4 ತಿಂಗಳಿಂದ ಅತಿಥಿ ಶಿಕ್ಷಕರಿಗೂ ವೇತನವಿಲ್ಲ


Team Udayavani, Nov 9, 2018, 6:45 AM IST

untitled-1.jpg

ಸುಳ್ಯ: ರಾಜ್ಯದ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಅತಿಥಿ ಶಿಕ್ಷಕರಿಗೆ ದಸರಾ ಬಳಿಕ ಈಗ ದೀಪಾವಳಿ ಹಬ್ಬದ ಸಂಭ್ರಮವೂ ಇಲ್ಲ. ಏಕೆಂದರೆ, ಈ ಸಿಬ್ಬಂದಿಗೆ ನಾಲ್ಕು ತಿಂಗಳಿನಿಂದ ಮಾಸಿಕ ಗೌರವಧನವೇ ಸಿಕ್ಕಿಲ್ಲ. 2018-19ನೇ ಸಾಲಿಗೆ ಪ್ರಾಥಮಿಕ ಶಾಲೆಗಳ 12,500 ಮತ್ತು ಪ್ರೌಢಶಾಲೆಗಳ 3,100 ಹುದ್ದೆಗಳು ಸೇರಿ ಖಾಲಿ ಇರುವ ಒಟ್ಟು 15,600 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಸರಕಾರವು ಶಿಕ್ಷಣ ಇಲಾಖೆ ಮೂಲಕ ನೇಮಕ ಮಾಡಿಕೊಂಡಿತ್ತು. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಧನ ತಿಂಗಳಿಗೆ 10,500 ರೂ. ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ 12,500 ರೂ. ನಿಗದಿಪಡಿಸಿ ಆದೇಶಿಸಿತ್ತು.
ಸರಕಾರದ ಸುತ್ತೋಲೆಯಂತೆ ಶಿಕ್ಷಣ ಇಲಾಖೆ ಈ ಜೂನ್‌ನಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿತ್ತು. ಆದರೆ
ನಾಲ್ಕು ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ ಎಂಬುದು ಶಿಕ್ಷಕರ ಗೋಳು.

ಶಿಕ್ಷಕರ ಕೊರತೆಗೆ ಪರಿಹಾರ: ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತೀವ್ರ ಸ್ಥಿತಿಗೆ ತಲುಪಿದಾಗ ಅತಿಥಿ ಶಿಕ್ಷಕರ ನೇಮಕದ
ಮೂಲಕ ಪರಿಸ್ಥಿತಿಯಲ್ಲಿ ಸುಧಾರಣೆ ತರುವುದು ಸರಕಾರದ ಇಚ್ಛೆಯಾಗಿತ್ತು. ಹೀಗಾಗಿ ನೇಮಕ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿತ್ತು. ಆದರೆ ಬಳಿಕ ವೇತನ ನೀಡುವುದನ್ನು ಅದು ಮರೆತಂತಿದೆ ಎಂದು ಅತಿಥಿ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಳ ಇಲ್ಲದೆ ಕೆಲಸ ಮಾಡುವುದು ಹೇಗೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ ಈ ಹಿಂದೆ 5,000 ರೂ. ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 6,500ರೂ. ವೇತನ ನಿಗದಿ ಪಡಿಸಲಾಗಿತ್ತು. ಈ ವರ್ಷ ಮಾಸಿಕ ಗೌರವ ಧನವನ್ನು ಸರಕಾರ ಹೆಚ್ಚಿಸಿತ್ತು. 

ತಾಂತ್ರಿಕ ಕಾರಣದ ಸಬೂಬು: ಗೌರವಧನ ವಿಳಂಬವಾಗಲು ತಾಂತ್ರಿಕ ತೊಂದರೆಗಳು ಕಾರಣ ಎನ್ನುವುದು  ಶಿಕ್ಷಣ ಇಲಾಖೆ ನೀಡುತ್ತ ಬಂದಿರುವ ಕಾರಣ. ಆದರೆ ಸರಕಾರದ ಅಧೀನದಲ್ಲಿರುವ ಶಿಕ್ಷಣ ಇಲಾಖೆಯೇ ಈ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಅದಾಗಿಲ್ಲ. ದಸರಾ ಬಳಿಕ ದೀಪಾವಳಿಗೂ ಅವರಿಗೆ ವೇತನ ಸಿಕ್ಕಿಲ್ಲ. ಸೂಕ್ತ ಸಮಯದಲ್ಲಿ ಸರಕಾರ ನಿಗದಿಪಡಿಸಿದ ವೇತನ ನೀಡುವುದಕ್ಕೆ ಇಲಾಖೆ ಮುತುವರ್ಜಿ ವಹಿಸಬೇಕು. ಇಲಾಖೆಯ ನಿರ್ಲಕ್ಷ್ಯದಿಂದಲೇ ಈ ಗೊಂದಲ ಉಂಟಾಗುತ್ತಿದೆ ಎನ್ನುವುದು ಅತಿಥಿ ಶಿಕ್ಷರ ವಲಯದಿಂದ ಕೇಳಿಬರುವ ಆರೋಪ. ವೇತನ ವಿಳಂಬ ಕುರಿತು ಅತಿಥಿ ಶಿಕ್ಷಕರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಳಿ ವಿಚಾರಿಸಿದರೆ, ಸರಕಾರದಿಂದ ಬಿಡುಗಡೆಗೊಂಡಿದೆ, ಶೀಘ್ರ ನಿಮ್ಮ ಬ್ಯಾಂಕು ಖಾತೆಗೆ ತಲುಪುತ್ತದೆ ಎನ್ನುವ ಉತ್ತರ ನೀಡುತ್ತಾರೆ. ಆದರೆ ವೇತನ ಇನ್ನೂ ಶಿಕ್ಷಕರ ಖಾತೆ ಸೇರಿಲ್ಲ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವೇತನ ನೀಡಲಾಗಿದೆ ಎನ್ನುವ ಮಾಹಿತಿ ಇದ್ದರೂ ಅದೂ
ಖಚಿತಗೊಂಡಿಲ್ಲ.

ಸರಕಾರದಿಂದ ಹಣ ಬಿಡುಗಡೆಗೊಂಡು ತಾ.ಪಂ. ಕಚೇರಿಗೆ ಬಂದಿದೆ. ತಾಂತ್ರಿಕ ಕಾರಣಗಳಿಂದ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವಲ್ಲಿ ತೊಡಕು ಕಂಡುಬಂದ ಕಾರಣ ತಡವಾಗಿದೆ. ಕೆಲವೇ ದಿನಗಳಲ್ಲಿ ಅತಿಥಿ ಶಿಕ್ಷಕರ ಖಾತೆಗೆ ಬಾಕಿ ಇರುವ ಎಲ್ಲ ವೇತನ ಪಾವತಿಯಾಗಲಿದೆ. 
● ವಾಲ್ಟರ್‌ ಡಿಮೆಲ್ಲೊ, ಡಿಡಿಪಿಐ, ಮಂಗಳೂರು

ಬಾಲಕೃಷ್ಣ ಭೀಮಗುಳಿ 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.