ಏಳು ಸಲ ನೋಂದಣಿ ಮಾಡಿಸಿದರೂ ಬರಲಿಲ್ಲ ಆಧಾರ್‌!

Team Udayavani, Jun 24, 2018, 10:44 AM IST

24-june-5.jpg

ಕೆಯ್ಯೂರು: ಸರಕಾರದ ಎಲ್ಲ ಸೌಲಭ್ಯಗಳಿಗೆ ಆಧಾರ್‌ ಕಾರ್ಡ್‌ ಕಡ್ಡಾಯ ಮಾಡಲಾಗಿದೆ. ಆದರೆ, ಆಧಾರ್‌ ನೋಂದಣಿ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳ ಪರಿಹಾರಕ್ಕೆ ಮಾತ್ರ ಇನ್ನೂ ಪರಿಹಾರ ಕಂಡುಕೊಂಡಿಲ್ಲ. ಶಾಲೆಯ ವಿದ್ಯಾರ್ಥಿಯೊಬ್ಬ ಏಳು ಸಲ ಫೋಟೋ ತೆಗೆಸಿ, ಆಧಾರ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೂ ಆತನಿಗೆ ಇನ್ನೂ ಆಧಾರ್‌ ಗುರುತಿನ ಚೀಟಿ ಬಂದಿಲ್ಲ. ಆನ್‌ ಲೈನ್‌ನಲ್ಲಿ ನೋಂದಣಿ ಮಾಡಿ ಐದು ವರ್ಷಗಳಿಂದ ಪ್ರಯತ್ನಿಸುತ್ತಿದ್ದರೂ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಅಬ್ದುಲ್‌ ಹಮೀದ್‌ ಅವರ ಪುತ್ರ ಮಹಮ್ಮದ್‌ ಫಯಾಜ್‌ (12) ಎಂಬ ಬಾಲಕನಿಗೆ ಸಮಸ್ಯೆಯಾಗುತ್ತಿದೆ.

ಪ್ರಸ್ತುತ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಏಳನೇ ತರಗತಿಯಲ್ಲಿ ಕಲಿಯುತ್ತಿರುವ ಮಹಮ್ಮದ್‌ ಫಯಾಜ್‌ನ ಕುಟುಂಬದವರು 6 ವರ್ಷಗಳ ಹಿಂದೆ ಮೊದಲ ಬಾರಿ ಆಧಾರ್‌ ಕಾರ್ಡ್‌ಗೆ ಅರ್ಜಿ ನೋಂದಣಿ ಮಾಡಿದ್ದರು. ಪತಿ- ಪತ್ನಿ, ನಾಲ್ವರು ಮಕ್ಕಳು ಸಹಿತ ಆರು ಜನರ ಫೋಟೋ, ಬಯೋಮೆಟ್ರಿಕ್‌ ನೀಡಲಾಗಿತ್ತು. ಆನ್‌ಲೈನ್‌ ಅರ್ಜಿ ಭರ್ತಿ ಮಾಡಿದ್ದರಲ್ಲಿ ಮಹಮ್ಮದ್‌ ಫ‌ಯಾಜ್‌ ಹೊರತುಪಡಿಸಿ, ಕುಟುಂಬದ ಇತರ ಐವರು ಸದಸ್ಯರಿಗೆ ಕೆಲವೇ ಸಮಯದಲ್ಲಿ ಆಧಾರ್‌ ಕಾರ್ಡ್ ಗಳು ಬಂದವು.

ಆನ್‌ಲೈನ್‌ನಲ್ಲಿ ಪರಿಶೀಲಿಸಿದಾಗ ಅರ್ಜಿ ತಿರಸ್ಕೃತವಾಗಿದೆ ಎಂಬ ಹಿಂಬರಹವಿತ್ತು. ಮೊದಲ ಬಾರಿ ಕೆಯ್ಯೂರು
ಗ್ರಾ.ಪಂ. ಕಚೇರಿಯಲ್ಲಿ ಆಧಾರ್‌ ನೋಂದಣಿ ಮಾಡಲಾಯಿತು. ಇದಾದ ಬಳಿಕ ಪ್ರಗತಿ ಶಾಲೆಯಲ್ಲಿ 1 ಬಾರಿ, ಪುತ್ತೂರು ಪುರಭವನದ ನೋಂದಣಿ ಕಚೇರಿಯಲ್ಲಿ 2 ಬಾರಿ, ಮಿನಿ ವಿಧಾನಸೌಧದಲ್ಲಿ 1 ಬಾರಿ, ಡಿಸಿಸಿ ಬ್ಯಾಂಕ್‌ ಸಮೀಪದ ನೋಂದಣಿ ಕೇಂದ್ರದಲ್ಲಿ 1 ಬಾರಿ ನೋಂದಣಿ ಮಾಡಲಾಗಿದೆ. ಮತ್ತೆ ಮತ್ತೆ ಪ್ರಯತ್ನಿಸಿದೆ. ಎ. 28ರಂದು ಏಳನೇ ಬಾರಿಗೆ ಅಂಚೆ ಕಚೇರಿಯಲ್ಲಿ ನೋಂದಣಿ ಮಾಡಿಸಿದೆ. ಎರಡು ತಿಂಗಳು ಕಳೆಯುತ್ತ ಬಂದರೂ ಆಧಾರ್‌ ಕಾರ್ಡ್‌ ಬರಲಿಲ್ಲ. ಈಗ ನೋಡಿದರೂ ಅದೇ ಉತ್ತರ. ಏನು ಮಾಡುವುದು ಎಂದು ಬಾಲಕನ ತಂದೆ ಅಬ್ದುಲ್‌ ಹಮೀದ್‌ ಪ್ರಶ್ನಿಸುತ್ತಾರೆ.

ವಿಳಾಸ ಸಹಿತ ಎಲ್ಲ ಮಾಹಿತಿಯೂ ಸರಿಯಾಗಿದೆ. ಏಳು ಬಾರಿ ನೋಂದಣಿ ಮಾಡಿದಾಗ ಸಿಕ್ಕಿದ ಸ್ವೀಕೃತಿಯೂ ಇದೆ. ಕುಟುಂಬದ ಇತರರಿಗೆ ಆಧಾರ್‌ ಗುರುತಿನ ಚೀಟಿ ಬಂದಿರುವಾಗ ನನ್ನ ಮಗನಿಗೆ ಕೊಡಲು ಏನು ಅಡ್ಡಿ? ಶಾಲೆಯಲ್ಲಿ ಆಧಾರ್‌ ಕಾರ್ಡ್‌ ಬೇಕೆಂದು ಹೇಳುತ್ತಿದ್ದಾರೆ. ಅವರಿಗೆ ಸ್ವೀಕೃತಿಯನ್ನಷ್ಟೇ ನೀಡಿದ್ದೇನೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (ಯುಐಡಿಎಐ) ಬೆಂಗಳೂರು ಕಚೇರಿಯನ್ನು ಸಂಪರ್ಕಿಸಿ ನೋಂದಣಿ ಸಂಖ್ಯೆ ನೀಡಿದರೆ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ ಎಂಬ ಸಲಹೆ ಮಿತ್ರರಿಂದ ಬಂದಿದೆ. ಆ ಪ್ರಯತ್ನವನ್ನೂ ಮಾಡುತ್ತೇವೆ ಎಂದು ಹಮೀದ್‌ ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.