ಸೇತುವೆ ಮನವಿಗೆ ಸ್ಪಂದಿಸಿದ ಸಚಿವ ರೇವಣ್ಣ

Team Udayavani, Sep 12, 2018, 12:25 PM IST

12-sepctember-10.jpg

ಕಡಬ: ಪಿಜಕಳದ ಪಾಲೋಳಿಯಿಂದ ಎಡಮಂಗಲವನ್ನು ಸಂಪರ್ಕಿಸಲು ಕುಮಾರಧಾರಾ ಹೊಳೆಗೆ ಸೇತುವೆ ನಿರ್ಮಿಸಬೇಕೆಂಬ ಗ್ರಾಮಸ್ಥರ ಮನವಿಗೆ ಸ್ಪಂದಿಸಿರುವ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ, ಸೇತುವೆ ನಿರ್ಮಾಣಕ್ಕೆ ತಗಲಬಹುದಾದ ವೆಚ್ಚದ ಅಂದಾಜು ಪಟ್ಟಿ ತಯಾರಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಾಲೋಳಿಯಲ್ಲಿ ಸೇತುವೆ ನಿರ್ಮಿಸಬೇಕೆಂದು ಸ್ಥಳೀಯರು ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಲೇ ಇದ್ದರು. ಕಳೆದ ತಿಂಗಳು ಕಡಬ ತಾಲೂಕು ಜೆಡಿಎಸ್‌ ಅಧ್ಯಕ್ಷ ಸಯ್ಯದ್‌ಮೀರಾ ಸಾಹೇಬ್‌ ಅವರು ಗ್ರಾಮಸ್ಥರ ಮನವಿಯೊಂದಿಗೆ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಭೇಟಿಯಾಗಿ ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದ್ದರು.

ಅಧಿಕಾರಿಗಳ ಭೇಟಿ
ಸೆ. 11ರಂದು ಪಾಲೋಳಿಗೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಅಂದಾಜು ಪಟ್ಟಿ ತಯಾರಿಸುವ ಸಲುವಾಗಿ ಸ್ಥಳ ಪರಿಶೀಲಿಸಿದ್ದೇವೆ. ಸೇತುವೆ, ಸಂಪರ್ಕ ರಸ್ತೆ ನಿರ್ಮಾಣಕ್ಕೆ 18 ಕೋಟಿ ರೂ. ಬೇಕಾಗಬಹುದು. ಅಂದಾಜುಪಟ್ಟಿ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಜಾರಾಮ್‌ ತಿಳಿಸಿದ್ದಾರೆ.

ಸಹಾಯಕ ಎಂಜಿನಿಯರ್‌ ಪ್ರಮೋದ್‌ ಕುಮಾರ್‌, ಜಿ.ಪಂ. ಎಂಜಿನಿಯರ್‌ ಭರತ್‌, ಪ್ರಮುಖರಾದ ಸಯ್ಯದ್‌ ಮೀರಾ ಸಾಹೇಬ್‌, ರೋಯ್‌ ಅಬ್ರಹಾಂ, ಕಡಬ ಗ್ರಾ.ಪಂ. ಸದಸ್ಯರಾದ ಕೃಷ್ಣಪ್ಪ ಬೈಲಂಗಡಿ, ಸರೋಜಿನಿ ಎಸ್‌. ಆಚಾರ್‌, ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ಸಾಂತಪ್ಪ ಗೌಡ ಪಿಜಕ್ಕಳ, ಕಾರ್ಯದರ್ಶಿ ಶ್ಯಾಮ್‌ ಥಾಮಸ್‌, ಉಪಾಧ್ಯಕ್ಷ ಜೋಸ್‌ ಕೇಂಜೂರು, ಖಜಾಂಚಿ ರವೀಂದ್ರ ಎಡಮಂಗಲ, ಸ್ಥಳೀಯರಾದ ಅರುಣ್‌ ಕುಮಾರ್‌, ಯತೀಂದ್ರ, ಸುಂದರ, ರಂಜೀವ್‌ ಪಿ.ಆರ್‌., ಸತೀಶ್‌, ನಾರಾಯಣ, ಮುರಳೀಧರ, ಹರೀಶ್‌, ಪುರುಷೋತ್ತಮ, ರಫೀಕ್‌, ಉಸ್ಮಾನ್‌, ಶ್ರೀನಿವಾಸ, ದಯಾನಂದ, ಮಧುಸೂದನ, ಪೂವಪ್ಪ ಉಪಸ್ಥಿತರಿದ್ದರು. 

ರಸ್ತೆ ಅಭಿವೃದ್ಧಿ: ಸ್ಥಳ ಪರಿಶೀಲನೆ
ಅಧಿಕಾರಿಗಳು ನೂಜಿಬಾಳ್ತಿಲ ಗ್ರಾಮವನ್ನು ಸಂಪರ್ಕಿಸುವ ಕಾಯರಡ್ಕ-ಪೇರಡ್ಕ ಹಾಗೂ ಕಲ್ಲುಗುಡ್ಡೆ-ಎಂಜಿರ ರಸ್ತೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಅಂದಾಜು ಪಟ್ಟಿ ಸಲ್ಲಿಸಲು ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ಪರಿಶೀಲಿಸಿದರು. ಸೈಯದ್‌ ಮೀರಾ ಸಾಹೇಬ್‌, ಜೆಡಿಎಸ್‌ ಮುಖಂಡರಾದ ಸುಂದರ ಗೌಡ ಬಳ್ಳೇರಿ, ಇ.ಜಿ. ಜೋಸೆಫ್‌, ದಿಲ್ಫರ್‌ ಫಾರೂಕ್‌, ಹರಿಪ್ರಸಾದ್‌ ಎನ್ಕಾಜೆ ಹಾಜರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.