ಅರಂತೋಡು-ತೊಡಿಕಾನ ರಸ್ತೆ: ಕುಸಿದ ಮೋರಿಗಳು

Team Udayavani, Sep 10, 2018, 11:55 AM IST

secptember-7.jpg

ಅರಂತೋಡು: ಸುಳ್ಯ ತಾಲೂಕಿನ ಅರಂತೋಡು – ತೊಡಿಕಾನ ಸಂಪರ್ಕ ರಸ್ತೆಯ ಮೋರಿಗಳೆರಡು ಕಲ್ಲಂಬಳ ಸಮೀಪ ಕುಸಿತಗೊಂಡು ರಸ್ತೆ ನಾದುರಸ್ತಿಯಲ್ಲಿದ್ದು, ಗಮನ ಸೆಳೆದರೂ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಕಳೆದ ವರ್ಷವೇ ಇಲ್ಲಿಯ ಮೋರಿ ಕುಸಿದಿರುವ ಕುರಿತು ಜಿ.ಪಂ.ಗೆ ಸ್ಥಳೀಯರು ಮಾಹಿತಿ ನೀಡಿ ದುರಸ್ತಿ ಮಾಡುವಂತೆ ಮನವಿ ಸಲ್ಲಿಸಿದ್ದರು. ಆದರೆ ಎರಡು ಮೋರಿಗಳನ್ನು ತೆರವು ಮಾಡಿಲ್ಲ. ದುರಸ್ತಿಯನ್ನೂ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಜಿ.ಪಂ. ರಸ್ತೆ
ಅರಂತೋಡಿನಿಂದ ತೊಡಿಕಾನದ ದ.ಕ. ಕೊಡಗು ಗಡಿಭಾಗದವರೆಗೆ ಇದು ಜಿ.ಪಂ. ರಸ್ತೆಯಾಗಿದೆ. ನಾಲ್ಕು ವರ್ಷಗಳ ಹಿಂದೆ 4 ಕೋಟಿ ರೂ. ವೆಚ್ಚದಲ್ಲಿ ಡಾಮರು, ಸೇತುವೆ ಹಾಗೂ ಮೋರಿ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯಿಂದ ನಿರ್ವಹಿಸಲಾಗಿತ್ತು. ಆದರೂ ಗುತ್ತಿಗೆದಾರರು ಎಸ್ಟಿಮೇಟ್‌ ಪ್ರಕಾರ ಕೆಲಸ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಎಸ್ಟಿಮೇಟ್‌ ಪ್ರಕಾರ ತೊಡಿಕಾನ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಬಳಿ ಕುಸಿದಿರುವ ಒಂದು ಮೋರಿಯನ್ನು ತೆಗೆದು ಕಿರು ಸೇತುವೆ ನಿರ್ಮಾಣ ಮಾಡಬೇಕಿತ್ತು. ಮೋರಿಯನ್ನು ತೆಗೆದು ಹೊಸತು ಕಟ್ಟಬೇಕಿತ್ತು. ತೊಡಿಕಾನ ದೇಗುಲ ಸಮೀಪ ಒಂದು ಬಸ್‌ಬೇ ನಿರ್ಮಿಸಬೇಕಾಗಿತ್ತು. ಎರಡು ವರ್ಷಗಳ ಕಾಲ ರಸ್ತೆ ನಿರ್ವಹಣೆಯನ್ನೂ ಮಾಡಬೇಕಿತ್ತು. ಎಸ್ಟಿಮೇಟ್‌ ಪ್ರಕಾರ ಕೆಲಸ ನಿರ್ವಹಿಸದ ಕಾರಣ ಜನರು ಸಮಸ್ಯೆ ಎದುರಿಸುವಂತಾಗಿದೆ. ಕಳೆದ ವರ್ಷ ಮೋರಿಗಳು ಕುಸಿದಿದ್ದು, ಅವುಗಳನ್ನು ಬದಲಾಯಿಸುವಂತೆ ಜಿ.ಪಂ.ಗೆ ಬರೆದರೂ ಕಾಮಗಾರಿ ಆರಂಭವಾಗದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಧಾರ್ಮಿಕ ಕೇಂದ್ರದ ಸಂಪರ್ಕ ರಸ್ತೆ
ಅರಂತೋಡು – ತೊಡಿಕಾನ ರಸ್ತೆ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿ ನಿತ್ಯ ನೂರಾರು ಭಕ್ತರು, ಉತ್ಸವಾದಿ ಸಂದರ್ಭಗಳಲ್ಲಿ ಸಾವಿರಾರು ಜನರು ಆಗಮಿಸುತ್ತಾರೆ. ಆಗ ವಾಹನ ದಟ್ಟಣೆಯೂ ಜಾಸ್ತಿ ಇರುತ್ತದೆ. ಮೋರಿಗಳು ಕುಸಿದಿದ್ದು, ರಸ್ತೆ ಸಂಪರ್ಕ ಯಾವ ಸಂದರ್ಭದಲ್ಲಿ ಪೂರ್ಣವಾಗಿ ಕಡಿತಗೊಳ್ಳುವುದೋ ಎನ್ನುವ ಆತಂಕ ಎದುರಾಗಿದೆ. 

ಕೊಡಗು ಸಂಪರ್ಕ ರಸ್ತೆ
ಈ ರಸ್ತೆ ಕೊಡಗು ಜಿಲ್ಲೆಯ ತಲಕಾವೇರಿ, ಭಾಗಮಂಡಲಕ್ಕೆ ಸಂಪರ್ಕ ಕಲ್ಪಿಸುತ್ತದೆ. ತೊಡಿಕಾನ – ಪಟ್ಟಿ ರಸ್ತೆ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಭಾಗಮಂಡಲವನ್ನು ಸೇರಬಹುದು. ತೊಡಿಕಾನ ದೇವಾಲಯಕ್ಕೆ ಭೇಟಿ ನೀಡುವ ಕೆಲವು ಭಕ್ತರು ಈ ರಸ್ತೆ ಮೂಲಕ ತಲಕಾವೇರಿ, ಭಾಗಮಂಡಲಕ್ಕೆ ಪ್ರಯಾಣ ಬೆಳೆಸುತ್ತಾರೆ. ಮಾಣಿ -ಮೈಸೂರು ರಸ್ತೆ ಜೋಡುಪಾಲದಲ್ಲಿ ನೆರೆ ಹಾವಳಿಯಿಂದ ಪೂರ್ಣ ಹಾಳಾಗಿದ್ದು, ಲಘು ವಾಹನಗಳ ಸಂಚಾರಕ್ಕಾಗಿ ಶ್ರಮದಾನದ ಮೂಲಕ ದುರಸ್ತಿ ಮಾಡಲಾಗಿದೆ. 

ಗಮನಕ್ಕೆ  ಬಂದಿದೆ
ತೊಡಿಕಾನದ ಹಾಲಿನ ಡೈರಿ ಪಕ್ಕ ಮೋರಿ ಕುಸಿದಿರುವುದು ಸಹಿತ ಕೆಲವು ಸಮಸ್ಯೆಗಳು ಈಗಾಗಲೇ ನನ್ನ ಗಮನಕ್ಕೆ ಬಂದಿವೆ. ಎಂಜಿನಿಯರ್‌ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು.
ಹರೀಶ್‌ ಕಂಜಿಪಿಲಿ
  ಜಿ.ಪಂ. ಸದಸ್ಯರು

ಪತ್ರ ಬರೆಯುತ್ತೇವೆ
ತೊಡಿಕಾನ ಹಾಲು ಉತ್ಪಾದಕರ ಸಹಕಾರ ಸಂಘದ ಬಳಿ ಕುಸಿದ ಮೋರಿಯನ್ನು ಸಂಬಂಧಪಟ್ಟ ಇಲಾಖೆ ತತ್‌ಕ್ಷಣ ದುರಸ್ತಿಪಡಿಸಬೇಕಾಗಿದೆ. ಜಿ.ಪಂ.ಗೆ ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗುವುದು.
– ಆನಂದ ಕಲ್ಲಗದ್ದೆ ಮ್ಯಾನೇಜರ್‌, ತೊಡಿಕಾನ ದೇವಸ್ಥಾನ 

 ವಿಶೇಷ ವರದಿ 

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.