ಆಂಬುಲೆನ್ಸ್ ನಲ್ಲೆ ಹೆರಿಗೆ : 108 ಸಿಬ್ಬಂದಿಯ ಸಾಧನೆಗೆ ಪ್ರಶಂಸೆ
Team Udayavani, Oct 20, 2018, 2:21 PM IST
ಬೆಳ್ತಂಗಡಿ : ತುಂಬು ಗರ್ಭಿಣಿ ಒಬ್ಬರನ್ನು ಆಂಬುಲೆನ್ಸ್ (108)ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ತೀವ್ರತರದ ನೋವು ಕಾಣಿಸಿಕೊಂಡ ಪರಿಣಾಮ ಆಂಬುಲೆನ್ಸ್ ಸಿಬ್ಬಂದಿಯೇ ಮಹಿಳೆಗೆ ಹೆರಿಗೆ ಮಾಡಿಸಿದ ಘಟನೆ ಶನಿವಾರ ನಡೆದಿದೆ.
ಪುಂಜಾಲಕಟ್ಟೆ ವ್ಯಾಪ್ತಿಯ ಮಾಲಾಡಿ ಗ್ರಾಮದ ನಿವಾಸಿ ವಿನುತಾ ವೇಗಸ್ ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಶನಿವಾರ ಬೆಳಗಿನ ಜಾವ ವಿನುತಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಉಜಿರೆಯ 108 ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.
ದಾರಿ ಮಧ್ಯೆ ನೋವು ವಿಪರೀತವಾದಾಗ ಪರಿಸ್ಥಿತಿ ಅರಿತ ಆಂಬುಲೆನ್ಸ್ ಸಿಬ್ಬಂದಿ ಡೆನ್ನಿಸ್ ಅವರು ವಿನುತಾ ಅವರಿಗೆ ಯಶಸ್ವಿಯಾಗಿ ಹೆರಿಗೆ ನಡೆಸಿದರು. ತಾಯಿ ಮತ್ತು ಹೆಣ್ಣು ಮಗು ಆರೋಗ್ಯವಾಗಿದ್ದು ಸೂಕ್ತ ಸಮಯಕ್ಕೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಆಂಬುಲೆನ್ಸ್ ಸಿಬ್ಬಂದಿಯ ಸಾಧನೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು