CONNECT WITH US  

ಆಟಿ ಅಮಾವಾಸ್ಯೆ ತೀರ್ಥಸ್ನಾನ, ಭಕ್ತ ಜನಸಾಗರ 

 ಮಹತೋಭಾರ ಶ್ರೀ ಕಾರಿಂಜೇಶ್ವರ ಕ್ಷೇತ

ಕಾರಿಂಜೇಶ್ವರ ದೇವಸ್ಥಾನದಲ್ಲಿ ಭಕ್ತ ಜನಸಾಗರ

ಪುಂಜಾಲಕಟ್ಟೆ: ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಶನಿವಾರ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ ಜರಗಿತು. ಸಾವಿರಾರು ಭಕ್ತರು ಆಗಮಿಸಿ ಇಲ್ಲಿನ ಗದಾತೀರ್ಥ, ಉಂಗುಷ್ಠ ತೀರ್ಥ ಹಾಗೂ ಜಾನು ತೀರ್ಥಗಳೆಂಬ ಕೆರೆಗಳಲ್ಲಿ ತೀರ್ಥಸ್ನಾನ ಮಾಡಿ ಬಾಗಿನ ಅರ್ಪಿಸಿದರು. ಬಳಿಕ ಶ್ರೀ ಪಾರ್ವತೀ-ಪರಮೇಶ್ವರರನ್ನು ದರ್ಶಿಸಿ ಪ್ರಸಾದ ಸ್ವೀಕರಿಸಿದರು.

ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್‌, ತಾಲೂಕು ಅಕ್ರಮ ಸಕ್ರಮ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್‌, ಕಾವಳಪಡೂರು ಗ್ರಾ.ಪಂ. ಅಧ್ಯಕ್ಷ ಪ್ರಮೋದ್‌ ಕುಮಾರ್‌ ರೈ, ಮಾಜಿ ಅಧ್ಯಕ್ಷ ಮಾಣಿಕ್ಯರಾಜ್‌ ಜೈನ್‌, ಪಂಜಿಕಲ್ಲು ಗರಡಿ ಸಮಿತಿಯ ಶ್ರೀ ಪ್ರಕಾಶ್‌ ಜೈನ್‌, ಗ್ರಾ.ಪಂ. ಸದಸ್ಯ ಚಂದ್ರಶೇಖರ ಕರ್ಣ ಮೊದಲಾದವರು ಆಗಮಿಸಿದ್ದರು.

ಶ್ರೀಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ. ಜಿನರಾಜ ಆರಿಗ, ಸಮಿತಿ ಸದಸ್ಯರಾದ ಜನಾರ್ದನ ಆಚಾರ್ಯ ಬಾಳ್ತಬೈಲ್‌, ಸದಾಶಿವ ಪ್ರಭು, ಕೃಷ್ಣಪ್ಪ ಗೌಡ ತಾಳಿತ್ತೂಟ್ಟು, ವಿಶ್ವನಾಥ ಪೂಜಾರಿ ಪೀರ್ಯ, ವೆಂಕಪ್ಪ ನಾಯ್ಕ ಕಾರಿಂಜಬೈಲ್‌, ಸುಜಲಾ ಶೆಟ್ಟಿ, ಸವಿತಾ, ವ್ಯವಸ್ಥಾಪಕ ಸತೀಶ್‌ ಪ್ರಭು, ಸುಭಾಷ್‌ ಹೆಗ್ಡೆ, ಧನಂಜಯ ಹೆಗ್ಡೆ, ರಾಜ್‌ ಪ್ರಸಾದ್‌ ಆರಿಗ ಮತ್ತಿತರರು ಉಪಸ್ಥಿತರಿದ್ದರು.

ಆಟಿ ಅಮವಾಸ್ಯೆ ಪ್ರಯುಕ್ತ ವಾಹನ ದಟ್ಟಣೆ ಹೆಚ್ಚಾಗಿದ್ದು, ಬಂಟ್ವಾಳ ಗ್ರಾಮಾಂತರ ಮತ್ತು ಪುಂಜಾಲಕಟ್ಟೆ ಪೊಲೀಸರು ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ಕುಮಾರ್‌, ಸತೀಶ್‌ ಬಲ್ಲಾಳ್‌ ಉಪಸ್ಥಿತಿಯಲ್ಲಿ ವಾಹನ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದರು.

ಪುಣ್ಯಸ್ನಾನ 
ನವದಂಪತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಪುಣ್ಯಸ್ನಾನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ದಲ್ಲಿ ಪೂಜಾ ಕಾರ್ಯಕ್ರಮಗಳು ಜರಗಿದವು. ಮುಂಜಾನೆ ಸುಮಾರು 3 ಗಂಟೆಯಿಂದ ದೇವರ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

Trending videos

Back to Top