ಮಕ್ಕಳ ಕನಸುಗಳಿಗೆ ಬಣ್ಣ ತುಂಬಬೇಕಿದೆ: ವಸಂತಿ


Team Udayavani, Oct 22, 2018, 3:30 PM IST

22-october-15.gif

ಪುತ್ತೂರು: ಮಕ್ಕಳ ಕನಸಿಗೆ ಬಣ್ಣ ತುಂಬುವ ಕೆಲಸವನ್ನು ಹಿರಿಯರಾದವರು ಮಾಡಬೇಕು. ಇಂತಹ ದೃಷ್ಟಿಕೋನದೊಂದಿಗೆ ಪತ್ರಿಕೆಯೊಂದು ಕಾಳಜಿ ತೋರುವುದು ಉತ್ತಮ ಬೆಳವಣಿಗೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯೆ ವಸಂತಿ ಹೇಳಿದರು.

ಉದಯವಾಣಿ ಮತ್ತು ಆರ್ಟಿಸ್ಟ್‌ ಫೋರಂ ಉಡುಪಿ ವತಿಯಿಂದ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ‘ಚಿಣ್ಣರ ಬಣ್ಣ – 2018’ ತಾಲೂಕು ಮಟ್ಟದ ಉದಯವಾಣಿ ಚಿತ್ರಕಲಾ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸ್ಪರ್ಧಾ ವಿಷಯದ ಆಯ್ಕೆಯ ಚೀಟಿ ಎತ್ತುವ ಮೂಲಕ ಚಾಲನೆ ನೀಡಲಾಯಿತು.

ಮಕ್ಕಳಲ್ಲಿ ವಿವಿಧ ರೀತಿಯ ಪ್ರತಿಭೆ ಇರುತ್ತದೆ. ಆದರೆ ಹೊರತೆಗೆಯುವ ಜವಾಬ್ದಾರಿ ಶಿಕ್ಷಕರು, ಪೋಷಕರು, ಸಮಾಜಕ್ಕೂ ಇದೆ. ನಾವು ಗೆಲ್ಲುತ್ತೇವೆ ಎನ್ನುವುದಕ್ಕಿಂತಲೂ ಮನಸ್ಸಿನಲ್ಲಿ ಮೂಡುವ ಕಲ್ಪನೆಗೆ ಚಿತ್ರರೂಪ ನೀಡುವುದು ಮುಖ್ಯವಾಗಬೇಕು. ಹಾಗಾದಾಗ ಮಾತ್ರ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ.

ಪ್ರೋತ್ಸಾಹ, ಸ್ಫೂರ್ತಿ ಅಗತ್ಯ
ಜಿ.ಎಲ್‌. ಆಚಾರ್ಯ ಜುವೆಲರ್ ಆಡಳಿತ ಪಾಲುದಾರ ಲಕ್ಷ್ಮೀಕಾಂತ್‌ ಬಿ. ಆಚಾರ್ಯ ಮಾತನಾಡಿ, ಮಕ್ಕಳಲ್ಲಿ ಕಲಿಕೆಯ ಶ್ರದ್ಧೆ ಹಾಗೂ ಆಸಕ್ತಿ ಮೂಡಿದಾಗ ಮಾತ್ರ ಬೆಳವಣಿಗೆ ಸಾಧ್ಯವಾಗುತ್ತದೆ. ಮಕ್ಕಳಿಗೆ ಪ್ರೋತ್ಸಾಹ, ಸ್ಫೂರ್ತಿ ತುಂಬುವ ಉದ್ದೇಶದಿಂದ ಉದಯವಾಣಿ ಹಾಗೂ ಆರ್ಟಿಸ್ಟ್‌ ಫೋರಂ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅಭಿನಂದನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಮನಸ್ಸಿಗೆ ಸಂತೋಷ
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರಿನ ಕಲ್ಯ ಆಯುರ್ವೇದಂ ಚಿಕಿತ್ಸಾಲಯದ ವೈದ್ಯೆ ಡಾ| ಹರಿಣಿ ಸೂರಜ್‌ ಮಾತನಾಡಿ, ಚಿತ್ರಕಲೆ ಅನುಭವಿಸಿಕೊಂಡು ತೊಡಗಿಸಿಕೊಳ್ಳುವ ಕಲೆಯಾಗಿರುವುದರಿಂದ ಮನಸ್ಸಿಗೆ ಸಂತೋಷ ಲಭಿಸುತ್ತದೆ. ಮಕ್ಕಳನ್ನು ಚಟುವಟಿಕೆಯಿಂದಿರಿಸಲು ಪೂರಕವಾಗಿರುತ್ತದೆ ಎಂದು ಹೇಳಿದರು.

ಉದಯವಾಣಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರ್‌ ಮಾತನಾಡಿ, ವರ್ಣರಂಜಿತ ಬದುಕು ವಿದ್ಯಾರ್ಥಿಗಳದ್ದಾಗಬೇಕು ಎಂಬ ಉದ್ದೇಶದಿಂದ ಉದಯವಾಣಿ ಸ್ಪರ್ಧೆ ಆಯೋಜಿಸಿದೆ. ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿದ ಸ್ಪರ್ಧೆಯನ್ನು ಗ್ರಾಮೀಣ ಮಕ್ಕಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗಿದೆ. ತಾಲೂಕು ಮಟ್ಟದಲ್ಲಿ ವಿಜೇತರಾದ ಮಕ್ಕಳಿಗೆ ಜಿಲ್ಲಾಮಟ್ಟದಲ್ಲಿ ನ. 4ರಂದು ಸ್ಪರ್ಧೆ ನಡೆಯಲಿದೆ ಎಂದರು.

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕ ಸತೀಶ್‌ ಕುಮಾರ್‌ ರೈ ಶುಭಹಾರೈಸಿದರು. ಆರ್ಟಿಸ್ಟ್‌ ಫೋರಂನ ಉಪಾಧ್ಯಕ್ಷ ಪೆರ್ಮುದೆ ಮೋಹನ್‌ ಕುಮಾರ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉದಯವಾಣಿ ಮ್ಯಾಗಜಿನ್‌ ವಿಭಾಗ ಮತ್ತು ಸ್ಪೆಷಲ್‌ ಇನಿಶಿಯೇಟಿವ್ಸ್‌ ರಾಷ್ಟ್ರೀಯ ಮುಖ್ಯಸ್ಥ ಆನಂದ್‌ ಕೆ. ಸ್ವಾಗತಿಸಿ, ವರದಿಗಾರ ಎನ್‌. ಕೆ. ನಾಗರಾಜ್‌ ಕಾರ್ಯಕ್ರಮ ನಿರ್ವಹಿಸಿದರು.

ಸ್ಪರ್ಧೆಯ ಸ್ಥಳೀಯ ಪ್ರಾಯೋಜಕರಾಗಿ ಜಿ. ಎಲ್‌. ಆಚಾರ್ಯ ಜುವೆಲರ್, ಮುಖ್ಯ ಪ್ರಾಯೋಜಕರಾಗಿ ಕ್ಯಾಂಪ್ಕೋ ಲಿ., ಹ್ಯಾಂಗ್ಯೋ ಐಸ್‌ಕ್ರೀಂ, ಮೋಡರ್ನ್ಕಿ ಚನ್ಸ್‌, ಮೆಡಿಮಿಕ್ಸ್‌ ಸಹಕರಿಸಿದರು. ವಿವಿಧ ವಿಭಾಗಗಳಲ್ಲಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.