ನ. 3: ತಾಲೂಕು ತುಳು ಸಾಹಿತ್ಯ ಸಮ್ಮೇಳನ


Team Udayavani, Sep 22, 2018, 3:04 PM IST

22-sepctember-14.jpg

ಮಂಜಲ್ಪಡ್ಪು: ನವೆಂಬರ್‌ 3ರಂದು ಪುತ್ತೂರಿನ ಸುದಾನ ವಿದ್ಯಾ ಸಂಸ್ಥೆಯಲ್ಲಿ ಜರಗುವ ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನದಲ್ಲಿ ಗ್ರಾಮೀಣ ಆಟಕ್ಕೆ ಹೆಚ್ಚಿನ ಪ್ರಾಧಾನ್ಯ ನೀಡಲಾಗುವುದು. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಿಶ್ರಾಂತ ಕುಲಪತಿ ಬಿ.ಎ. ವಿವೇಕ್‌ ರೈ ವಹಿಸ ಲಿದ್ದು, ಸಚಿವೆ‌ ಡಾ| ಜಯಮಾಲಾ, ಯು.ಟಿ. ಖಾದರ್‌ ಉಪಸ್ಥಿತರಿರುವರು ಎಂದು ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿಯ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಹೇಳಿದರು. ಸುದಾನ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸೆ. 21ರಂದು ನಡೆದ ತಾಲೂಕು ತುಳು ಸಾಹಿತ್ಯ ಸಮ್ಮೇಳನದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲ ತಾಲೂಕಿನಲ್ಲಿಯೂ ತುಳು ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ತಾಲೂಕು ತುಳು ಸಾಹಿತ್ಯ ಸಮ್ಮೇಳನ ಮಾದರಿಯಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಸಮ್ಮೇಳನದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸಿ, ಸಮಿತಿ ಸಂಚಾಲಕರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ತುಳು ಸಾಹಿತ್ಯ, ಸಂಸ್ಕೃತಿ- ರಂಗ ಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಾಧಕರ ಗುರುತಿಸುವಿಕೆ, ತುಳು ಭಾಷೆ ಲಿಖಿತ ಸಾಹಿತ್ಯದ ಜತೆಯಲ್ಲಿ ಮೌಖಿಕ ಸಾಹಿತ್ಯ ಕೂಡ ಜಾನಪದ ಸಾಹಿತ್ಯಕ್ಕೆ ಹೆಚ್ಚಿನ ಪ್ರಾಧಾನ್ಯ ಸಿಗುವ ಅಗತ್ಯವಿದೆ. ತುಳು ಜನಪದ ಸಾಹಿತ್ಯದಲ್ಲಿ ಪಾಡ್ಡನ-ಪಾರಿ, ಉರಲ್‌, ಬೀರ, ಸಂಧಿ ಮೊದಲಾದವುಗಳನ್ನು ಉಳಿಸಿ ಕೊಂಡಿರುವುದು ಗ್ರಾಮೀಣ ಭಾಗದ ಜನರು. ತುಳು ಭಾಷೆಯ ಪ್ರಾಚೀನತೆ, ಹಿರಿಮೆ, ಗರಿಮೆಯನ್ನು ತಿಳಿಸುವ ಲಿಖಿತ ಸಾಹಿತ್ಯಕ್ಕೂ ಮೌಖೀಕ ಸಾಹಿತ್ಯವು ಮೂಲ ಆಕರವಾಗಿ ಸಿಗುತ್ತದೆ. ಇವುಗಳನ್ನೆಲ್ಲವೂ ತೆರೆದಿಡುವ ಕಾರ್ಯ ತುಳು ಸಮ್ಮೇಳನ ದಿಂದ ಆಗಲಿದೆ ಎಂದರು. ತುಳು ಸಮ್ಮೇಳನದ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ನೆಹರೂನಗರ ಸುದಾನ ವಿದ್ಯಾಸಂಸ್ಥೆಯ ವರೆಗೆ ಆಕರ್ಷಕ ಮೆರವಣಿಗೆ ನಡೆಯಲಿದೆ.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಸಮ್ಮೇಳನ ಸ್ವಾಗತ ಸಮಿತಿ ಉಪಾಧ್ಯಕ್ಷ, ಸುದಾನ ವಿದ್ಯಾಸಂಸ್ಥೆಯ ಸಂಚಾಲಕ ವಂ| ವಿಜಯ ಹಾರ್ವಿನ್‌, ನರೇಂದ್ರ ರೈ ದೇರ್ಲ, ಕಾವು ಹೇಮನಾಥ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ್‌ ಎಸ್‌., ಸಮ್ಮೇಳನದ ಆರ್ಥಿಕ ಸಮಿತಿ ಸಂಚಾಲಕ ಶಶಿಕುಮಾರ್‌ ರೈ ಬಾಲ್ಯೊಟ್ಟು, ನಗರಸಭೆ ಸದಸ್ಯ ಜೀವಂಧರ್‌ ಜೈನ್‌, ಕರ್ನಾಟಕ ಸಂಘದ ಅಧ್ಯಕ್ಷ ಪುರಂದರ ಭಟ್‌ ಬರೆಪ್ಪಾಡಿ, ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್‌ ಬಿ. ಚಂದ್ರಹಾಸ ರೈ, ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ವಿದ್ಯಾ ಉಪಸ್ಥಿತರಿದ್ದರು.

ಪ್ರಾಚ್ಯ ವಸ್ತುಗಳ ಪ್ರದರ್ಶನ ಸಮಿತಿ
ಸಂಚಾಲಕ ಉಮೇಶ್‌ ಸಾಯಿರಾಂ, ಮೆರವಣಿಗೆ ಸಮಿತಿ ಸಂಚಾಲಕ ಅರುಣ್‌ ಕುಮಾರ್‌ ಪುತ್ತಿಲ, ವೇದಿಕೆ ಸಮಿತಿ ಸಂಚಾಲಕ ರಾಕೇಶ್‌ ರೈ ಕೆಡೆಂಜಿ, ಸಂಯೋಜನ ಸಮಿತಿಯ ಕುಂಬ್ರ ದುರ್ಗಾಪ್ರಸಾದ್‌ ರೈ, ಶ್ರೀಧರ್‌ ರೈ ಎಚ್‌., ಸಾಮಗ್ರಿ ಹಂಚಿಕೆ ಸಮಿತಿಯ ಲೋಕೇಶ್‌ ಹೆಗ್ಡೆ, ಕ್ರೀಡಾ ಸಮಿತಿಯ ಪದ್ಮನಾಭ ಶೆಟ್ಟಿ, ರಾಮಣ್ಣ ರೈ, ಸುವಿಚಾರ ಬಳಗದ ಪ್ಯಾಟ್ರಿಕ್‌ ಸಿಪ್ರಿಯನ್‌ ಮಸ್ಕರೇನ್ಹಸ್‌, ಪ್ರೇಮಲತಾ ರಾವ್‌, ಹರಿಣಾಕ್ಷಿ ಜೆ. ಶೆಟ್ಟಿ, ಸುದರ್ಶನ್‌ ನಾೖಕ್‌ ಕಂಪ ಸವಣೂರು, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್‌ ಕೊಡೆಂಕಿರಿ, ವಿವೇಕಾನಂದ ಪ.ಪೂ. ಕಾಲೇಜಿನ ಪ್ರಾಚಾರ್ಯೆ ಹರಿಣಿ ಪುತ್ತೂರಾಯ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯ ಸೀತಾರಾಮ ಕೇವಳ, ಅಬ್ರಾಹಂ ವರ್ಗೀಸ್‌, ಯಕ್ಷಗಾನ ಕಲಾವಿದ ದಾಸಪ್ಪ ರೈ, ಸಾಂದೀಪನಿ ವಿದ್ಯಾಸಂಸ್ಥೆಯ ಜಯಮಾಲ ವಿ.ಎನ್‌., ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್‌ ರೈ ಸಲಹೆ, ಸೂಚನೆ ನೀಡಿದರು. ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ್‌ ರೈ ಸ್ವಾಗತಿಸಿ, ಸ್ವಾಗತ ಸಮಿತಿ ಕೋಶಾಧಿಕಾರಿ ರಾಮಣ್ಣ ಗೌಡ ಗುಂಡೋಳೆ ವಂದಿಸಿದರು.

ಪ್ರಾಚ್ಯ ವಸ್ತುಗಳ ಪ್ರದರ್ಶನ 
ಪುಸ್ತಕ ಪ್ರದರ್ಶನ- ಮಾರಾಟ, ತುಳುನಾಡಿನ ಬದುಕು ಮತ್ತು ಸಂಸ್ಕೃತಿ ಬಿಂಬಿಸುವ ಹಳೆ ವಸ್ತುಗಳ ಪ್ರದರ್ಶನವೂ ಇರಲಿದೆ. ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಗುರುತಿಸಿ ಸಮ್ಮಾನಿಸಲಾಗುವುದು. ಜತೆಗೆ ಕವಿಗೋಷ್ಠಿ, ಚಾವಡಿ ಪಟ್ಟಾಂಗ, ತುಳು ತಾಳಮದ್ದಳೆ ನಡೆಯಲಿವೆ.

ಜನಪದ ಗೊಬ್ಬುಲು
ಸಮ್ಮೇಳನದ ಅಂಗವಾಗಿ ನಡೆಯುವ ಕ್ರೀಡಾಕೂಟದಲ್ಲಿ ಇತರ ಕ್ರೀಡಾ ಪ್ರಾಧಿಕಾರಗಳಿಂದ ಭಿನ್ನವಾಗಿರುವ ತುಳು ನಾಡಿನ ‘ತುಳುವೆರೆ ಗೊಬ್ಬುಗಳಾದ ಲಗೋರಿ, ಕೊತ್ತಲಿಗೆ ಕ್ರಿಕೆಟ್‌, ಚೆನ್ನೆಮಣೆ ಆಟ, ಹಗ್ಗಜಗ್ಗಾಟ, ಹಾಳೆ ಎಳೆಯುವ ಆಟ, ಟೋಪಿ ಆಟಗಳು ನಡೆಯಲಿವೆ. ತುಳುವರ ಕ್ರೀಡೆಗಳನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಸಮ್ಮೇಳನದಲ್ಲಿ ‘ತುಳುವೆರೆ ಗೊಬ್ಬುಲು’ ಎಂಬ ಪರಿಕಲ್ಪನೆಯನ್ನು ಪರಿಚಯಿಸುವ ಪ್ರಯತ್ನ ತುಳು ಸಮ್ಮೇಳನದ್ದು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.