ಬಿ.ಸಿ.ರೋಡ್‌-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದಸರಾ ಬಳಿಕ ದುರಸ್ತಿ

Team Udayavani, Sep 24, 2018, 10:45 AM IST

24-sepctember-4.jpg

ಬೆಳ್ತಂಗಡಿ: ಸದ್ಯಕ್ಕೆ ಮಳೆ ಪೂರ್ತಿ ದೂರವಾಗಿದ್ದು, ರಸ್ತೆಯ ಹೊಂಡಗಳಿಗೆ ಹಾಕಿರುವ ಜಲ್ಲಿ ಹುಡಿಗಳು ಧೂಳಾಗಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದೆ. ಬಿ.ಸಿ. ರೋಡ್‌-ಚಾರ್ಮಾಡಿ ರಾ.ಹೆ.ಯಲ್ಲಿ ಧೂಳಿನ ಸಮಸ್ಯೆ ಸಾಕಷ್ಟಿದ್ದು, ಇದಕ್ಕೆ ಮುಕ್ತಿ ನೀಡುವ ನಿಟ್ಟಿನಲ್ಲಿ ರಾ.ಹೆ. ಇಲಾಖೆಯು ದಸರಾ ಕಳೆದ ತತ್‌ಕ್ಷಣ ತೇಪೆ ಕಾರ್ಯವನ್ನು ಆರಂಭಿಸಲಿದೆ.

ಬಿ.ಸಿ. ರೋಡ್‌-ಚಾರ್ಮಾಡಿ ಹೆದ್ದಾರಿಯಲ್ಲಿ ಸಾಕಷ್ಟು ಕಡೆ ಹೆದ್ದಾರಿ ಹದಗೆಟ್ಟಿದ್ದು, ಅದಕ್ಕೆ ಮಳೆಗಾಲದಲ್ಲಿ ವೆಟ್‌ಮಿಕ್ಸ್‌ (ಜಲ್ಲಿ ಹುಡಿ) ಹಾಕಲಾಗಿತ್ತು. ಆದರೆ ಗುರುವಾಯನಕರೆ ಜಂಕ್ಷನ್‌ನಲ್ಲಿ ಹೆದ್ದಾರಿ ಪೂರ್ತಿ ಹದಗೆಟ್ಟು, ಸಾಕಷ್ಟು ಬಾರಿ ಜಲ್ಲಿ ಹುಡಿ ಹಾಕಲಾಗಿದೆ. ಆದರೆ ಇದೀಗ ಅದೇ ಪ್ರಮುಖ ಸಮಸ್ಯೆಯಾಗಿದ್ದು, ಇಡೀ ಪೇಟೆಯೇ ಧೂಳಿನಿಂದ ತುಂಬಿ ಹೋಗಿದೆ. ಪ್ರಸ್ತುತ ಈಗಲೂ ಅಲ್ಲಿ ನೀರು ಹಾಕಿ ಧೂಳಿಗೆ ಮುಕ್ತಿ ನೀಡುವ ಕಾರ್ಯ ನಡೆಯುತ್ತಿದೆ.

ಸಂಚಾರ ದುಸ್ತರ
ಮಳೆಗಾಲದಲ್ಲಿ ಚಾರ್ಮಾಡಿ ಘಾಟಿ ರಸ್ತೆ ಹೊರತುಪಡಿಸಿ ಉಳಿದ ಘಾಟಿಗಳಲ್ಲಿ ಸಂಚಾರ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ಘನ ವಾಹ ನಗಳು ಸಹಿತ ಹೆಚ್ಚಿನ ವಾಹನಗಳು ಬಿ.ಸಿ. ರೋಡ್‌ – ಚಾರ್ಮಾಡಿ ಹೆದ್ದಾರಿ ಮೂಲಕವೇ ಸಾಗಿವೆ. ಹೀಗಾಗಿ ಇಲ್ಲಿನ ಹೆದ್ದಾರಿಗೆ ಒತ್ತಡ ಬಿದ್ದು, ಬಹುತೇಕ ಕಡೆ ಸಂಚಾರವೇ ದುಸ್ತರವೆನಿಸಿದೆ. ಶಿರಾಡಿ ಘಾಟಿನಲ್ಲಿ ಸದ್ಯಕ್ಕೆ ಲಘು ವಾಹನಗಳು ಮಾತ್ರ ಸಂಚರಿಸುತ್ತಿರುವುದರಿಂದ ಲಾರಿಗಳು, ಮಂಗಳೂರಿನಿಂದ ಬೆಂಗಳೂರು ಸಹಿತ ಇತರೆಡೆಗೆ ತೆರಳುವ ಬಸ್ಸುಗಳು ಈಗಲೂ ಇದೇ ರಸ್ತೆಯಲ್ಲಿ ಸಂಚರಿಸುತ್ತಿವೆ. ಹೀಗಾಗಿ ಹೆದ್ದಾರಿಗೆ ತೇಪೆ ಕಾರ್ಯ ಅನಿವಾರ್ಯವಾಗಿದೆ.

ಸಾಮಾನ್ಯವಾಗಿ ರಸ್ತೆ ಕಾಮಗಾರಿಗಳು ಮೇ ತಿಂಗಳ ಅಂತ್ಯಕ್ಕೆ ಮುಗಿಯುತ್ತವೆ. ಮುಂದಿನ ಸುಮಾರು 4 ತಿಂಗಳ ಕಾಲ ರಸ್ತೆ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಕೆಲಸ ಇರುವುದಿಲ್ಲ. ಇಂತಹ ಕೆಲಸಗಳನ್ನು ಹೊರ ಜಿಲ್ಲೆಯವರೇ ಮಾಡು ವುದರಿಂದ ಅವರು ಮಳೆಗಾಲದಲ್ಲಿ ಊರಿಗೆ ಹೋಗುತ್ತಾರೆ. ಮತ್ತೆ ಅವರು ಕೆಲಸಕ್ಕೆ ಬರುವುದು ದಸರಾ ಮುಗಿದ ಬಳಿಕವೇ. ಹೀಗಾಗಿ ಕಾರ್ಮಿಕರು ಆಗಮಿಸಿದ ಬಳಿಕ ಹೆಚ್ಚಿನ ಕಡೆ ರಸ್ತೆ ಕಾಮಗಾರಿಗಳು ಆರಂಭಗೊಳ್ಳುತ್ತವೆ.

ಮಳೆ ಬಂದರೆ ಅಪಾಯ
ಧೂಳಿನ ಸಮಸ್ಯೆ ಇದೆ ಎಂದು ಏಕಾಏಕಿ ತೇಪೆ ಕಾರ್ಯ ನಡೆಸಿದರೆ, ಮಳೆ ಬಂದರೆ ಅದು ಪೂರ್ತಿ ಎದ್ದು ಹೋಗುತ್ತದೆ. ತೇಪೆ ಕಾರ್ಯ ನಡೆದು ಕನಿಷ್ಠ 15 ದಿನಗಳಾದರೂ ಬಿಸಿಲು ಬಿದ್ದರೆ ಅದು ಗಟ್ಟಿಯಾಗುತ್ತದೆ. ಮುಂದಿನ ವಾರ ಮಳೆಯಾಗುವ ಸಾಧ್ಯತೆಯ ಕುರಿತು ಹವಾಮಾನ ಇಲಾಖೆ ಹೇಳಿರುವುದರಿಂದ ತೇಪೆ ಕಾರ್ಯವನ್ನು ಮುಂದೂಡಲಾಗಿದ್ದು, ದಸರಾ ಬಳಿಕ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳುತ್ತಾರೆ. ಹೆದ್ದಾರಿ ತೇಪೆ ಕಾರ್ಯಕ್ಕೆ ಸರಕಾರದ ಅನುದಾನವನ್ನು ಕಾಯದೆ, ಗುತ್ತಿಗೆ ಕಂಪೆನಿಗಳಿಗೆ ಮನವಿ ಮಾಡಿ ಈ ಕಾರ್ಯವನ್ನು ಮಾಡಿಸಲಾಗುತ್ತದೆ. ಯಾರು ಮೊದಲು ಕಾಮಗಾರಿಗೆ ಒಪ್ಪಿಗೆ ಸೂಚಿಸುತ್ತಾರೋ ಅವರೇ ತೇಪೆ ಕಾರ್ಯ ನಡೆಸಲಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.