ಸೋಮಾವತಿ ನದಿಗೆ ತಾತ್ಕಾಲಿಕ ಕಟ್ಟ ನಿರ್ಮಾಣ

Team Udayavani, Jan 11, 2019, 4:17 AM IST

11-january-1.jpg

ಬೆಳ್ತಂಗಡಿ: ಪ್ರತಿವರ್ಷವೂ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಇಲ್ಲಿನ ಸೋಮಾವತಿ ನದಿಗೆ ತಾತ್ಕಾಲಿಕ ಕಟ್ಟ ನಿರ್ಮಿಸಿ ಬಳಿಕ ಅದನ್ನು ಶುದ್ಧೀಕರಿಸಿ ಜನತೆಗೆ ಕುಡಿಯುವ ನೀರನ್ನು ಒದಗಿ ಸುತ್ತಿದ್ದು, ಈ ವರ್ಷದ ಮುಂದಿನ ವಾರ ಅಂದರೆ ಜ. 15ರ ವೇಳೆಗೆ ಸುಮಾರು 1.75 ಲಕ್ಷ ರೂ.ವೆಚ್ಚದಲ್ಲಿ ಕಟ್ಟ ನಿರ್ಮಾಣದ ಕಾರ್ಯ ನಡೆಯಲಿದೆ.

ಕಳೆದ ಮಳೆಗಾಲದಲ್ಲಿ ಆರಂಭದಲ್ಲಿ ಸಾಕಷ್ಟು ಮಳೆ ಬಂದಿದ್ದರೂ ಸೆಪ್ಟಂಬರ್‌ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಗಣ ನೀಯ ಇಳಿಕೆಯಾಗಿದ್ದು, ಜನತೆ ಯನ್ನು ಆತಂಕಕ್ಕೀಡು ಮಾಡಿತ್ತು. ಬೇಸಗೆ ಯಲ್ಲಿ ಬೆಳ್ತಂಗಡಿ ಜನತೆಗೆ ನೀರು ಕೊಡುವುದಕ್ಕಾಗಿ ಆ ಸಂದರ್ಭದಲ್ಲೇ ಕಟ್ಟ ನಿರ್ಮಿಸಬೇಕೇ ಎಂಬ ಆತಂಕವೂ ಸೃಷ್ಟಿಯಾಗಿತ್ತು.

ಆದರೆ ಬಳಿಕ ಮತ್ತೆ ಉತ್ತಮ ಮಳೆ ಬಂದ ಹಿನ್ನೆಲೆಯಲ್ಲಿ ಪ್ರಸ್ತುತ ನದಿಯಲ್ಲಿ ನೀರಿನ ಸ್ಥಿತಿ ಉತ್ತಮ ಮಟ್ಟದಲ್ಲಿದ್ದು, ಈ ಹಿಂದಿನಂತೆ ಜನವರಿಯಲ್ಲೇ ಕಟ್ಟ ನಿರ್ಮಿ ಸುವ ಸ್ಥಿತಿ ನಿರ್ಮಾಣವಾಗಿದೆ.

1.05 ಎಂಎಲ್‌ಡಿ ಬೇಡಿಕೆ
ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಒಟ್ಟು 1,415 ನೀರಿನ ಸಂಪರ್ಕಗಳಿದ್ದು, ಪ್ರತಿನಿತ್ಯ ಸುಮಾರು 1.05 ಎಂಎಲ್‌ಡಿ ನೀರಿನ ಬೇಡಿಕೆ ಇದೆ. ಸುಮಾರು 0.6 ಎಂಎಲ್‌ಡಿ ನೀರನ್ನು ನದಿಯಿಂದ ಹಾಗೂ 0.45 ಎಂಎಲ್‌ಡಿ ನೀರನ್ನು 9 ಕೊಳವೆಬಾವಿಗಳ ಮೂಲಕ ಪಡೆಯಲಾಗುತ್ತಿದೆ.

ಹೀಗಿರುತ್ತದೆ ಕಟ್ಟ
ನದಿಗೆ ತಾತ್ಕಾಲಿಕ ಕಟ್ಟ ನಿರ್ಮಿಸುವ ಸಂದರ್ಭದಲ್ಲಿ ಹಿಚಾಚಿ ಮೂಲಕ 1 ಮೀಟರ್‌ನಷ್ಟು ನದಿಯ ಚರಳನ್ನು ತೆಗೆದು, ಅದಕ್ಕೆ ಮರಳು ಚೀಲಗಳನ್ನು ಇಟ್ಟು ಅಡಿಪಾಯವನ್ನು ಮಾಡಲಾಗುತ್ತದೆ. ಬಳಿಕ 2 ಮೀಟರ್‌ನಷ್ಟು ಎತ್ತರಕ್ಕೆ ಮಣ್ಣು ಹಾಕಲಾಗುತ್ತದೆ.

ಬಳಿಕ ಗೋಣಿ ಚೀಲದಲ್ಲಿ ಮಣ್ಣನ್ನು ತುಂಬಿಸಿ ಚಾನೆಲ್‌ ರೀತಿ ಮಾಡಲಾಗುತ್ತದೆ. ಅಂದರೆ ಓವರ್‌ಫ್ಲೋ ಆದ ನೀರು ಇದರ ಮೂಲಕ ಹರಿದುಹೋಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಒಂದು ವೇಳೆ ಮಳೆ ಬಂದು ನೀರು ಹೆಚ್ಚಾದರೂ ಇದರ ಮೂಲಕ ಹರಿದು ಹೋಗುತ್ತದೆ. ತಾತ್ಕಾ ಲಿಕ ಕಟ್ಟ ನಿರ್ಮಿಸುವ ಕಾರಣದಿಂದ ಮುಂದಿನ ವರ್ಷಕ್ಕೆ ಏನೂ ಸಿಗುವುದಿಲ್ಲ. ಮಳೆಗಾಲದಲ್ಲಿ ಎಲ್ಲವೂ ಕೊಚ್ಚಿಕೊಂಡು ಹೋಗುತ್ತದೆ.

ಮಿತವಾಗಿ ಬಳಸಿ
ಪ್ರಸ್ತುತ ದಿನಗಳಲ್ಲಿ ಇತರ ನಗರ ಭಾಗಗಳಲ್ಲಿ ಬೇಸಗೆಯಲ್ಲಿ ನೀರಿನ ಅಭಾವ ಕಾಡುತ್ತಿದ್ದು, ಬೆಳ್ತಂಗಡಿಯ ಜನತೆಯೂ ನೀರನ್ನು ಮಿತವಾಗಿ ಬಳಸಬೇಕು ಎಂದು ಇಲ್ಲಿನ ಪ.ಪಂ.ಮನವಿ ಮಾಡುತ್ತಿದೆ. ಅಂದರೆ ತಮ್ಮ ದಿನಗಳ ಬಳಕೆಗೆ ಅಲ್ಲದೆ ಹೂವಿನ ಗಿಡಗಳು, ಕೃಷಿಗೆ ಈ ನೀರು ಬಳಕೆ ಮಾಡಬಾರದು ಎಂದು ಮನವಿ ಮಾಡುತ್ತಿದೆ.

ಮುಂದಿನ ವಾರ ನಿರ್ಮಾಣ
ಮುಂದಿನ ವಾರ ನದಿಗೆ ತಾತ್ಕಾಲಿಕ ಕಟ್ಟ ನಿರ್ಮಾಣ ಕಾರ್ಯ ನಡೆಯಲಿದ್ದು, ಸುಮಾರು 1.75 ಲಕ್ಷ ರೂ.ಗಳನ್ನು ಅದಕ್ಕಾಗಿ ಮೀಸಲಿಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನೀರಿನ ಯಾವುದೇ ತೊಂದರೆ ಇಲ್ಲದಾಗಿದ್ದು, ಜನರೂ ನೀರಿನ ಮಿತ ಬಳಕೆಯ ಕುರಿತು ಹೆಚ್ಚಿನ ಗಮನಹರಿಸಬೇಕಿದೆ.
ಮಹಾವೀರ ಅರಿಗ ಎಂಜಿನಿಯರ್‌,
   ಪ.ಪಂ. ಬೆಳ್ತಂಗಡಿ 

•ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.