ಹೆತ್ತವರಿಲ್ಲದ ನಾಲ್ವರು ಹೆಣ್ಣು ಮಕ್ಕಳಿಗೆ ಸೂರೂ ಇಲ್ಲ!


Team Udayavani, Dec 19, 2018, 11:05 AM IST

19-december-3.gif

ಕೆಯ್ಯೂರು : ಬದುಕಿಗೆ ಆಸರೆ ಆಗಬೇಕಿದ್ದ ಅಪ್ಪ-ಅಮ್ಮನಿಲ್ಲದ ಕೊರಗು ಒಂದೆಡೆಯಾದರೆ, ವಾಸಕ್ಕೆ ಸೂರಿಲ್ಲದ ನೋವು ಇನ್ನೊಂದಡೆ. ಈಗಿರುವ ಮನೆಗೆ ಬಾಗಿಲು, ಕಿಟಕಿಗಳೇ ಇಲ್ಲದೆ ಮುರುಕಲು ಸ್ಥಿತಿಯಲ್ಲಿದೆ. ಶೌಚಾಲಯ, ಸ್ನಾನಗೃಹ ಸೌಲಭ್ಯವಿಲ್ಲದೆ ದಿನ ದೂಡುತ್ತಿರುವ ಪರಿಶಿಷ್ಟ ಜಾತಿ ಕುಟುಂಬದ ನಾಲ್ವರು ಹೆಣ್ಣು ಮಕ್ಕಳ ಅಸಹಾಯಕ ಬದುಕಿನ ಚಿತ್ರಣವಿದು.

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾ.ಪಂ. ವ್ಯಾಪ್ತಿಯ ಕೆಯ್ಯೂರು ದ್ವಾರದಿಂದ ಅರ್ಧ ಕಿ.ಮೀ. ದೂರದಲ್ಲಿ ರಸ್ತೆ ಸನಿಹದಲ್ಲಿದಲ್ಲಿಯೇ ಈ ಕುಟುಂಬ ವಾಸಿಸುತ್ತಿದೆ. ಹೆಣ್ಣುಮಕ್ಕಳ ತಂದೆ ಹಲವು ವರ್ಷದ ಹಿಂದೆಯೇ ನಿಧನರಾಗಿದ್ದರು. ಮೂರು ವರ್ಷದ ಹಿಂದೆ ತಾಯಿ ಸುಂದರಿ ಅವರು ನಿಧನರಾದ ಬಳಿಕ ಈ ಹೆಣ್ಣು ಮಕ್ಕಳು ಅನಾಥರಂತಾದರು.

ಹಿರಿಯ ಮಗಳು ನೇತ್ರಾ ಪುತ್ತೂರಿನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದ್ವಿತೀಯ ಪುತ್ರಿ ಪರಮೇಶ್ವರಿ ಖಾಸಗಿಯಾಗಿ ಪಿಯುಸಿ ಕಟ್ಟಿದ್ದಾರೆ. ಶಾರದಾ ಕುಮಾರಿ ಪ್ರಥಮ ಪಿಯುಸಿ ಹಾಗೂ ಕಿರಿಮಗಳು ರಂಜಿನಿ 9ನೇ ತರಗತಿ ಓದುತ್ತಿದ್ದಾರೆ. ಪರಮೇಶ್ವರಿ ಅವರು ತನ್ನ ಅಜ್ಜಿಯ ಜತೆ ಮನೆಯಲ್ಲಿದ್ದಾರೆ.  ಉಳಿದ ಮೂವರು ಹಾಸ್ಟೆಲ್‌ನಲ್ಲಿ ಆಸರೆ ಪಡೆದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಮನೆ ಮಂಜೂರಾಗಿತ್ತು
ಕೆಯ್ಯೂರು ಗ್ರಾ.ಪಂ.ನಿಂದ ಮೂರು ವರ್ಷಗಳ ಹಿಂದೆ ಬಸವ ವಸತಿ ಯೋಜನೆಯಡಿ ಸುಂದರಿ ಅವರಿಗೆ ಮನೆ ಮಂಜೂರಾಗಿತ್ತು. ಅಡಿಪಾಯ ಆಗಿ ಒಂದು ಭಾಗದ ಗೋಡೆ ನಿರ್ಮಾಣ ಆರಂಭವಾಗಿತ್ತು. ಈ ವೇಳೆ ಸುಂದರಿ ಮೃತಪಟ್ಟಿದ್ದರು. ಇದರಿಂದ ಮನೆ ಕಾಮಗಾರಿ ಅರ್ಧದಲ್ಲೇ ನಿಂತಿತ್ತು. ಅಧಿಕಾರಿಗಳು ಮನೆ ಅಡಿಪಾಯದ ಫೊಟೋ ತೆಗೆದಿದ್ದರೂ, ಪ್ರಥಮ ಹಂತದಲ್ಲಿ ದೊರೆಯಬೇಕಾದ ಸಹಾಯಧನ ಹಣ ಇನ್ನೂ ಪಾವತಿಯಾಗಿಲ್ಲ. ಆರ್ಥಿಕ ಸಮಸ್ಯೆಯಿಂದಾಗಿ ಕಳೆದ ನಾಲ್ಕು ವರ್ಷದಿಂದ ಮನೆ ಅಪೂರ್ಣ ಸ್ಥಿತಿಯಲ್ಲಿಯೇ ಇದೆ.

ಸಹಾಯಧನಕ್ಕೆ ಅಡ್ಡಿ
ಸುಂದರಿ ಅವರು ಆಧಾರ್‌ ಕಾರ್ಡ್‌ ನೀಡದ ಕಾರಣ ಹಣ ಪಾವತಿಗೆ ಅಡ್ಡಿ ಉಂಟಾಗಿತ್ತು. ಅವರ ನಿಧನದ ಬಳಿಕ ಸಮಸ್ಯೆ ಮತ್ತಷ್ಟು ಜಟಿಲವಾಯಿತು. ಆಗ ಮಕ್ಕಳು ವಯಸ್ಕರಾಗಿರಲಿಲ್ಲ. ಈಗ ಇಬ್ಬರು ಮಕ್ಕಳು ವಯಸ್ಕರಾಗಿದ್ದಾರೆ. ತಾಯಿ ಹೆಸರಿನಲ್ಲಿದ್ದ ಮನೆ ಹಿರಿಯ ಮಗಳು ನೇತ್ರಾ ಅವರ ಹೆಸರಿಗೆ ಆಗಿದೆ. ಆದರೆ ಬ್ಯಾಂಕ್‌ ಖಾತೆ, ಇತರ ದಾಖಲೆಗಳು ವರ್ಗಾವಣೆಯಾಗಿಲ್ಲ. ಆನ್‌ಲೈನ್‌ನಲ್ಲಿ ತಾಂತ್ರಿಕ ಅಡ್ಡಿ ಉಂಟಾಗಿದೆ. ಹಾಗಾಗಿ ಸರಕಾರದ ಸಹಾಯಧನ ಸಿಕ್ಕಿಲ್ಲ. ಪುತ್ತೂರು ತಾ.ಪಂ. ಅಧ್ಯಕ್ಷರ ಮನೆ ಸನಿಹದಲ್ಲೇ ಈ ಬಡ ಕುಟುಂಬ ಇದೆ. ಅವರ ಬಳಿಯೂ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಮನೆಗೂ ಬಂದು ಪರಿಶೀಲಿಸಿದ್ದಾರೆ. ಸ್ಥಳೀಯ ಗ್ರಾ.ಪಂ. ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ. ಆದರೆ ನಮ್ಮ ಸಮಸ್ಯೆಗೆ ಸ್ಪಂದನ ಸಿಕ್ಕಿಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ ಈ ಮನೆಯ ಹೆಣ್ಣುಮಕ್ಕಳು. 

ಕಿತ್ತು ತಿನ್ನುವ ಬಡತನ
ಈ ನಾಲ್ವರು ಹೆಣ್ಣು ಮಕ್ಕಳೊಂದಿಗೆ ಮನೆಯಲ್ಲಿ ಅಜ್ಜಿ ಇದ್ದಾರೆ. ಅವರಿಗೆ ದೃಷ್ಟಿ ಸಮಸ್ಯೆ ಇದೆ. ನಡೆದಾಡಲು ಕಷ್ಟ. ಮನೆ ಅಡಿ ಸ್ಥಳ ಬಿಟ್ಟು ಬೇರೇನೂ ಇಲ್ಲ. ತಿಂಗಳ ಪಡಿತರವೇ ಹಸಿವು ನೀಗಲು ಇರುವ ದಾರಿ. ಜೀವನೋಪಾಯಕ್ಕೆ ಯಾವುದೇ ಆದಾಯವಿಲ್ಲ ಎನ್ನುತ್ತಾರೆ ನೇತ್ರಾ.

ಶೌಚಾಲಯ ಕೆಲಸ ಶೀಘ್ರ ಆರಂಭ
ಈ ಕುಟುಂಬಕ್ಕೆ 25 ಸಾವಿರ ರೂ. ಮಂಜೂರಾಗಿದೆ. ಆದರೆ, ತುರ್ತಾಗಿ ತಮಗೆ ಶೌಚಾಲಯದ ಅಗತ್ಯವಿದ್ದು, ನಿರ್ಮಿಸಿಕೊಡುವಂತೆ ಅವರು ಮನವಿ ಮಾಡಿದ್ದರಿಂದ ಮುಂದಿನ ವಾರದಲ್ಲೇ ಕೆಲಸ ಪ್ರಾರಂಭಿಸಲಾಗುವುದು. ಗ್ರಾಮ ಪಂಚಾಯತ್‌ ವತಿಯಿಂದ ಮನೆ ಕಟ್ಟಿಸಲು ಪ್ರಯತ್ನಿಸಲಾಗುವುದು. 
-ಭವಾನಿ ಚಿದಾನಂದ,
ತಾ.ಪಂ. ಅಧ್ಯಕ್ಷರು, ಪುತ್ತೂರು

ನೆರವಿಗೆ ಯೋಜನೆ‌
ಬೆಳ್ಳಾರೆ ಡಾ| ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವತಿಯಿಂದ ಆ ಮನೆಗೆ ತೆರಳಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದ್ದೇವೆ. ಗ್ರಾ.ಪಂ. ಸಹಿತ ಇತರ ಇಲಾಖೆಗಳ ಜತೆಗೆ ಚರ್ಚಿಸಿದ್ದೇವೆ. ದಾನಿಗಳ ಸಹಕಾರ ಪಡೆದು ಅವರಿಗೆ ನೆರವು ನೀಡಲು ಯೋಜನೆ ರೂಪಿಸುತ್ತಿದ್ದೇವೆ.
– ಪ್ರವೀಣ್‌ ಕುಮಾರ್‌,
ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ, ಬೆಳ್ಳಾರೆ ಕಾಲೇಜು

ಗೋಪಾಲಕೃಷ್ಣ ಸಂತೋಷ್‌ನಗರ 

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.