ಕುಕ್ಕೆ ರಥೋತ್ಸವ: ಅಪಾರ ಭಕ್ತರು ಭಾಗಿ

Team Udayavani, Dec 14, 2018, 10:00 AM IST

14-december-1.gif

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಅಂಗವಾಗಿ ಬುಧ ವಾರ ರಾತ್ರಿ ಪಂಚಮಿ ರಥೋತ್ಸವ ಹಾಗೂ ಗುರುವಾರ ಬ್ರಹ್ಮರಥೋತ್ಸವ ವೈಭವದಿಂದ ನೆರವೇರಿತು. 400 ವರ್ಷಗಳ ಇತಿಹಾಸವಿರುವ ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಕೊನೆಯ ಭಾರಿಗೆ ರಥಾರೂಢರಾದರು. ನಾಡಿನ ವಿವಿಧೆಡೆಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.

ದೇಗುಲದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ಬಳಿಕ ಪೂರ್ವಾಹ್ನ 6.41ರ ವೃಶ್ಚಿಕ ಲಗ್ನದಲ್ಲಿ ರಥೋತ್ಸವ ನೆರವೇರಿತು. ಈ ವೇಳೆ ನಾಗಸ್ವರ, ಪಂಚವಾದ್ಯ, ಬ್ಯಾಂಡ್‌, ಜಾಗಟೆ, ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಸಾಲಾಂಕೃತ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರು ಬ್ರಹ್ಮರಥಾರೂಢರಾದರು. ಬಳಿಕ ಮಹಾ ಮಂಗಳಾರತಿ ನೆರವೇರಿತು. ಬಳಿಕ ಭಕ್ತರಿಗೆ ಧನ, ಕನಕ, ಹೂವು, ಫಲವಸ್ತು ಪ್ರಸಾದಗಳನ್ನು ಅರ್ಚಕರು ರಥದಿಂದ ಎಸೆದರು. ಅಪಾರ ಭಕ್ತ ಜನರ ಜಯಘೋಷದೊಂದಿಗೆ ನಡೆದ ಮಹಾರಥೋತ್ಸವದಲ್ಲಿ ನಾಡಿನ ಭಕ್ತರು ರಥೋತ್ಸವ ವೀಕ್ಷಿಸಿದರು. ಭಕ್ತರು ರಥಕ್ಕೆ ಸಾಸಿವೆ, ನಾಣ್ಯ ಏಲಕ್ಕಿ, ಕಾಳುಮೆಣಸು ಇತ್ಯಾದಿಗಳನ್ನು ಅರ್ಪಿಸಿ, ಇಷ್ಟಾರ್ಥಗಳನ್ನು ಪ್ರಾರ್ಥಿಸಿಕೊಂಡರು.

ಭಕ್ತರ ಪ್ರಮಾಣ ಇಳಿಕೆ
ಗುರುವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ಒಳಾಂಗಣ ಪ್ರಾಂಗಣದಲ್ಲಿ ಉತ್ಸವ ಮೂರ್ತಿಯ ಬಲಿ ನಡೆದ ಬಳಿಕ ರಥಬೀದಿಯಲ್ಲಿ ಪಂಚಮಿ ರಥೋತ್ಸವ ನೆರವೇರಿತು. ಕಾಶಿಕಟ್ಟೆ ಮಹಾಗಣಪತಿ ಸನ್ನಿಧಿಯಲ್ಲಿ ಪೂಜೆ ನೆರವೇರಿತು. ಈ ಬಾರಿ ಪಂಚಮಿ ರಥೋತ್ಸವ ತಡರಾತ್ರಿ 1 ಗಂಟೆಗೆ ನೆರವೇರಿತು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಸಲ ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳಲ್ಲಿ ಭಕ್ತರ ಪ್ರಮಾಣ ಇಳಿಕೆಯಾಗಿತ್ತು.

ಗಣ್ಯರ ಉಪಸ್ಥಿತಿ
ಚಂಪಾಷಷ್ಠಿ ರಥೋತ್ಸವದ ವೇಳೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ಪ್ರಮೀಳಾ, ಹೈಕೋರ್ಟ್‌ ನ್ಯಾಯಾಧೀಶ ಸತ್ಯನಾರಾಯಣ, ಸುಳ್ಯ ನ್ಯಾಯಾಧೀಶ ಪುರುಷೋತ್ತಮ, ಪುತ್ತೂರು ಸಹಾಯಕ ಆಯುಕ್ತ ಎಚ್‌. ಕೆ. ಕೃಷ್ಣಮೂರ್ತಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಾರ್ಯನಿರ್ವಾಹಣಾಧಿಕಾರಿ ಎಚ್‌. ಎಂ. ರವೀಂದ್ರ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್‌, ನೂತನ ಬ್ರಹ್ಮರಥ ದಾನಿ ಉದ್ಯಮಿ ಅಜಿತ್‌ ರೈ, ಎಂ.ಬಿ. ಸದಾಶಿವ ಉಪಸ್ಥಿತರಿದ್ದರು. ಪಂಚಮಿ ಮತ್ತು ಚೌತಿ ದಿನಗಳಲ್ಲಿ ಮಾಜಿ ಸಚಿವ ರಮಾನಾಥ ರೈ, ವಿಧಾನಪರಿಷತ್‌ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಸಹಿತ ಹಲವು ಗಣ್ಯರು ದೇಗುಲಕ್ಕೆ ಭೇಟಿ ಇತ್ತರು. ಜಾತ್ರೆ ಪ್ರಯುಕ್ತ ದೇಗುಲ, ಇಲಾಖೆಗಳು, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೃಷಿ ಮೇಳ ಆಯೋಜಿಸಲಾಗಿತ್ತು.

ಇಂದು ನೌಕಾವಿಹಾರ 
ಇಂದು ಶ್ರೀ ಸುಬ್ರಹ್ಮಣ್ಯ ದೇವರ ಅವಭೃಥೋತ್ಸವ ಮತ್ತು ನೌಕಾ ವಿಹಾರ ಕುಮಾರಧಾರಾ ಪುಣ್ಯ ನದಿಯಲ್ಲಿ ನಡೆಯಲಿದೆ. ಈ ವೇಳೆ ದೇಗುಲದ ಯಶಸ್ವಿ ಆನೆ ಜಲಕ್ರೀಡೆಯಲ್ಲಿ ಸಂಭ್ರಮಿಸುವುದು ಮನ ಸೆಳೆಯುತ್ತದೆ. ಸ್ಥಳೀಯ ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುತ್ತಾರೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.