‘ತ್ಯಾಗ, ಪ್ರೀತಿ, ಭ್ರಾತೃತ್ವ  ಪ್ರತಿ ಕುಟುಂಬಕ್ಕೆ  ಆದರ್ಶ’

Team Udayavani, Sep 9, 2018, 11:21 AM IST

9-sepctember-8.jpg

ಪುತ್ತೂರು: ಮೇರಿ ಮಾತೆಯ ಧನಾತ್ಮಕತೆ, ಪ್ರೀತಿ, ತ್ಯಾಗ ಹಾಗೂ ಭ್ರಾತೃತ್ವದ ಚಿಂತನೆಗಳನ್ನು ನಮ್ಮ ಕುಟುಂಬದಲ್ಲಿ ಅಳವಡಿಸುತ್ತಾ ಸಮಾಜದಲ್ಲಿ ಆದರ್ಶವಾಗಿ ಜೀವಿಸಬೇಕು ಎಂದು ಮಾಯಿದೆ ದೇವುಸ್‌ ಚರ್ಚ್‌ನ ಸಹಾಯಕ ಧರ್ಮಗುರು ವಂ| ಪ್ರವೀಣ್‌ ಡಿ’ಸೋಜಾ ಹೇಳಿದರು.

ಪುತ್ತೂರು ಮಾಯಿದೆ ದೇವುಸ್‌ ಚರ್ಚ್‌ನಲ್ಲಿ ಶನಿವಾರ ನಡೆದ ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮ ದಿನವನ್ನು ಸಾರುವ ‘ಮೊಂತಿ ಫೆಸ್ತ್-ಕುಟುಂಬದ ಹಬ್ಬದಲ್ಲಿ ಬೈಬಲ್‌ ವಾಚಿಸಿ ಹಬ್ಬದ ಸಂದೇಶ ನೀಡಿದರು. ತ್ಯಾಗವೇ ಪರಿಪೂರ್ಣ ಜೀವನಕ್ಕೆ ದಾರಿ. ಸಮಾಜದಲ್ಲಿ ಜೀವಿಸುವಾಗ ನಾವು ಇತರರಿಗೆ ಆದರ್ಶರಾಗಿ ಬಾಳುತ್ತಾ, ಪರಸ್ಪರ ಹೊಂದಾಣಿಕೆಯಲ್ಲಿ ಸಾಗುತ್ತಾ, ಸಹೋದರತ್ವ ಭಾವನೆಯಿಂದ ಎಲ್ಲರನ್ನು ನೋಡುವಂತಾದಾಗ ಇತರರು ನಮ್ಮನ್ನು ಅನುಕರಿಸಲು ಶಕ್ತರಾಗುತ್ತಾರೆ. ತಂದೆ- ತಾಯಿಯನ್ನು ಗೌರವದಿಂದ ಕಾಣುವುದೇ ಮೇರಿ ಮಾತೆಗೆ ನಮನ ಸಲ್ಲಿಸಿದಂತೆ ಎಂದರು.

ಪ್ರಧಾನ ಧರ್ಮಗುರು ವಂ| ಆಲ್ಫ್ರೆಡ್ ಜಾನ್‌ ಪಿಂಟೊ ಅವರು ದಿವ್ಯ ಬಲಿಪೂಜೆಯ ನೇತೃತ್ವ ವಹಿಸಿದ್ದರು. ಸಹಾಯಕ ಧರ್ಮಗುರು ವಂ| ಪ್ರವೀಣ್‌ ಡಿ’ಸೋಜಾ ಅವರು ಭತ್ತದ ತೆನೆಗಳನ್ನು ಶುದ್ಧೀಕರಿಸಿ, ಆಶೀರ್ವಚಿಸಿದರು. ವಂ| ವಲೇರಿಯನ್‌ ಮಸ್ಕರೇನ್ಹಸ್‌ ಮಿತ್ತೂರು ಅವರು ಬಲಿಪೂಜೆಯಲ್ಲಿ ಪಾಲ್ಗೊಂಡರು. ಚರ್ಚ್‌ ಪಾಲನ ಸಮಿತಿಯ ಉಪಾಧ್ಯಕ್ಷ ಜೆ.ಪಿ. ರೋಡ್ರಿಗಸ್‌, ಕಾರ್ಯದರ್ಶಿ ಫೆಬಿಯನ್‌ ಗೋವಿಯಸ್‌, ಚರ್ಚ್‌ ಸ್ಯಾಕ್ರಿಸ್ಟಿಯನ್‌ ಬ್ಯಾಪ್ಟಿಸ್ಟ್‌ ತಾವ್ರೊ, ಗಾಯನ ಮಂಡಳಿ ಸದಸ್ಯರು, ವೇದಿ ಸೇವಕರು, ವಾಳೆ ಗುರಿಕಾರರು ಸಹಕರಿಸಿದರು. 

ಮರೀಲ್‌ ಸೇಕ್ರೆಡ್‌ ಹಾರ್ಟ್‌ ಚರ್ಚ್‌ನಲ್ಲಿ ಬೆದ್ರಾಳ-ಕಾಡುಮನೆ ಪರಿಸರದ ಕ್ರೈಸ್ತ ಬಾಂಧವರು ಹೊಸ ಧಾನ್ಯಗಳ, ಭತ್ತದ ತೆನೆಯ ಜೊತೆಗೆ ಭಕ್ತಿ ಮೆರವಣಿಗೆ ಮೂಲಕ ಚರ್ಚ್ಗೆ ಆಗಮಿಸಿದರು. ಬನ್ನೂರು ಸಂತ ಅಂತೋನಿ ಚರ್ಚ್‌ನಲ್ಲಿ ಚರ್ಚ್‌ನ ಪ್ರವೇಶ ದ್ವಾರದಲ್ಲಿನ ಮರಿಯಮ್ಮರವರ ಗ್ರೊಟ್ಟೊ ಬಳಿಯಲ್ಲಿ ಭತ್ತದ ತೆನೆಗಳಿಗೆ ಪ್ರಧಾನ ಧರ್ಮಗುರು ವಂ| ಪ್ರಶಾಂತ್‌ ಫೆರ್ನಾಂಡೀಸ್‌ ಅವರು ಪವಿತ್ರ ಜಲ ಸಂಪ್ರೋಕ್ಷಿಸಿ ಆಶೀರ್ವಚಿಸಿದರು. ಹೂವು ತಂದ ಮಕ್ಕಳಿಗೆ ಕಬ್ಬು ವಿತರಿಸಲಾಯಿತು. ಹಬ್ಬದ ಇನ್ನೊಂದು ವಿಶೇಷವೆಂದರೆ ಹೊಸ ಅಕ್ಕಿ ಊಟ. ತೆನೆಯನ್ನು ಮೆರವಣಿಗೆಯ ಮೂಲಕ ಒಳಗೆ ತಂದು ಧರ್ಮಗುರುಗಳಿಂದ ಆಶೀರ್ವಾದ ಪಡೆದು, ಮನೆಗೆ ಕೊಂಡೊಯ್ಯಲಾಗುತ್ತದೆ. ಮನೆಯಲ್ಲಿ ಮೇಣದ ಬತ್ತಿಯನ್ನು ಉರಿಸಿ ಆ ಭತ್ತದ ತೆನೆಯನ್ನು ಬೆಸ ಸಂಖ್ಯೆ ಆಧಾರದಲ್ಲಿ ಪುಡಿ ಮಾಡಿ ಹಾಲು ಅಥವಾ ಪಾಯಸದಲ್ಲಿ ಸೇರಿಸಿ ಮನೆಯ ಎಲ್ಲ ಸದಸ್ಯರು ಸೇವಿಸುತ್ತಾರೆ. ಅಂದಿನ ಹಬ್ಬದ ಎಲ್ಲ ಅಡುಗೆ ಸಸ್ಯಾಹಾರವಾಗಿದ್ದು, ಬೆಸ ಸಂಖ್ಯೆ ಆಧಾರದಲ್ಲಿರುತ್ತದೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.