ಆಪತ್ತುಗಳನ್ನು ಆತ್ಮ ವಿಶ್ವಾಸದಿಂದ ಪರಿಹರಿಸಿ: ಕೆ.ಎಂ

Team Udayavani, Nov 17, 2018, 3:14 PM IST

17-november-17.gif

ನೆಹರೂನಗರ : ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸಿದಾಗ ವ್ಯಕ್ತಿತ್ವದ ಗಟ್ಟಿತನ ಪ್ರಕಟಗೊಳ್ಳುತ್ತದೆ. ವಿಪತ್ತಿನ ಸಂದರ್ಭದಲ್ಲಿ ಅಂಜಿಕೆಯಿಂದ ಅಳುಕಿ ನಡೆದರೆ ಅನಾಹುತ ಉಂಟಾಗುತ್ತದೆ. ಕಷ್ಟ ಬಂದಾಗ ಕುಗ್ಗದೆ ಮುನ್ನಡೆಯಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಎಂ. ಕೃಷ್ಣ ಭಟ್‌ ಹೇಳಿದರು.

ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆಯನ್ನು ನೀಡುವ ಕನಸುಗಳು -2018 ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಸೋತಾಗ ನಿರಾಶೆಯನ್ನು ಅನುಭವಿಸದೆ, ಬದುಕಿನ ಧ್ಯೇಯವನ್ನು ಮರೆಯದೆ, ಗೆಲುವಿನತ್ತ ಮುನ್ನುಗ್ಗಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಸರಳ ಬದುಕಿನ ಮುನ್ನೋಟ, ಮಾನವೀಯ ಮಿಡಿತ, ಪರಂಪರೆಯ ಮೇಲಿನ ಗೌರವಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಾಗ ಮನಸ್ಸು ವಿಕಾಸಗೊಳ್ಳುತ್ತದೆ. ಸೃಜನಶೀಲತೆ, ಧೈರ್ಯಮತ್ತು ಛಲ ಇದ್ದರೆ ಕನಸನ್ನು ನನಸಾಗಿಸಲು ಸಾಧ್ಯ. ಭವಿಷ್ಯದ ಕುರಿತು ಕನಸುಗಳು ಇದ್ದರೆ ಜೀವನ ಪರಿಪೂರ್ಣವಾಗಿರುತ್ತದೆ. ಕ್ಷಮತೆಯನ್ನು ಸರಿಯಾಗಿ ಉಪಯೋಗಿಸಿಕೊಳ್ಳದಿದ್ದರೆ ಎಲ್ಲವೂ ವ್ಯರ್ಥ. ವೈಯಕ್ತಿಕ ಕನಸಿನ ಜತೆಗೆ ದೇಶವನ್ನು ಉನ್ನತಿಗೇರಿಸುವ ಕನಸನ್ನು ಪ್ರತಿಯೊಬ್ಬರೂ ಕಾಣಬೇಕು ಎಂದರು.

ಕನಸುಗಳ ಆಗರ
ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಅದ್ಭುತ ಕನಸುಗಳ ಆಗರ. ಅವರ ಅಂತರಂಗದಲ್ಲಿ ಹರಿಯುವ ಕನಸುಗಳ ಶಕ್ತಿ ಸಾಮರ್ಥ್ಯಗಳು ಅಪಾರ. ಮನಸ್ಸನ್ನು ಸದಾ ಕ್ರಿಯಾಶೀಲವಾಗಿರಿಸುವ ವಿದ್ಯಾರ್ಥಿಗಳ ಕನಸನ್ನು ಈಡೇರಿಸುವ ಕಾರ್ಯವನ್ನು ಈ ಕಾಲೇಜು ಮಾಡುತ್ತಿದೆ. ಇದರ ಸಾಕಾರಕ್ಕಾಗಿ ಸಮಾಜಮುಖಿ  ವ್ಯಕ್ತಿತ್ವನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಸಂಚಾಲಕ ಸಂತೋಷ್‌ ಬಿ., ಸದಸ್ಯರಾದ ರವಿ ಮುಂಗ್ಲಿಮನೆ, ಶ್ರೀನಿವಾಸ್‌ ಭಟ್‌ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಶ್ರೀಧರ್‌ ಶೆಟ್ಟಿಗಾರ್‌ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಾಂಶುಪಾಲ ಜೀವನದಾಸ್‌ ವಂದಿಸಿದರು. ಉಪನ್ಯಾಸಕಿ ದಯಾಮಣಿ ಕಾರ್ಯಕ್ರಮ ನಿರ್ವಹಿಸಿದರು.

ವೈವಿಧ್ಯಮಯ ಸ್ಪರ್ಧೆಗಳು
ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ, ವಿಜ್ಞಾನ ಮಾದರಿ, ಚರ್ಚಾಸ್ಪರ್ಧೆ, ಕಂಪ್ಯೂಟರ್‌ ಪವರ್‌ ಪಾಯಿಂಟ್‌, ಮುಖವರ್ಣಿಕೆ, ಪ್ರಾಕೃತಿಕ ರಂಗೋಲಿ, ಗೂಡು ದೀಪ, ದೃಶ್ಯಕಲೆ, ಚದುರಂಗ, ಯವವಿಜ್ಞಾನಿ ಸ್ಪರ್ಧೆಗಳು ನಡೆದವು. ತತ್‌ಕ್ಷಣವೇ ಬಹುಮಾನ ಗೆಲ್ಲಬಹುದಾದ ಆಸಕ್ತಿದಾಯಕ ಸ್ಪರ್ಧೆಗಳಾದ ಸುಡೊಕು, ಪದಬಂಧ, ಒಗಟು, ಘನಾಕೃತಿಯ ಜೋಡಣೆ, ಏಕಾಗ್ರತೆಯ ಪರೀಕ್ಷೆಗಳನ್ನು ನಡೆಸಲಾಯಿತು. ಉಪಪ್ರಾಂಶುಪಾಲ ಪರಮೇಶ್ವರ ಶರ್ಮರ ನೇತೃತ್ವದಲ್ಲಿ ಅಡ್ಯನಡ್ಕದ ವಾರಣಾಸಿಯನ್ನು ಸಂದರ್ಶಿಸಿದ ವಿದ್ಯಾರ್ಥಿಗಳು ಪ್ರಗತಿಪರ ಕೃಷಿ ಚಟುವಟಿಕೆಗಳ ಕುರಿತು ಮಾಹಿತಿಗಳನ್ನು ಪಡೆದುಕೊಂಡರು. ಸುಮಾರು 26 ಪ್ರೌಢಶಾಲೆಗಳ 636 ವಿದ್ಯಾರ್ಥಿಗಳು ಮತ್ತು 51 ಅಧ್ಯಾಪಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.