ಗುಂಡ್ಯದಲ್ಲಿ ಮತ್ತೆ ಲಾರಿಗಳ ಪರದಾಟ

Team Udayavani, Nov 13, 2018, 10:20 AM IST

nelyadi.jpg

ನೆಲ್ಯಾಡಿ: ಶಿರಾಡಿ ಘಾಟಿಯಲ್ಲಿ ನ. 12ರಿಂದ ಘನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದೆಂದು ಮಾಧ್ಯಮಗಳಲ್ಲಿ ಪ್ರಕಟವಾದ ಜಿಲ್ಲಾಧಿಕಾರಿಗಳ ಹೇಳಿಕೆಗಳನ್ನು ನಂಬಿ ಬಂದ ಲಾರಿ, ಟ್ಯಾಂಕರ್‌ ಇತ್ಯಾದಿ ಘನ ವಾಹನಗಳು ಗುಂಡ್ಯದಲ್ಲಿ ಸೋಮವಾರ ಮತ್ತೆ ಸಂಕಷ್ಟಕ್ಕೆ ಸಿಲುಕಿದವು.

ಸೋಮವಾರ ಬೆಳಗ್ಗಿನಿಂದಲೇ ಹಾಸನ, ಸಕಲೇಶಪುರ ಕಡೆಯಿಂದ ಘನ ವಾಹನಗಳು ಘಾಟಿ ಇಳಿದು ಬಂದವು. ಅವುಗಳನ್ನು ಗುಂಡ್ಯದಲ್ಲಿ ತಡೆಯಲಾಯಿತು. ಅದೇ ರೀತಿ ಮಂಗಳೂರು ಕಡೆಯಿಂದ ಬಂದ ಲಾರಿಗಳನ್ನು ಮುಂದುವರಿಯಲು ಉಪ್ಪಿನಂಗಡಿ ಪೊಲೀಸರು ಬಿಡಲಿಲ್ಲ. ಸಂಜೆವರೆಗೂ ದ.ಕ. ಜಿಲ್ಲಾಧಿಕಾರಿ ಕಚೇರಿಯಿಂದ ಸ್ಪಷ್ಟ ಆದೇಶ ಬಾರದ ಕಾರಣ ಸ್ಥಳದಲ್ಲಿ ಗೊಂದಲ ಏರ್ಪಟ್ಟಿತು. ಟನ್‌ಗಟ್ಟಲೆ ಭಾರ ಹೇರಿಕೊಂಡು
ಘಾಟಿ ಇಳಿದು ಬಂದ ಕೆಲವು ಲಾರಿಗಳು ಅಪರಾಹ್ನ 3 ಗಂಟೆಯ ತನಕ ಕಾದು ಮರಳಿ ಘಾಟಿ ಮೂಲಕವೇ ಸಕಲೇಶಪುರದ ಕಡೆಗೆ ಸಾಗಿದ ಘಟನೆಯೂ ನಡೆಯಿತು.

ಜಿಲ್ಲಾಡಳಿತ ಸ್ಪಷ್ಟ ತೀರ್ಮಾನ ಕೈಗೊಳ್ಳದೇ ಇರುವುದರಿಂದ ಲಾರಿ ಚಾಲಕರು ದಿನಂಪ್ರತಿ ಸುತ್ತುಬಳಸಿ ಸಾಗುವ ಅನಿವಾರ್ಯತೆಯಲ್ಲಿ ಸಿಲುಕಿದ್ದಾರೆ. ಗುಂಡ್ಯದ ಗೇಟ್‌ನಲ್ಲಿ ಕರ್ತವ್ಯದಲ್ಲಿರುವ ಪೊಲೀಸರು ಲಾರಿಗಳನ್ನು ಮುಂದುವರಿಯಲು ಬಿಡಲಾರದೆ; ಚಾಲಕರ ಪ್ರಶ್ನೆಗಳಿಗೂ ಉತ್ತರಿಸಲಾಗದೆ ಹೈರಾಣಾಗಿದ್ದಾರೆ.

ಹಾಸನ ಜಿಲ್ಲಾಡಳಿತ ಶಿರಾಡಿ ಘಾಟಿ ರಸ್ತೆಯನ್ನು ಘನ ವಾಹನ ಸಂಚಾರಕ್ಕೆ ಮುಕ್ತ ಗೊಳಿಸಿಲ್ಲ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವೂ ಆದೇಶ ಹೊರಡಿಸಿಲ್ಲ. ಘನ ವಾಹನ ಸಂಚಾರಕ್ಕೆ ಉಭಯ ಜಿಲ್ಲಾಡಳಿತಗಳು ಕೆಲವೇ ದಿನಗಳಲ್ಲಿ ಏಕಕಾಲಕ್ಕೆ ಆದೇಶ ಹೊರಡಿಸಲಿವೆ. ಹಾಗಿದ್ದೂ ಕೆಲವು ಲಾರಿಗಳು ಘಾಟಿ ಇಳಿದಿರುವುದು ಹೇಗೆ ಎಂಬ ಬಗ್ಗೆ ಮಾಹಿತಿ ಇಲ್ಲ.
ಕುಮಾರ್‌, ಅಪರ ಜಿಲ್ಲಾಧಿಕಾರಿ, ದ.ಕ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.