ಅವಕಾಶ ಬಳಸಿಕೊಂಡು ಬೆಳೆಯಿರಿ: ಅಜಿತ್‌


Team Udayavani, Aug 21, 2018, 2:30 AM IST

ajith-20-8.jpg

ವಿಟ್ಲ : ಕಷ್ಟವನ್ನು ಅರಿತವರಿಗೆ ಸಹಾಯ ಮಾಡುವ ಮನಸ್ಸು ಇರುತ್ತದೆ. ವಿದ್ಯಾರ್ಥಿಗಳು ಅವಕಾಶಗಳನ್ನು ಬಳಸಿಕೊಂಡು ಎತ್ತರಕ್ಕೆ ಏರಬೇಕು. ಕನ್ನಡ ಮಾಧ್ಯಮದಲ್ಲಿ ಓದಿದರೂ ಎತ್ತರಕ್ಕೇರಲು ಸಾಧ್ಯ ಎಂದು ಬೆಂಗಳೂರು ಸುಪ್ರಜಿತ್‌ ಫೌಂಡೇಶನ್‌ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಹೇಳಿದರು. ರವಿವಾರ ವಿಟ್ಲದ ವಿಟ್ಠಲ ಪ.ಪೂ. ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಬೆಂಗಳೂರು ಸುಪ್ರಜಿತ್‌ ಎಂಜಿನಿಯರಿಂಗ್‌ ಲಿಮಿಟೆಡ್‌ನ‌ ಸುಪ್ರಜಿತ್‌ ಫೌಂಡೇಶನ್‌ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಟ್ಲದಲ್ಲಿ ಆರಂಭಿಸಿದಾಗ ಈ ವಿದ್ಯಾರ್ಥಿವೇತನ ವಿತರಣೆ ಯೋಜನೆ ಸಣ್ಣ ಯೋಚನೆಯದಾಗಿತ್ತು. ಇಂದು ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ಲಭಿಸುವಂತಾಗಿದೆ. ಮಳೆಗಾಲದಲ್ಲೂ ಮನೆ ಮನೆಗೆ ತೆರಳಿ ಅರ್ಹ ಫಲಾನುಭವಿಯನ್ನು ಆಯ್ಕೆ ಮಾಡುವ ಶಿಕ್ಷಕರ ಶ್ರಮ ಮೆಚ್ಚು ವಂಥದ್ದು ಎಂದರು.

ವಿದ್ಯಾರ್ಥಿವೇತನ ವಿತರಣೆ ಸಮಿತಿ ಅಧ್ಯಕ್ಷ ಎಂ. ಅನಂತಕೃಷ್ಣ ಹೆಬ್ಟಾರ್‌ ಮಾತನಾಡಿ, 2012ರಲ್ಲಿ 61 ಮಕ್ಕಳಿಗೆ ನೆರವು ನೀಡುವ ಮೂಲಕ ವಿದ್ಯಾರ್ಥಿ ವೇತನ ವಿತರಣೆ ಆರಂಭಿಸಲಾಗಿತ್ತು. 2018ರಲ್ಲಿ 575 ವಿದ್ಯಾರ್ಥಿಗಳಿಗೆ ಸುಮಾರು 34.13 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಗುತ್ತಿದೆ. 7 ವರ್ಷಗಳಲ್ಲಿ ಒಟ್ಟು 2,409 ಫಲಾನುಭವಿಗಳಿಗೆ 1.35 ಕೋಟಿ ರೂ. ವಿತರಿಸಲಾಗಿದೆ ಎಂದು ಹೇಳಿದರು.

ಉದ್ಯಮಿ ಸುಬ್ರಾಯ ಪೈ, ವಿಟ್ಠಲ ವಿದ್ಯಾ ಸಂಘದ ಸಂಚಾಲಕ ಎಲ್‌.ಎನ್‌. ಕೂಡೂರು ಮಾತನಾಡಿದರು. ಶಿಕ್ಷಕರಾದ ಚಂದ್ರಕಾಂತ ಡಿ., ಲಕ್ಷ್ಮಣ ನಾಯಕ್‌, ರಮೇಶ್‌ ಬಿ.ಕೆ., ಪ್ರಕಾಶ್‌ ನಾಯಕ್‌, ಸುಶೀಲಾ ಶಂಭೂರು, ಶ್ರೀಪತಿ ನಾಯಕ್‌, ಮಹೇಶ್‌ ಕೆ., ರಾಜಶೇಖರ, ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ವಿದ್ಯಾರ್ಥಿ ವೇತನ ಪಡೆದವರ ಪಟ್ಟಿ ಓದಿದರು. 2012ರಿಂದ ಸತತವಾಗಿ ವಿದ್ಯಾರ್ಥಿವೇತನ ಪಡೆಯುತ್ತಿರುವ ವಿದ್ಯಾ ಸರಸ್ವತಿ, ಜಸ್ಟಿನ್‌ ಲೂಯಿಸ್‌, ಶಿಲ್ಪಾ ಕೆ., ಪೂರ್ಣಿಮಾ ಪಿ.ಬಿ. ಅನಿಸಿಕೆ ವ್ಯಕ್ತಪಡಿಸಿದರು.ವಿಟ್ಠಲ ಪ.ಪೂ. ಕಾಲೇಜು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿ, ವಿಟ್ಠಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್‌ ಕುಮಾರ್‌ ಬ್ರಹ್ಮಾವರ ವಂದಿಸಿದರು. ಉಪನ್ಯಾಸಕ ಅಣ್ಣಪ್ಪ ಸಾಸ್ತಾನ ನಿರೂಪಿಸಿದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.