“ಮಾಂದಲಪಟ್ಟಿ’ ದಾರಿ ಸಿದ್ಧ: 3 ತಿಂಗಳ ಬಳಿಕ ಬೆಟ್ಟದತ್ತ ಪ್ರವಾಸಿಗರು

Team Udayavani, Nov 9, 2018, 11:50 AM IST

manda.jpg

ಸುಳ್ಯ: ಸುಮಾರು ಮೂರು ತಿಂಗಳುಗಳಿಂದ ಸಂಪರ್ಕ ಕಡಿತಗೊಂಡಿದ್ದ ಪ್ರವಾಸಿಗರ ನೆಚ್ಚಿನ ತಾಣ ಕೊಡಗಿನ ಮಾಂದಲಪಟ್ಟಿಯ ಸಂಪರ್ಕ ರಸ್ತೆಗಳು ತಾತ್ಕಾಲಿಕ ದುರಸ್ತಿ ಕಂಡಿದ್ದು, ಪ್ರವಾಸಿಗರು ಬೆಟ್ಟದತ್ತ ಮುಖ ಮಾಡಿದ್ದಾರೆ.

ಪ್ರಾಕೃತಿಕ ವಿಕೋಪದಿಂದಾಗಿ ಬೆಟ್ಟದ ರಸ್ತೆಗಳು ಸಂಪೂರ್ಣ ಹಾನಿಗೀಡಾಗಿ ಆ. 14ರಿಂದ ಬೆಟ್ಟ ಏರುವುದು ಅಸಾಧ್ಯವಾಗಿತ್ತು. ಈಗ ಪ್ರವಾಸಿಗರ ಸಂಚಾರದೊಂದಿಗೆ ಪ್ರವಾಸೋದ್ಯಮವನ್ನೇ ನಂಬಿ ಜೀವನ ಸಾಗಿಸುವ ಕುಟುಂಬಗಳಿಗೂ ಅನುಕೂಲವಾಗಿದೆ.

ಜೀಪು ಮಾತ್ರ ಓಡಾಟ
ರಸ್ತೆಗಳ ತಾತ್ಕಾಲಿಕ ದುರಸ್ತಿ ಮುಗಿದಿದೆ. ಶಾಶ್ವತ ಕಾಮಗಾರಿ ಪ್ರಗತಿಯಲ್ಲಿದೆ. ಜೀಪುಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರನ್ನು ಹೊತ್ತುಕೊಂಡು ಹಲವು ಜೀಪುಗಳು ಬೆಟ್ಟ ಏರುತ್ತಿವೆ. ನಾಲ್ಕು ರಸ್ತೆಗಳ ಪೈಕಿ ಕಾಲೂರು ಗ್ರಾಮದ ರಸ್ತೆ ಓಡಾಟಕ್ಕೆ ಹೆಚ್ಚು ಸೂಕ್ತ ಎನ್ನುತ್ತಾರೆ ಕೊಡಗು ಜಿ.ಪಂ. ಎಂಜಿನಿಯರ್‌.

ರಸ್ತೆಯ ಇಕ್ಕೆಲಗಳಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ನಾಶಗೊಂಡಿರುವ ಹಲವು ಹೆಕ್ಟೇರ್‌ ಭೂ ಪ್ರದೇಶಗಳನ್ನು ವೀಕ್ಷಿಸಿಕೊಂಡು ಪ್ರವಾಸಿಗರು ಬೆಟ್ಟ ಏರುತ್ತಾರೆ. ಸಂಪರ್ಕ ರಸ್ತೆಯ ಎರಡೂ ಬದಿಗಳಲ್ಲಿ ಕಾಣಿಸುತ್ತಿದ್ದ ಎಕರೆಗಟ್ಟಲೆ ಕಾಫಿ ತೋಟ, ಗದ್ದೆ, ಪ್ರಕೃತಿ ರಮಣೀಯ ದೃಶ್ಯಗಳು ಮರೆಯಾಗಿ ಈಗ ಅಲ್ಲಿನ ಚಹರೆಯೇ ಬದಲಾಗಿದೆ. ಇದು ಕೂಡ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಮುಗಿಲಪೇಟೆ
ದೇಶದ ನಾನಾ ಭಾಗಗಳಿಂದ ಚಾರಣಕ್ಕೆಂದೂ ಮಾಂದಲಪಟ್ಟಿಗೆ ನೂರಾರು ಮಂದಿ ಆಗಮಿಸುತ್ತಾರೆ. ಇಲ್ಲಿನ ಗಿರಿ-ಕಂದರಗಳು ಚಾರಣಿಗರ ವಿಶೇಷ ಆಕರ್ಷಣೆ. ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಗಾಳಿಪಟ ಸಿನೆಮಾದಲ್ಲಿ ಮುಗಿಲಪೇಟೆ ಎಂದು ಬಣ್ಣಿಸಲಾಗಿತ್ತು.

ಮಾಂದಲಪಟ್ಟಿಯು ಪುಷ್ಪಗಿರಿ ವನ್ಯಧಾಮದ ವ್ಯಾಪ್ತಿಯೊಳಗಿದ್ದು, ಪಹಣಿ ಪತ್ರದಲ್ಲಿ ಬೆಟ್ಟದ ವಿಸ್ತೀರ್ಣ 8 ಸಾವಿರ ಹೆಕ್ಟೇರ್‌ ಎಂದು ನಮೂ ದಿಸಲಾಗಿದೆ. ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಗೆ ಸೇರಿರುವ ಈ ಪ್ರದೇಶವನ್ನು ವರ್ಷಕೊಮ್ಮೆ ಟೆಂಡರ್‌ ಮೂಲಕ ಗುತ್ತಿಗೆ ನೀಡಲಾಗುತ್ತದೆ. ಈ ವರ್ಷ 11.50 ಲ.ರೂ.ಗೆ ನೀಡಲಾಗಿತ್ತು. ಗುತ್ತಿಗೆ ಪಡೆದು ಕೊಂಡವರು ಪಾರ್ಕಿಂಗ್‌ ಶುಲ್ಕದಿಂದ ಆದಾಯ ಸಂಗ್ರಹಿಸಿಕೊಳ್ಳಲು ಅವಕಾಶವಿದೆ. 

ನಾಲ್ಕು ದಾರಿಗಳು
ಅಬ್ಬಿ ಪಾಲ್ಸ್‌-ದೇವಸ್ತೂರು-ಮಾಂದಲಪಟ್ಟಿ ಹಳೆ ರಸ್ತೆ ಸುಧಾರಣೆ ಕಂಡಿದೆ. ಕಾಲೂರು-ಪಚ್ಚಿನಾಡು-ಮುಟ್ಲು ರಸ್ತೆ, ನಿಡುದಾಣೆ ಗ್ರಾಮದಿಂದ ಸಂಪರ್ಕ ಕಲ್ಪಿಸುವ ಹೆಬ್ಬೇಟೆಗೇರಿ-ದೇವಸ್ತೂರು ರಸ್ತೆಯ ಕಾಲೂರು-ಮಾಂದಲಪಟ್ಟಿ ರಸ್ತೆ, ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯ ದೇವಸ್ತೂರು-ಕಾಳೂರು ರಸ್ತೆ ಹಾಗೂ ಪಚ್ಚಿನಾಡು, ಹಮ್ಮಿಯಾಲ, ಮುಟೂರು ಭಾಗದ ರಸ್ತೆಗಳು ಪ್ರಾಕೃತಿಕ ವಿಕೋಪದಿಂದ ಹಾನಿಗೀಡಾಗಿದ್ದವು.

ಸೌಂದರ್ಯಕ್ಕೆ ಧಕ್ಕೆಯಾಗಿಲ್ಲ
ಹಲವು ಬಾರಿ ಮಾಂದಲಪಟ್ಟಿ ಬೆಟ್ಟ ಏರಿದ್ದೇನೆ. ಪ್ರಾಕೃತಿಕ ವಿಕೋಪದ ಬಳಿಕ ಮೊದಲ ಸಲ ತೆರಳಿದ್ದೇನೆ. ಬೆಟ್ಟದ ಸೌಂದರ್ಯಕ್ಕೆ ಧಕ್ಕೆ ಆಗಿಲ್ಲ. ಸಂಪರ್ಕ ರಸ್ತೆಯ ಇಕ್ಕೆಲಗಳಲ್ಲಿ ಸಾಕಷ್ಟು ಹಾನಿಯಾಗಿದೆ. ಈಗ ಜೀಪು ಮಾತ್ರ ಬೆಟ್ಟ ಏರಬಲ್ಲುದು.
 ಶಶಿಕುಮಾರ್‌ ಸುಳ್ಯ, ಚಾರಣಿಗ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.