‘5-6 ಜಿಲ್ಲೆಗಳ ಸಂತ್ರಸ್ತರಿಗೆ ಆಶಾಕಿರಣವಾಗಲಿದೆ’


Team Udayavani, Sep 17, 2018, 11:36 AM IST

17-sepctember-8.jpg

ನೆಲ್ಯಾಡಿ: ಕನ್ಯಾಡಿಯ ಸೇವಾಭಾರತಿ ಸಂಸ್ಥೆಯ ಅಂಗಸಂಸ್ಥೆಯಾಗಿ, ಬೆನ್ನು ಮೂಳೆ ಮುರಿತಕ್ಕೊಳಗಾದವರ ಸಾಮಾಜಿಕ ಪುನಶ್ಚೇತನ ಕೇಂದ್ರವಾದ ಸೇವಾಧಾಮ ಇದರ ಉದ್ಘಾಟನೆಯು ಕೊಕ್ಕಡದ ಶ್ರೀಕ್ಷೇತ್ರ ಸೌತಡ್ಕ ದೇವಸ್ಥಾನದ ಎದುರಿನಲ್ಲಿರುವ ಸೌತಡ್ಕ ಶ್ರೀಮಹಾಗಣಪತಿ ಸೇವಾ ಟ್ರಸ್ಟ್‌ ನ ಕಟ್ಟಡದಲ್ಲಿ ಸೆ.16ರಂದು ನೆರವೇರಿತು.

ವ್ಹೀಲ್‌ ಚೆಯರ್‌ ಇಂಡಿಯಾ – 2014 ಸಂಸ್ಥೆಯ ದಂತ ವೈದ್ಯರಾದ ಡಾ| ರಾಜಲಕ್ಷ್ಮೀ ಸೇವಾ ಧಾಮವನ್ನು ಉದ್ಘಾಟಿಸಿ ಮಾತನಾಡಿ, ಕಷ್ಟಗಳು ಮನುಷ್ಯ ಜೀವನದಲ್ಲಿ ಎದುರಾದಾಗ ಅದನ್ನು ಬಗೆಹರಿಸುವ ಬಗ್ಗೆ ಯೋಚಿಸಬೇಕೆ ವಿನಾ ಕಷ್ಟಗಳ ಬಗ್ಗೆ ಚಿಂತಿಸುತ್ತ ಕೊರಗಬಾರದು. ಅಪಘಾತಕ್ಕೊಳಗಾಗಿ ಅಂಗವೈಫ‌ಲ್ಯವನ್ನು ಹೊಂದಿದ್ದರೂ ಧೃಢವಾದ ಸಂಕಲ್ಪದೊಂದಿಗೆ ಮತ್ತೆ ಹೊಸ ಜೀವನ ಪಡೆಯಬಹುದು ಅನ್ನುವುದಕ್ಕೆ ನಾನೇ ಸಾಕ್ಷಿ. ಸೇವಾಭಾರತಿ ಸಂಸ್ಥೆಯ ಮೂಲಕ ಸಮಾಜದಲ್ಲಿರುವ ಬೆನ್ನುಮೂಳೆ ಮುರಿತಕ್ಕೊಳಗಾಗಿ ಮಲಗಿದಲ್ಲೇ ಇರುವ ಅಶಕ್ತರಿಗಾಗಿ ಸೇವಾಧಾಮವನ್ನು ಇಂದು ಇಲ್ಲಿ ಆರಂಭಿಸುತ್ತಿರುವುದು ಅವರ ಬದುಕಿನಲ್ಲಿ ಆಶಾಕಿರಣವನ್ನು ಮೂಡಿಸುವಂತಾಗಿದೆ ಎಂದರು.

ಮಾದರಿ
ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ, ಸೇವಾಭಾರತಿ ಸಂಸ್ಥೆಯು ಸೌತಡ್ಕದಂತಹ ಪುಣ್ಯ ಭೂಮಿಯಲ್ಲಿ ಸೇವಾ ಕಾರ್ಯದಂತಹ ಪುಣ್ಯ ಕಾರ್ಯಗಳನ್ನು ನಡೆಸಿ ಮಾದರಿಯಾಗಿದೆ ಎಂದರು. ಕರ್ನಾಟಕ ಸರಕಾರದ ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಫಿಸಿಯೋಥೆರಪಿ ವಿಭಾಗ ಉದ್ಘಾಟಿಸಿ ಮಾತನಾಡಿ, ವಿನಾಯಕ ರಾವ್‌ ರವರ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ಸೇವಾಕಾರ್ಯಗಳು ದೇವರಿಗೆ ಪ್ರೀತಿ ತರುವ ಪುಣ್ಯ ಕಾರ್ಯಗಳಾಗಿ ರೂಪುಗೊಂಡಿವೆ. ಈ ಭಾಗದ ಹಲವು ಜಿಲ್ಲೆಗಳ ಬೆನ್ನು ಮೂಳೆ ಮುರಿತಕ್ಕೊಳಗಾದ ಸಂತ್ರಸ್ತರಿಗೆ ಈ ಕೇಂದ್ರವು ಆಸರೆಯಾಗಲಿದೆ ಅನ್ನುವುದೇ ಸಮಾಜಕ್ಕೆ ನೀಡುವ ದೊಡ್ಡ ಕೊಡುಗೆಯಾಗಿದೆ ಎಂದು ತಿಳಿಸಿದರು.

ಆತ್ಮಸ್ಥೈರ್ಯ
ಕನ್ಯಾಡಿಯ ಸೇವಾಭಾರತಿ ಸಂಸ್ಥೆಯ ವಿನಾಯಕ ರಾವ್‌ ಕನ್ಯಾಡಿ ಪ್ರಾಸ್ತಾವಿಕ ಮಾತನಾಡಿ, ತ್ಯಾಗ ಮತ್ತು ಸೇವೆ ಭಾರತದ ಆತ್ಮ ಎನ್ನುವ ವಿವೇಕಾನಂದರ ನುಡಿಯ ಆಶಯಗಳನ್ನು ಅಳವಡಿಸಿ ಕೊಂಡು ಹಲವು ಸಂಘಟನೆಗಳ ಒಗ್ಗೂಡುವಿಕೆಯಿಂದ ಈ ಐದಾರು ಜಿಲ್ಲೆಗಳ ಸುಮಾರು 2,000ಕ್ಕಿಂತಲೂ ಹೆಚ್ಚಿನ ಬೆನ್ನುಮೂಳೆ ಮುರಿತಕ್ಕೊಳಗಾದವರ ಆತ್ಮಸ್ಥೈರ್ಯ ಹಾಗೂ ಧೈಹಿಕ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸೇವೆ ನೀಡುವ ಈ ಸೇವಾಧಾಮವನ್ನು ಸೌತಡ್ಕದಲ್ಲಿ ಆರಂಭಿಸಲಾಗುತ್ತಿದೆ. ಈ ಸಂಸ್ಥೆಯಲ್ಲಿ ಹಲವು ತರಬೇತಿಗಳ ಮೂಲಕ ಸಂತ್ರಸ್ತರಿಗೆ ಸಶಕ್ತವಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಈ ಸಂಸ್ಥೆಯ ಮೂಲಕ ಪ್ರೇರಣೆಯನ್ನು ನೀಡಲಾಗುತ್ತದೆ. ಈ ಸಂಸ್ಥೆಯು ಇಲ್ಲಿ ಕಾರ್ಯ ನಿರ್ವಹಿಸಲು ನಮ್ಮ ಸೇವಾಭಾರತಿಯೊಂದಿಗೆ ಇನ್ನಿತರ ಹತ್ತಾರು ಸಂಘ-ಸಂಸ್ಥೆಗಳು ಕೈಜೋಡಿಸಿರುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಶ್ರೀಕ್ಷೇತ್ರ ಸೌತಡ್ಕದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಸುಬ್ರಹ್ಮಣ್ಯ ಶಬರಾಯ, ಫಿಸಿಯೋಥೆರಪಿ ವಿಭಾಗದ ಡಾ| ಸೆಂಥಿಲ್‌ ಕುಮಾರ್‌, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ ನ ಅಧ್ಯಕ್ಷ ಕೆ. ಕೃಷ್ಣ ಭಟ್‌, ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್‌ ಉಪಸ್ಥಿತರಿದ್ದರು. ಪುರಂದರ ರಾವ್‌ ಸ್ವಾಗತಿಸಿ, ಹರೀಶ್‌ ರಾವ್‌ ವಂದಿಸಿದರು. ಡಾ| ಎ. ಜಯರಾಮ ಶೆಟ್ಟಿ ನಿರೂಪಿಸಿದರು.

ಹೆಮ್ಮೆಯ ವಿಷಯ
ಲೋಕಸಭಾ ಸದಸ್ಯ ನಳಿನ್‌ ಕುಮಾರ್‌ ಕಟೀಲು ಅವರು ವಸತಿ ವಿಭಾಗವನ್ನು ಉದ್ಘಾಟಿಸಿ ಮಾತನಾಡಿ, ಭವಿಷ್ಯತ್‌ ಕಾಲದ ನಿರ್ಮಾಣ ಕಾರ್ಯವನ್ನು ಸೇವಾಭಾರತಿ ಸಂಸ್ಥೆ ಮಾಡುತ್ತಿದೆ. ತ್ಯಾಗ-ಸೇವಾ ಮನೋಭಾವದಿಂದ ಕೂಡಿದ ಸೇವೋಹೀ ಪರಮೋಧರ್ಮ ಅನ್ನುವ ಸ್ವಾಮೀ ವಿವೇಕಾನಂದರ ತತ್ತ್ವದಡಿಯಲ್ಲಿ ಸ್ವಾರ್ಥರಹಿತ ಚಿಂತನೆಗಳೊಂದಿಗೆ ಬೆನ್ನುಮೂಳೆ ಮುರಿದವರ ಬಾಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸವನ್ನು ಮಾಡುತ್ತಿದೆ. ಜಿಲ್ಲೆಯ ಶಾಸಕ ಹಾಗೂ ಸಂಸದರಿಗೆ ಇದು ಹೆಮ್ಮೆಯ ವಿಷಯವಾಗಿದ್ದು, 5-6 ಜಿಲ್ಲೆಗಳ ಸಂತ್ರಸ್ತರಿಗೆ ಈ ಸೇವಾಧಾಮವು ಆಶ್ರಯವಾಗಲಿದೆ ಎಂದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.