ಹಲೆಪ್ಪಾಡಿ-ಕುಂಟಲಪಲ್ಕೆ ರಸ್ತೆ ಕೆಸರುಮಯ
Team Udayavani, Aug 30, 2018, 11:24 AM IST
ಪುಂಜಾಲಕಟ್ಟೆ: ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ-ಕುಂಟಲಪಲ್ಕೆ ರಸ್ತೆ ಕೆಸರುಮಯವಾಗಿದ್ದು, ಜನ ಮತ್ತು ವಾಹನ ಸಂಚಾರಕ್ಕೆ ತೊಡಕನ್ನುಂಟು ಮಾಡಿದೆ. ಶೀಘ್ರ ದುರಸ್ತಿ ಕಾಮಗಾರಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪಾಂಗಲ್ಪಾಡಿಯಿಂದ ಕುಡಂಬೆಟ್ಟನ್ನು ಸಂಪರ್ಕಿಸುವ ಸುಮಾರು ಒಂದೂವರೆ ಕಿ.ಮೀ. ದೂರದ ಮಣ್ಣಿನ ಈ ಕಚ್ಛಾ ರಸ್ತೆಯನ್ನು ಅಭಿವೃದ್ಧಿಗೊಳಿಸಿ ಡಾಮರು ರಸ್ತೆಯಾಗಿ ಪರಿವರ್ತಿಸಬೇಕೆಂದು ಗ್ರಾಮಸ್ಥರು ಬಹಳ ವರ್ಷಗಳಿಂದ ಬೇಡಿಕೆ ಸಲ್ಲಿಸಿದ್ದರೂ ಕೈಗೂಡಿಲ್ಲ.
ಮನವಿಗೆ ಸ್ಪಂದನೆಯಿಲ್ಲ
ಈ ಭಾಗದಲ್ಲಿ ಸುಮಾರು 30ಕ್ಕೂ ಅಧಿಕ ಮನೆಗಳಿದ್ದು, ಇಲ್ಲಿಯ ಜನರು ವಿವಿಧ ಭಾಗಗಳಿಗೆ ತೆರಳಲು ಈ ರಸ್ತೆಯನ್ನೇ ಬಳಸುತ್ತಾರೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಗ್ರಾಮಸ್ಥರು ಈ ರಸ್ತೆಯಲ್ಲಿ ನಡೆದುಕೊಂಡು ಸಾಗುತ್ತಾರೆ. ಇದೀಗ ರಸ್ತೆ ಕೆಸರುಮಯವಾಗಿ ಸಂಚಾರ ಅಸಾಧ್ಯವಾಗಿದೆ. ಈ ಬಗ್ಗೆ ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲವೆಂದು ಗ್ರಾಮಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ