ದೇಶದ ಘನತೆ ವೃದ್ಧಿಗೆ ಸಂಕಲ್ಪ ಅಗತ್ಯ: ಡಾ| ಹೆಗ್ಗಡೆ


Team Udayavani, Oct 3, 2018, 9:35 AM IST

sdm.jpg

ಬೆಳ್ತಂಗಡಿ: ಜಾಗತಿಕ ಮಟ್ಟದಲ್ಲಿ ದೇಶದ ಘನತೆಯನ್ನು ಎತ್ತಿ ಹಿಡಿಯುವ ಗುರಿಯೊಂದಿಗೆ ಮುನ್ನಡೆಯುವ ದೃಢ ಸಂಕಲ್ಪವನ್ನು ಯುವಸಮೂಹ ಕೈಗೊಳ್ಳಬೇಕು. ಗಾಂಧೀಜಿ ಆಶಯದಂತೆ ಹಳ್ಳಿಗಳನ್ನು ಬಲ ಪಡಿಸಿ ನವಭಾರತವನ್ನು ಕಟ್ಟಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಮಂಗಳವಾರ ಉಜಿರೆಯ ಡಿ. ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಮಹಾತ್ಮಾ ಗಾಂಧೀಜಿ 150ನೇ ಜಯಂತಿ ಆಚರಣೆಯಲ್ಲಿ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸ್ವತ್ಛತೆಯ ಪ್ರಮಾಣವಚನ ಬೋಧಿಸಿ, ಗಾಂಧಿ ಜಯಂತಿಯ ಸಂದೇಶ ನೀಡಿದರು.

ನವ ಭಾರತದ ಕನಸು
ಗಾಂಧಿಯವರು ನವ ಭಾರತದ ಕನಸು ಸಾಕಾರಗೊಳಿಸುವ ಗಂಭೀರ ಪ್ರಯತ್ನ ಮಾಡಿದ್ದರು. ಗ್ರಾಮೀಣ ವಿಕಾಸದ ಮೂಲಕ ಮಾತ್ರ ಸಮೃದ್ಧ ಭಾರತ ನಿರ್ಮಾಣ ಸಾಧ್ಯ ಎಂದು ನಂಬಿ, ಹಳ್ಳಿಗಳ ಉದ್ಧಾರದಲ್ಲಿ ಹೆಚ್ಚಿನ ಆಸಕ್ತಿ ತಾಳಿದ್ದರು. ಭವ್ಯಭಾರತ ಸಾಕಾರಗೊಂಡ ಕ್ಷಣಗಳಿಗೆ ಸಾಕ್ಷಿ ಆಗುವುದಕ್ಕೆ ತಾನು 125 ವರ್ಷ ಬದುಕಬೇಕೆಂಬ ಅಭಿಲಾಷೆ ಅವರಲ್ಲಿತ್ತು ಎಂದರು.

ಯುವಕರು ಸಾಧನೆಗೈದು ದೇಶವನ್ನು ಗಟ್ಟಿಗೊಳಿಸಬೇಕು. ಸಾಧನೆಗೆ ನೈತಿಕ ಮಾರ್ಗವನ್ನೇ ಅನುಸರಿಸಿ, ಅಲ್ಲಿನ ಎಡರು- ತೊಡರುಗಳಿಗೆ ಉತ್ತರ ಹುಡುಕುವ ಪ್ರಯತ್ನ ಮಾಡಬೇಕು. ದೇಶದ ಉನ್ನತಿಯ ಆಲೋಚನೆ ಯುವಶಕ್ತಿಯ ಮುಂದಿರಬೇಕು ಎಂದು ಸಂದೇಶ ನೀಡಿದರು.

ಧ್ಯೇಯವಾಕ್ಯ ಅನಾವರಣ
“ಸ್ವಸ್ಥ ಮನಸ್ಸು, ಸ್ವತ್ಛ ಪರಿಸರ, ಗಾಂಧಿ ಮಾರ್ಗ’ ಧ್ಯೇಯವಾಕ್ಯದ ಫಲಕವನ್ನು ಹೇಮಾವತಿ ವೀ. ಹೆಗ್ಗಡೆ ಅನಾವರಣಗೊಳಿಸಿದರು. ಎಸ್‌ಡಿಎಂ ಪತ್ರಿಕೋದ್ಯಮ ವಿಭಾಗದ ದೃಶ್ಯ- ಶ್ರಾವ್ಯ ವೆಬ್‌ ಸರಣಿಯ ಪ್ರೊಮೋವನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇದ್ರ ಕುಮಾರ್‌ ಬಿಡುಗಡೆಗೊಳಿಸಿದರು. 150 ವಿದ್ಯಾರ್ಥಿಗಳು ಗಾಂಧಿ ಭಜನೆ ಹಾಡಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್‌. ಪ್ರಭಾಕರ್‌, ಸುಪ್ರಿಯಾ ಹಷೇìದ್ರ ಕುಮಾರ್‌, ಶ್ರದ್ಧಾ ಅಮಿತ್‌, ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಪ್ರೊ| ಟಿ.ಎನ್‌. ಕೇಶವ ಉಪಸ್ಥಿತರಿದ್ದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಸ್ವಾಗತಿಸಿದರು. ಪ್ರಾಧ್ಯಾಪಕ ಕುಮಾರ ಹೆಗ್ಡೆ ನಿರ್ವಹಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.