೆಗೆ ದೂರು ನೀಡಿದೆ. ಇನ್ನೊಂದೆಡೆ ಕಾರ್ಮಿಕರ ಸುರ ಕ್ಷ ತೆಗೂ ಕ್ರಮ ಕೈಗೊಳ್ಳದೇ ಇರುವುದು ದುರಂತಕ್ಕೆ ಕಾರಣ ಎಂಬ ದೂರು ದಾಖಲಾಗಿದೆ. ಕಟ್ಟಡ ಮಾಲಕರಾದ ಅಜಿತ್‌ ನಾಯಕ್‌ ಹಾಗೂ ಪ್ರಕಾಶ್‌ ನಾಯಕ್‌, ಗುತ್ತಿಗೆದಾರ ಜಾನ್ಸನ್‌ ಹಾಗೂ ಎಂಜಿನಿಯರ್‌ ಸಚಿತಾನಂದ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸುರಕ್ಷತಾ ಪರಿಕರಗಳಿಲ್ಲ
ಕಟ್ಟಡದ ಕಾಮಗಾರಿ ಸಂದರ್ಭದಲ್ಲಿ ಕಾರ್ಮಿಕರ ಸುರಕ್ಷತಾ ದೃಷ್ಟಿಯಿಂದ ಹೆಲ್ಮೆಟ್‌, ಶೂ ಮೊದಲಾದ ಪರಿಕರಗಳನ್ನು ನೀಡಬೇಕು ಎಂಬ ನಿಯಮವಿದೆ. ಆದರೆ ಇದಾವುದನ್ನೂ ಕಾಮಗಾರಿ ವೇಳೆ ಕಾರ್ಮಿಕರಿಗೆ ಪೂರೈಕೆ ಮಾಡಿಲ್ಲ. ಇದನ್ನು ಬಳಸದೇ ಇರುವುದರಿಂದ ಪ್ರಕರಣ ಇನ್ನಷ್ಟು ತೀವ್ರತೆ ಪಡೆದುಕೊಂಡಿದೆ. ಗಂಭೀರ ಗಾಯಗೊಂಡಿರುವ ಮಹಾಂತೇಶ್‌ ಅವರ ತಲೆಗೇ ಬಲವಾದ ಪೆಟ್ಟು ಬಿದ್ದಿದೆ.

ಅವೈಜ್ಞಾನಿಕ ಕಾಮಗಾರಿ
ಬರೆಯನ್ನು 30 ಅಡಿ ಆಳಕ್ಕೆ ಕೊರೆದು ಆವರಣ ಗೋಡೆ ನಿರ್ಮಾಣಕ್ಕೆ ತಯಾರಿ ನಡೆಸಲಾಗಿತ್ತು. ಆವರಣ ಗೋಡೆ ಎಬ್ಬಿಸಲೆಂದು ಬರೆಯನ್ನು ಟೊಳ್ಳಾಗಿ ಕೊರೆದಿರುವುದು ದುರಂತಕ್ಕೆ ಪ್ರಮುಖ ಕಾರಣ. ತಳದಲ್ಲಿ ಬರೆಯನ್ನು ಟೊಳ್ಳಾಗಿ ಕೊರೆದರೆ, ಮೇಲ್ಭಾಗದ ಮಣ್ಣು ಕುಸಿದು ಬೀಳುವುದು ಸಹಜ. ಹೀಗಾಗಿ, ಕಾಮಗಾರಿ ನಿರ್ವಹ ಣೆಯೂ ಅವೈಜ್ಞಾನಿಕವಾಗಿದೆ.

ಅಕ್ರಮ ಕಟ್ಟಡ!
ವರ್ಷಗಳ ಹಿಂದೆ ಕಟ್ಟಡ ಕಾಮಗಾರಿಗಾಗಿ ಪರವಾನಿಗೆ ಪಡೆದುಕೊಳ್ಳಲಾಗಿತ್ತು. ಇದರ ಅವಧಿ 2018ರ ಎಪ್ರಿಲ್‌ 14ಕ್ಕೆ ಕೊನೆಗೊಂಡಿತ್ತು. ಎ. 17ರಂದು ಪರವಾನಿಗೆ ನವೀಕರಣಕ್ಕೆ ಅರ್ಜಿ ನೀಡಿದ್ದು, ಇನ್ನೂ ಪರವಾನಿಗೆ ನೀಡಿರಲಿಲ್ಲ. ಅವಧಿ ಮೀರುವ ದಿನಾಂಕದ ಒಂದು ತಿಂಗಳು ಮೊದಲೇ ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು ಎಂಬ ನಿಯಮವಿದೆ. ಆದ್ದರಿಂದ ಇದನ್ನು ಅನಧಿಕೃತ ಕಟ್ಟಡ ನಿರ್ಮಾಣ ಎಂದು ಪರಿಗಣಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.