ನೆರೆ ನಿರಾಶ್ರಿತರಿಗೆ ಮನೆ, ನಿವೇಶನದ ಮಾಹಿತಿಯೇ ಇಲ್ಲ!


Team Udayavani, Nov 21, 2018, 11:23 AM IST

21-november-4.gif

ಅರಂತೋಡು: ಜೋಡುಪಾಲದಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ಮೂರು ತಿಂಗಳು ಕಳೆದರೂ ನಿರಾಶ್ರಿತರಿಗೆ ನಿವೇಶನ ಹಾಗೂ ಮನೆ ಒದಗಿಸುವ ಕುರಿತು ಸರಕಾರ ಅಧಿಕೃತ ಮಾಹಿತಿ ನೀಡದಿರುವ ಹಿನ್ನೆಲೆಯಲ್ಲಿ ಜೋಡುಪಾಲ, ಎರಡನೇ ಮೊಣ್ಣಂಗೇರಿ ನಿರಾಶ್ರಿತರು ಕೊಡಗು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ.

ಸ್ಥಳಕ್ಕೆ ಇಸ್ರೋದ ಭೂವಿಜ್ಞಾನಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಜೋಡುಪಾಲ ಹಾಗೂ ಎರಡನೇ ಮೊಣ್ಣಂಗೇರಿ ಪ್ರದೇಶಗಳು ಜನವಸತಿಗೆ ಯೋಗ್ಯವಲ್ಲ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ನಿರಾಶ್ರಿತರಿಗೆ ಯೋಗ್ಯವಾದ ನಿವೇಶನ ಹುಡುಕುವ ಪ್ರಯತ್ನ ಮಾಡಿತ್ತು. ನಿರಾಶ್ರಿತರಿಗೆ ಮನೆ ಕಟ್ಟಲು ಕೊಡಗು ಸಂಪಾಜೆ ಶಾಲೆಯ ಬಳಿ ಒಂದೂವರೆ ಎಕ್ರೆ ಮತ್ತು ಮದೆನಾಡು ಸಮೀಪದ ಗೋಳಿಕಟ್ಟೆ ಎಂಬಲ್ಲಿ 5 ಎಕ್ರೆ ಜಾಗ ಗುರುತಿಸಲಾಗಿದೆ. ಮೂರು ತಿಂಗಳಿಂದ ಮಾದರಿ ಮನೆಗಳ ನಿರ್ಮಾಣ ಮಾಡಿ, ಪ್ರಯತ್ನ ಮುಂದುವರಿಸಲಾಗಿದೆ. ಆದರೆ. ನಿರಾಶ್ರಿತರ ಕುಟುಂಬಗಳಿಗೆ ಮೊದಲಿಗೆ 3,800 ರೂ., ಸಂಪೂರ್ಣ ಮನೆ ಕಳೆದುಕೊಂಡವರಿಗೆ 1,01,900 ರೂ. ಹಾಗೂ ವಾಸಕ್ಕೆ ಯೋಗ್ಯವಲ್ಲದ ಮನೆಗಳಿಗೆ ಹಾನಿ ಲೆಕ್ಕದಲ್ಲಿ ಪರಿಹಾರ ನೀಡಲಾಗಿದೆ. ಇನ್ನೂ ಕೆಲವರಿಗೆ ಪರಿಹಾರ ಸಿಗಲು ಬಾಕಿ ಇದೆ.

ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡುವ ಸಂದರ್ಭ ಸರಕಾರಿ ಸೌಲಭ್ಯದ ಭರವಸೆ ನೀಡಿ ಹೋಗುತ್ತಾರೆ. ಆದರೆ, ಈವರೆಗೂ ಅಧಿಕೃತ ಭರವಸೆ ಸಿಗದೆ ನಿರಾಶ್ರಿತರು ನೊಂದಿದ್ದಾರೆ. ಬೇಸಗೆಯಲ್ಲಾದರೆ ಮರದ ಕೆಳಗಾದರೂ ವಾಸ ಮಾಡಬಹುದು. ಮಳೆಗಾಲ ಬಂದರೆ ಹೇಗೆ? ಪರಿಹಾರ ಕೇಂದ್ರದಲ್ಲಿ ಎಷ್ಟು ದಿನ ಇರಬಹುದು? ಎಂಬ ಪ್ರಶ್ನೆ, ಚಿಂತೆಯಲ್ಲೇ ಇವರೆಲ್ಲ ಕಾಲ ಕಳೆಯುತ್ತಿದ್ದಾರೆ.

ನಿರಾಶ್ರಿತರ ಕೇಂದ್ರ ಸ್ಥಳಾಂತರ?
ಈ ಎಲ್ಲ ನೋವುಗಳ ನಡುವೆ ನಿರಾಶ್ರಿತರಿಗೆ ಇನ್ನೊಂದು ಕಹಿ ಸುದ್ದಿ ಲಭ್ಯವಾಗಿದೆ. ದ.ಕ. ಸಂಪಾಜೆ ಮತ್ತು ಕೊಡಗು ಸಂಪಾಜೆಯ ಎರಡು ನಿರಾಶ್ರಿತರ ಪರಿಹಾರ ಕೇಂದ್ರಗಳನ್ನು ಕೊಡಗು ಜಿಲ್ಲಾ ಕೇಂದ್ರಕ್ಕೆ ಸ್ಥಳಾಂತರಿಸುವ ಸುದ್ದಿ ಹರಡಿದೆ. ಈ ಕುರಿತೂ ಸರಕಾರದಿಂದ ಅಧಿಕೃತ ಮಾಹಿತಿ ಇಲ್ಲ. ಇಲ್ಲಿಯ ನಿರಾಶ್ರಿತರು ಸರಕಾರಿ ಕಚೇರಿ ಒಂದುಳಿದು ಮಿಕ್ಕೆಲ್ಲ ವಾಣಿಜ್ಯ – ವ್ಯವಹಾರಗಳಿಗೆ ಸುಳ್ಯ ತಾಲೂಕು ಕೇಂದ್ರ ಹಾಗೂ ಕಲ್ಲುಗುಂಡಿಯನ್ನೇ ಅವಲಂಬಿಸಿದ್ದಾರೆ. ಎರಡೂ ಪರಿಹಾರ ಕೇಂದ್ರಗಳನ್ನು ಕೊಡಗು ಜಿಲ್ಲಾ ಕೇಂದ್ರಕ್ಕೆ ಸ್ಥಳಾಂತರಿಸಿದರೆ ಪ್ರತಿಭಟಿಸುವುದಾಗಿ ನಿರಾಶ್ರಿತರು ಹೇಳುತ್ತಿದ್ದಾರೆ. ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಈಗ 24 ಕುಟುಂಬಗಳ 73 ಜನರು ವಾಸವಿದ್ದಾರೆ. ದ.ಕ. ಸಂಪಾಜೆ ಕಲ್ಲುಗುಂಡಿ ಶಾಲೆಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ 11 ಕುಟುಂಬಗಳ 24 ಜನರು ಆಶ್ರಯ ಪಡೆದಿದ್ದಾರೆ. ಅನಾರೋಗ್ಯಪೀಡಿತ 80ರ ಹರೆಯದ ವೃದ್ಧೆಯೊಬ್ಬರು ಇಲ್ಲಿದ್ದಾರೆ.

ಮಾಹಿತಿ ಬಂದಿಲ್ಲ
ಸರಕಾರದಿಂದ ಈ ತನಕ ಯಾವುದೇ ಮಾಹಿತಿ ನಮಗೂ ಬಂದಿಲ್ಲ. ಸರಕಾರ ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆ ಮಾಡಬಹುದು. ನಿರಾಶ್ರಿತರ ಪರಿಹಾರ ಕೇಂದ್ರವನ್ನು ಕೊಡಗು ಜಿಲ್ಲಾ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವ ಬಗ್ಗೆಯೂ ನಮಗೆ ಅಧಿಕೃತ ಮಾಹಿತಿ ಬಂದಿಲ್ಲ. ನಿರಾಶ್ರಿತರು ಚಿಂತೆ ಮಾಡುವ ಅಗತ್ಯ ಇಲ್ಲ.
-ಅವಿನಾಶ್‌ ಕಡೆಪಳ
ಕಲ್ಲುಗುಂಡಿ ದ.ಕ ಸಂಪಾಜೆ ನಿರಾಶ್ರಿತರ ಪರಿಹಾರ ಕೇಂದ್ರದ ಉಸ್ತುವಾರಿ

ಉಪವಾಸ ಸತ್ಯಾಗ್ರಹ
ಪ್ರಕೃತಿ ವಿಕೋಪ ಸಂಭವಿಸಿ ಮೂರು ತಿಂಗಳು ಕಳೆದರೂ ಸರಕಾರ ಯಾವುದೇ ಕ್ರಮ ಕೈಗೊಳ್ಳದೆ ಚಿಂತೆಯಾಗಿದೆ. ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಅಧಿಕಾರಿಗಳು, ಜನಪ್ರತಿನಿಧಿಗಳು ಬಂದಾಗ ಭರವಸೆ ನೀಡಿ ಹಿಂದಿರುಗುತ್ತಾರೆ. ಆದರೆ ಈ ತನಕ ಸರಕಾರದ ಕಡೆಯಿಂದ ಮನೆ, ನಿವೇಶನ ನೀಡುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ ಈ ಕಾರಣದಿಂದ ನಾವು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲು ಮಾತುಕತೆ ನಡೆಸುತ್ತಿದ್ದೇವೆ.
 -ಭುವನೇಶ್ವರಿ,
 ಜೋಡುಪಾಲ ನಿರಾಶ್ರಿತೆ

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.