ಗ್ರಾಮೀಣಕ್ಕೂ ಬಂತು 200 ರೂ. ಖೋಟಾನೋಟು!

Team Udayavani, Nov 22, 2018, 9:55 AM IST

note.jpg

ಸುಬ್ರಹ್ಮಣ್ಯ: ರಾಜ್ಯದಲ್ಲಿ ಖೋಟಾನೋಟು ಹಾವಳಿ ತೀವ್ರಗೊಂಡಿದೆ ಎನ್ನುವ ಆತಂಕದ ನಡುವೆಯೇ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಜಾಲ ಸಕ್ರಿಯವಾಗಿರುವ ಶಂಕೆ ಉಂಟಾಗಿದೆ. 

ಕೆಲವು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಇಲ್ಲಿನ ಬಡ ವ್ಯಾಪಾರಸ್ಥ ಮಹಿಳೆಯೊಬ್ಬರಿಂದ ಸಣ್ಣ ಪುಟ್ಟ ವಸುಗಳನ್ನು ಖರೀದಿಸಿ 200 ರೂ. ಮುಖ ಬೆಲೆಯ ನೋಟು ನೀಡಿ ತೆರಳಿದ್ದ. ನೋಟು ಪಡೆದ ಮಹಿಳೆ ತತ್‌ಕ್ಷಣ ಅದನ್ನು ಪರಿಶೀಲಿಸಿರಲಿಲ್ಲ. ಆದರೆ ವ್ಯಕ್ತಿ ಸ್ಥಳದಿಂದ ತೆರಳಿದ ಬಳಿಕ ಅವರಿಗೆ ನೋಟಿನ ಕುರಿತು ಅನುಮಾನ ಮೂಡಿದ್ದು, ಸೂಕ್ಷ್ಮವಾಗಿ ಗಮನಿಸಿದಾಗ ಖೋಟಾ ನೋಟು ಎನ್ನುವುದು ಖಚಿತವಾಗಿತ್ತು. ಇದೇ ರೀತಿ ಹಲವು ವ್ಯಾಪಾರಸ್ಥರು ವಂಚನೆ ಗೊಳಗಾಗಿರುವುದು ಸುಬ್ರ ಹ್ಮಣ್ಯದಲ್ಲಿ ಕೆಲವು ದಿನಗಳಲ್ಲಿ ನಡೆದಿದೆ.   

ಮೇಲ್ನೋಟಕ್ಕೆ ಅಸಲಿ ನೋಟನ್ನು ಹೋಲುತ್ತಿದೆ
 ಖೋಟಾನೋಟು ಮೇಲ್ನೋಟಕ್ಕೆ ಅಸಲಿ ನೋಟಿನಂತೆ ಕಾಣಿಸುತ್ತದೆ. ಇದನ್ನು ನಕಲಿ ಮುದ್ರಿಸಲಾಗಿದೆಯೇ ಅಥವಾ ಜೆರಾಕ್ಸ್‌ ಮಾಡಲಾಗಿದೆಯೇ ಎನ್ನುವುದು ಖಚಿತವಾಗಿಲ್ಲ. ಅಸಲಿ ನೋಟಿನ ಭದ್ರತಾ ವೈಶಿಷ್ಟಗಳನ್ನು ಹೋಲುವ ಶೇ.90 ಅಂಶ ಈ ನೋಟಿನಲ್ಲಿವೆ. ಆದರೆ ಸಣ್ಣ ಅಕ್ಷರದ ಸ್ಕ್ರಿಪ್ಟ್, ನೋಟಿನ ಒಳಗಿನ ಹೊಳೆಯುವ ಪಟ್ಟಿ ಹಾಗೂ ಬಲಬದಿಯಲ್ಲಿ ಬೆಳಕಿಗೆ ಹಿಡಿದಾಗ ಮಾತ್ರ ಕಾಣಿಸುವ ಮಹಾತ್ಮಾ ಗಾಂಧಿ ಮೊದಲಾದವುಗಳು ಮಹಿಳೆಗೆ ದೊರಕಿದ ನಕಲಿ ನೋಟಿನಲ್ಲಿ ಇಲ್ಲ. ಇನ್ನುಳಿದಂತೆ ಮಧ್ಯಭಾಗದ ಗಾಂಧೀಜಿ ಭಾವಚಿತ್ರ, ಕೋಡ್‌ ಸಂಖ್ಯೆ, ಲಾಂಛನ, ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ಮತ್ತು ಸ್ವತ್ಛ ಭಾರತ್‌ ಲಾಂಛನ ಸಹಿತ ಎಲ್ಲವೂ ಇದ್ದು, ಅಸಲಿ ನೋಟಿನಂತೆಯೇ ಕಂಡು ಬಂದಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಮಾನ್ಯವಾಗಿ ಪ್ರತಿದಿನವೂ ಜನಸಂದಣಿ ಇರುತ್ತದೆ. ಇಂತಹ ಸಂದರ್ಭ ಬಳಸಿ ಖೋಟಾನೋಟು ಚಲಾವಣೆಯನ್ನು ಕಿಡಿಗೇಡಿಗಳು ನಡೆಸುತ್ತಿದ್ದಾರೆ ಎಂಬ ಸಂದೇಹ ಮೂಡಿದೆ. ಕ್ಷೇತ್ರದ ರಸ್ತೆ ಬದಿ ಚಿಲ್ಲರೆ ವ್ಯಾಪಾರದಲ್ಲಿ ತೊಡಗಿರುವ ಮಹಿಳೆಯರು, ಮಕ್ಕಳು ಇರುವ ಅಂಗಡಿಯವರನ್ನೇ ಗುರಿಯಾಗಿಸಿ ಕೃತ್ಯ ಎಸಗಲಾಗುತ್ತದೆ. ಜನಜಂಗುಳಿ ನಡುವೆ ಫ‌ಕ್ಕನೆ ನೋಟು ಪರಿಶೀಲಿಸುವ ಗೋಜಿಗೆ ಹೋಗದ ವ್ಯಾಪಾರಸ್ಥರು ವಂಚನೆಗೆ ತುತ್ತಾಗುತ್ತಾರೆ.

ಕುಕ್ಕೆ ಸುಬ್ರಹ್ಮಣದಲ್ಲಿ ಹಲವು ವರ್ಷಗಳ ಹಿಂದೆ ಇದೇ ರೀತಿ ಹೊರಗಿನಿಂದ ಬಂದ ಕಳ್ಳನೋಟು ಚಲಾವಣೆ ಜಾಲವೊಂದು ಸಕ್ರಿಯವಾಗಿತ್ತು. ಸ್ಥಳೀಯ ದಿನಸಿ ಅಂಗಡಿ ಮಾಲಕರೊಬ್ಬರು ಮೋಸ ಹೋದ ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದ ಖೋಟಾ ನೋಟು ಚಲಾಯಿಸಿದಾತ ಸೆರೆಯಾಗಿದ್ದ. ಪ್ರಕರಣದ ವಿಚಾರಣೆಯ ಸಂದರ್ಭ ಕ್ಷೇತ್ರದ ಇಪ್ಪತ್ತಕ್ಕೂ ಅಧಿಕ ಮಂದಿ ನ್ಯಾಯಾಲಯದ ಮುಂದೆ ಸಾಕ್ಷ್ಯ ನುಡಿದಿದ್ದರು. ಆರೋಪಿಗಳಿಗೆ ಶಿಕ್ಷೆಯೂ ಆಗಿತ್ತು.

ವಂಚನೆ ಕುರಿತು ಮಾಹಿತಿ ಬಂದಿಲ್ಲ
ನಕಲಿ ನೋಟು ಹಾವಳಿ ಕುರಿತು ಇದು ವರೆಗೆ ದೂರು ಬಂದಿಲ್ಲ. ಮೋಸ ಹೋದ ವ್ಯಕ್ತಿಗಳು, ವ್ಯಾಪಾರಸ್ಥರು ದೂರು ನೀಡಿದಲ್ಲಿ ತನಿಖೆಗೆ ಅನುಕೂಲವಾಗುತ್ತದೆ. ದೂರು ನೀಡಲು ಹಿಂದೇಟು ಹಾಕಿದಲ್ಲಿ ತನಿಖೆಗೆ ಕಷ್ಟ. ಈಗ ನಡೆದ ಖೋಟಾನೋಟು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ಸಂಗ್ರಹಿಸುತ್ತೇವೆ.
ಮಾಧವ ಕೂಡ್ಲುಸಬ್‌ಇನ್‌ಸ್ಪೆಕ್ಟರ್‌, ಸುಬ್ರಹ್ಮಣ್ಯ ಪೊಲೀಸ್‌ ಠಾಣೆ
 
ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.