ಕಡಬ ಸಮುದಾಯ ಆಸ್ಪತ್ರೆ ಕಟ್ಟಡ ಪರಿಶೀಲಿಸಿದ ಡಿಎಚ್‌ಒ


Team Udayavani, Oct 20, 2018, 2:58 PM IST

19-october-15.gif

ಕಡಬ: ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಕಡಬ ಸಮುದಾಯ ಆಸ್ಪತ್ರೆಯ ನೂತನ ಕಟ್ಟಡವನ್ನು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ| ರಾಮಕೃಷ್ಣ ರಾವ್‌ ಅವರು ಶುಕ್ರವಾರ ಪರಿಶೀಲಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿರುವ ಕಡಬದ ಸರಕಾರಿ ಆಸ್ಪತ್ರೆಗೆ 4.85 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧಗೊಂಡಿದೆ. 6 ಹಾಸಿಗೆಗಳ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರವು 9 ವರ್ಷಗಳ ಹಿಂದೆ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿದೆ. ಅದರಂತೆ ಕಡಬ ಆಸ್ಪತ್ರೆಗೆ ಪ್ರಸೂತಿ ತಜ್ಞರು, ಶಿಶು ತಜ್ಞರು ಸಹಿತ ನಾಲ್ವರು ವೈದ್ಯಾಧಿಕಾರಿಗಳು, ಓರ್ವ ದಂತ ವೈದ್ಯರು ಹೀಗೆ ಒಟ್ಟು 34 ಹುದ್ದೆಗಳು ಮಂಜೂರಾತಿಗೊಂಡಿವೆ ಎಂದರು.

ಕಡಬದಲ್ಲಿ ಸಮುದಾಯ ಆಸ್ಪತ್ರೆಗೆ ಅಗತ್ಯ ಸವಲತ್ತುಗಳನ್ನು ನೀಡುವುದು ನಮ್ಮ ಮೊದಲ ಗುರಿ. ಸಮುದಾಯ ಆಸ್ಪತ್ರೆಗೆ ಬೇಕಾದ ಸಿಬಂದಿ ನೇಮಕ ಹಾಗೂ ಅಗತ್ಯ ಸಲಕರಣೆಗಳನ್ನು ಒದಗಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌, ತಾ.ಪಂ. ಸದಸ್ಯ ಫಝಲ್‌ ಕೋಡಿಂಬಾಳ, ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ಕುಮಾರ್‌ ರೈ, ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್‌ ಹಾಜರಿದ್ದರು.

ತಾ| ಆಸ್ಪತ್ರೆ: ಪ್ರಸಾವನೆ 
ನೂತನ ಕಟ್ಟಡದ ಉದ್ಘಾಟನೆಗೆ ದಿನ ನಿಗದಿ ಮಾಡಲಾಗುವುದು. ಹಾಗೆಯೇ ಜಿಲ್ಲೆಯ ಹೊಸ ತಾಲೂಕುಗಳಾದ ಕಡಬ, ಮೂಡಬಿದರೆಯ ಸರಕಾರಿ ಆಸ್ಪತ್ರೆ ಗಳನ್ನು 100 ಹಾಸಿಗೆಗಳ ತಾ| ಮಟ್ಟದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹಂತ ಹಂತವಾಗಿ ಕಡಬಕ್ಕೂ ತಾಲೂಕು ಆಸ್ಪತ್ರೆಯ ಮಾನ್ಯತೆ, ಸವಲತ್ತುಗಳು ಸಿಗಲಿವೆ ಎಂದು ಡಿಎಚ್‌ಒ ತಿಳಿಸಿದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.