ಕಾಣಿಯೂರು-ಮಾದೋಡಿ-ಬೆಳ್ಳಾರೆ ಸಂಪರ್ಕ ರಸ್ತೆ ಬ್ಲಾಕ್‌


Team Udayavani, Jul 14, 2018, 2:25 AM IST

kaniyuru-road-13-7.jpg

ಕಾಣಿಯೂರು: ಮಳೆಗಾಲ ಆರಂಭವಾಯಿತೆಂದರೆ ಕಾಣಿಯೂರು- ಮಾದೋಡಿ – ಪೆರುವಾಜೆ – ಬೆಳ್ಳಾರೆ ಹಾಗೂ ಕಾಣಿಯೂರು – ನೀರಜರಿ- ಅಬೀರ ಸಂಪರ್ಕ ರಸ್ತೆ ಯಾವ ಹೊತ್ತಿಗೆ ಬ್ಲಾಕ್‌ ಆಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಈ ಸಂಪರ್ಕ ರಸ್ತೆಯ ಮೂಲಕ ಸಂಚರಿಸುವ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕುತ್ತಿದ್ದಾರೆ. ಸೇತುವೆಯ ಬದಿಯಲ್ಲಿ ತಡೆಗೋಡೆ ರಚನೆಗೆ ರೈಲ್ವೇ ಇಲಾಖೆಯೇ ತೊಡಕಾಗಿದೆ. ಅನುದಾನ ಮಂಜೂರಾದರೂ ಕಾಮಗಾರಿ ನಡೆಸಲು ಅನುಮತಿ ಸಿಗದ ಕಾರಣ ತಡೆಗೋಡೆ ನಿರ್ಮಾಣವಾಗಿಲ್ಲ. 

ಕಾಣಿಯೂರಿನಿಂದ ಸ್ವಲ್ಪ ದೂರದ ರೈಲ್ವೇ ಸೇತುವೆಯ ಕೆಳಭಾಗದಲ್ಲಿ ರಸ್ತೆಯ ಪಕ್ಕದಲ್ಲಿಯೇ ಹೊಳೆ ಇದೆ. ಇಲ್ಲಿ ಪ್ರತಿ ಬಾರಿಯ ಮಳೆಗಾಲದಲ್ಲಿ ರಸ್ತೆ ಮುಳುಗಡೆಯಾಗುವುದು ಸಾಮಾನ್ಯ. ಭಾರೀ ಮಳೆಯಿಂದ ಬಂದ ನೆರೆ ನೀರಿಗೆ ಕಾಂಕ್ರೀಟ್‌ ರಸ್ತೆ ಮತ್ತು ತಡೆಗೋಡೆ ಕೊಚ್ಚಿ ಹೋಗಿದೆ. ಈ ಸಂಪರ್ಕ ರಸ್ತೆಯಲ್ಲಿ ತಿರುವು ಕೂಡ ಇದ್ದು, ರಾತ್ರಿ ಹೊತ್ತು ಇಲ್ಲಿ ಅಪಾಯ ಕಟ್ಟಿಟ್ಟ  ಬುತ್ತಿ. ಪಾದಚಾರಿಗಳಿಗೂ ಅಪಾಯವಿದೆ.

ಕಳಪೆ ಕಾಮಗಾರಿ
1996ರಲ್ಲಿ ರೈಲು ಮಾರ್ಗವು ಮೀಟರ್‌ ಗ್ರೇಜ್‌ ನಿಂದ ಬ್ರಾಡ್‌ಗೇಜ್‌ ಗೆ ಪರಿವರ್ತನೆಯಾಗುವ ಸಂದರ್ಭ ಕಾಣಿಯೂರು – ಮಾದೋಡಿ ಜಿ.ಪಂ. ರಸ್ತೆಯನ್ನು ಬಂದ್‌ ಮಾಡಿ ಪರ್ಯಾಯ ರಸ್ತೆಯಾಗಿ ಈ ರಸ್ತೆಯನ್ನು ರೈಲ್ವೇ ಇಲಾಖೆಯವರೇ ನಿರ್ಮಿಸಿದ್ದರು. ರಸ್ತೆಯನ್ನು ಬಂದ್‌ ಮಾಡಬಾರದಾಗಿ ಊರಿನವರು ಆ ಸಂದರ್ಭ ಪ್ರತಿಭಟಿಸಿದ್ದರು. ಆ ಕಾರಣಕ್ಕಾಗಿ ರೈಲ್ವೇ ಸೇತುವೆಯ ಕೆಲಭಾಗದಲ್ಲಿ ಹೊಳೆ ಬದಿಗೆ ತಡೆಗೋಡೆಯನ್ನು ನಿರ್ಮಿಸಿ ಕೊಟ್ಟಿದ್ದರು. ಕಾಮಗಾರಿ ಕಳಪೆಯಾದ ಕಾರಣ ರಸ್ತೆಯ ತಡೆಗೋಡೆಯು ಮಳೆ ನೀರಿಗೆ ಕೊಚ್ಚಿಕೊಂಡು ಹೋಯಿತು. ಜನಪ್ರತಿನಿಧಿಗಳು ಹಾಗೂ ರೈಲ್ವೇ ಇಲಾಖೆಗೆ ಹಲವು ಬಾರಿ ಮನವಿ ಮಾಡ ಲಾಯಿತಾದರೂ ಪರಿಣಾಮ ಶೂನ್ಯ. ಇದರಿಂದಾಗಿ ಹಲವಾರು ದ್ವಿಚಕ್ರ ಹಾಗೂ ಇತರ ವಾಹನಗಳು ಹೊಳೆಗೆ ಬಿದ್ದ ಘಟನೆಗಳು ಕಣ್ಣ ಮುಂದಿವೆ.


ತಡೆಗೋಡೆಗೆ ಆಗ್ರಹ

ಕಾಣಿಯೂರು – ಮಾದೋಡಿ- ಬೆಳ್ಳಾರೆ ಸಂಪರ್ಕ ರಸ್ತೆ ಮಾತ್ರವಲ್ಲದೇ ಕಾಣಿಯೂರು – ನೀರಜರಿ-ಅಬೀರ ರಸ್ತೆಯ ಮೂಲಕ ಬೆಳ್ಳಾರೆಗೆ ಸಂಪರ್ಕ ಹೊದಿರುವ ರಸ್ತೆಯೂ ಇದಾಗಿದೆ. ಕಾಣಿಯೂರು-ಪೆರ್ಲೋಡಿಗೆ ಸಂಪರ್ಕ ರಸ್ತೆಯೂ ಇದಾಗಿದೆ. ಈ ರಸ್ತೆಗೆ ಸಮರ್ಪಕವಾದ ಡಾಮರು ಕಾಮಗಾರಿ ಹಾಗೂ ಮಳೆಗಾಲದಲ್ಲಿ ರಸ್ತೆಗೆ ನೀರು ಬರದಂತೆ ತಡೆಯಲು ಹೊಳೆಗೆ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ಮತ್ತು ವಾಹನಗಳಿಗೆ ಬರಬಹುದಾದ ಅಪಾಯವನ್ನು ತಪ್ಪಿಸಬೇಕು ಎನ್ನುವುದು ಸ್ಥಳೀಯರ ಆಗ್ರಹ. 

5 ಲ.ರೂ. ಅನುದಾನ ಇಟ್ಟಿದ್ದೆ; ಅನುಮತಿ ಸಿಕ್ಕಿಲ್ಲ
ರೈಲ್ವೇ ಸೇತುವೆಯ ಕೆಲಭಾಗದಲ್ಲಿ ಹೊಳೆ ಬದಿಗೆ ತಡೆಗೋಡೆ ರಚನೆ ಮಾಡುವ ಉದ್ದೇಶದಿಂದ ಅಪಘಾತ ವಲಯಕ್ಕೆ ಸಂಬಂಧಪಟ್ಟ ಅನುದಾನವನ್ನು ಬಳಸಿ ತಡೆಗೋಡೆ ರಚನೆ ಮಾಡುವ ಸಂದರ್ಭದಲ್ಲಿ ರೈಲ್ವೇ ಇಲಾಖೆಯಿಂದ ತಡೆ ಉಂಟಾದ ಕಾರಣ ಅನುದಾನವನ್ನು ಬೇರೆ ಕಡೆಗೆ ವಿನಿಯೋಗಿಸಲಾಗಿದೆ. ಇದು ರೈಲ್ವೇ ಇಲಾಖೆಯವರೇ ಮಾಡಬೇಕಾದ ಕಾಮಗಾರಿಯಾಗಿದ್ದರೂ ನಾನಿಟ್ಟ ಅನುದಾನದಲ್ಲಿ ಕಾಮಗಾರಿ ನಡೆಸಲು ತಡೆ ಉಂಟು ಮಾಡಿರುವುದು ಬೇಸರದ ವಿಚಾರವಾಗಿದೆ. ರೈಲ್ವೇ ಇಲಾಖೆಯಿಂದ ಅನುಮತಿ ದೊರಕಿಸಿಕೊಡಬೇಕು ಎಂದು ಸಂಸದ ನಳಿನ್‌ಕುಮಾರ್‌ ಕಟೀಲು ಅವರಿಗೆ ವಿನಂತಿಸಲಾಗಿದೆ.
– ಪ್ರಮೀಳಾ ಜನಾರ್ದನ, ಸದಸ್ಯರು, ಜಿ.ಪಂ. ಬೆಳಂದೂರು ಕ್ಷೇತ್ರ

ಪತ್ರ ಬಂದಿಲ್ಲ
ತಡೆಗೋಡೆ ರಚನೆಗೆ ಅನುಮತಿ ನೀಡುವಂತೆ ರೈಲ್ವೇ ಇಲಾಖೆಗೆ ಜಿ.ಪಂ.ನಿಂದ ಯಾವುದೇ ಪತ್ರ ಬಂದಿಲ್ಲ. ಪತ್ರ ಬಂದ ಅನಂತರ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು. 
– ಪಿ.ಕೆ. ನಾಯ್ಡು, ಸೆಕ್ಷನ್‌ ಎಂಜಿನಿಯರ್‌, ರೈಲ್ವೇ ಇಲಾಖೆ

ಇಲಾಖೆಗೆ ಪತ್ರ ಕಳುಹಿಸಲಾಗಿದೆ
ಕಾಣಿಯೂರು-ಮಾದೋಡಿ ಸಂಪರ್ಕ ರಸ್ತೆಯು ಹೊಳೆ ಬದಿಯಲ್ಲಿ ಹಾದು ಹೋಗುತ್ತಿದ್ದು, ಈ ಭಾಗದಲ್ಲಿ ವಾಹನ ಸಂಚಾರವಿದೆ. ಶಾಲಾ ಮಕ್ಕಳು ಹೋಗುತ್ತಾರೆ. ಖಂಡಿತವಾಗಿಯೂ ಈ ಸ್ಥಳ ಅಪಾಯಕಾರಿಯಾಗಿದೆ. ಈ ಬಗ್ಗೆ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾವಿಸಿ ನಿರ್ಣಯ ಮಾಡಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ.
– ಜಯಂತ ಅಬೀರ ಬೆಳಂದೂರು ಗ್ರಾ.ಪಂ. ಸದಸ್ಯರು

— ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.