ರೈತರೊಂದಿಗೆ ಚೆಲ್ಲಾಟ


Team Udayavani, Nov 21, 2017, 4:15 PM IST

ray1.jpg

ಹಟ್ಟಿ ಚಿನ್ನದ ಗಣಿ: ನಾರಾಯಣಪುರ ಬಲದಂಡೆ ನಾಲೆಯಿಂದ ಗುಡ್ಡದಂಚಿನ ರೈತರ ಜಮಿನುಗಳಿಗೆ ನೀರು ಹರಿಸಲು ಮೀನ ಮೇಷ ಎಣಿಸುತ್ತಿರುವ ಕೃಷ್ಣ ಭಾಗ್ಯ ಜಲ ನಿಗಮ ಮತ್ತು ಸರ್ಕಾರ ಸದ್ದಿಲ್ಲದೆ ರೈತರ ಬಾಳಲ್ಲಿ ಆಟವಾಡುತ್ತಿದೆ.

ಬಸವಸಾಗರ ಜಲಾಶಯದ ಬಲದಂಡೆ ಮುಖ್ಯ ನಾಲೆಯ 54ನೇ ಕಿ.ಮೀ. ರೆಗ್ಯೂಲೇಟರ್‌ ಎಸ್ಕೇಪ್‌ ಮೂಲಕ ಬರುವ ನೀರನ್ನು ಒಂದೆಡೆ ಸಂಗ್ರಹ ಮಾಡಿ ಗುಡ್ಡದಂಚಿನ ಗ್ರಾಮಗಳ ಯರಜಂತಿ, ಪೈದೋಡ್ಡಿ ಸೇರಿ ಹಲವು ದೊಡ್ಡಿಗಳ ರೈತರ ಸುಮಾರು 700 ಹೆಕ್ಟೇರ್‌ ಪ್ರದೇಶಕ್ಕೆ ನೀರು ಹರಿಸಲು ಕೆಬಿಜೆಎನ್‌ಎಲ್‌ ನಾಲೆ ನಿರ್ಮಿಸಿದೆ. ಮಳೆ ಇಲ್ಲದ ಬರಗಾಲದ ಪರಿಸ್ಥಿತಿಯಲ್ಲೂ ರೈತರ ಜಮೀನುಗಳಿಗೆ ನೀರಿನ ತೊಂದರೆ ಆಗದಂತೆ ನಿಗಮದ ಅಧಿಕಾರಿಗಳು ಎರಡೂ ನಾಲೆಗಳ ಮೂಲಕ ನೀರು ಹರಿಸಿದ್ದರು. ಇದರಿಂದ ರೈತರು ಮುಂಗಾರಿನಲ್ಲಿ ಸಜ್ಜೆ, ಬೇಸಿಗೆ ಬೆಳೆಯಾದ ಶೇಂಗಾ ಬಿತ್ತನೆ ಮಾಡುತ್ತಿದ್ದರು.

ನೀರು ಹರಿವಿಗೆ ತಡೆ: ಪ್ರಸಕ್ತ ವರ್ಷ ಉತ್ತಮ ಮಳೆ ಆಗಿದ್ದು, ಬಸವಸಾಗರ ಅಣೆಕಟ್ಟೆಯಲ್ಲಿ ಸಾಕಷ್ಟು ನೀರು ಸಂಗ್ರಹವಿದೆ. ಆದರೆ ಮುಖ್ಯ ನಾಲೆಯ 54ನೇ ಕಿ.ಮೀ. ರೆಗ್ಯೂಲೇಟರ್‌ ಮೂಲಕ ನಾಲೆಗಳಿಗೆ ನೀರು ಹರಿಸುವುದನ್ನು ತೆಡೆಗಟ್ಟಿ ಗೇಟ್‌ ಬಂದ್‌ ಮಾಡಲಾಗಿದೆ. ಇದರಿಂದ ಗುಡ್ಡದಂಚಿನ ರೈತರ ಜಮೀನುಗಳಿಗೆ ಹನಿ ನೀರು ಹರಿಯುತ್ತಿಲ್ಲ.

ನೀರಿಗಾಗಿ ರೈತರ ಗುದ್ದಾಟ: ಬಿತ್ತನೆ ಮಾಡಿದ ನಂತರ 20 ದಿನಗಳ ನಂತರ ಶೇಂಗಾ ಬೆಳೆಗೆ ನೀರಿನ ಅಗತ್ಯವಿದೆ. ಈಗ ಜಲಾಶಯದಲ್ಲಿ ನೀರಿದ್ದರೂ 54ನೇ ಕಿ.ಮೀ. ರೆಗ್ಯೂಲೇಟರ್‌ ಮೂಲಕ ನಾಲೆಗಳಿಗೆ ನೀರು ಹರಿಸದ್ದರಿಂದ ರೈತರು ಕಂಗೆಟ್ಟಿದ್ದು, ಕೆಬಿಜೆಎನ್‌ಎಲ್‌ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರೂ ಗುಡ್ಡದಂಚಿನ ಜಮೀನುಗಳಿಗೆ ನೀರು ಹರಿಸಲು ಕೆಬಿಜೆಎನ್‌ಎಲ್‌ ಅಧಿಕಾರಿಗಳು ಕ್ರಮ ವಹಿಸಬೇಕೆಂದು ರೈತರು ಆಗ್ರಹಿಸಿದ್ದಾರೆ

ಸುಮಾರು ನಾಲ್ಕು ವರ್ಷಗಳಿಂದ ನಾಲೆ ಮೂಲಕ ನೀರು ಬಿಡಲಾಗುತ್ತಿದ್ದು, ಇದನ್ನು ನಂಬಿ ಬೇಸಿಗೆಯಲ್ಲೂ ಬಿತ್ತನೆ ಮಾಡಿ ಬದುಕು ಕಟ್ಟಿಕೊಂಡಿದ್ದೇವೆ. ಆದರೆ ಈ ವರ್ಷ ನೀರು ಬಿಡುವುದಿಲ್ಲ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವ ನಮಗೆ ಇದರ ಅರಿವು ಇಲ್ಲ. ಏಕಾಏಕಿ ನಾಲೆಗೆ ನೀರು ಬಂದ್‌ ಮಾಡಿದ್ದರಿಂದ ತೊಂದರೆ ಆಗಿದೆ.  ತಿಮ್ಮಯ್ಯ, ಯರಜಂತಿ ಗ್ರಾಮದ ರೈತ

ಯರಜಂತಿ, ಪೈದೊಡ್ಡಿ ಸೇರಿದಂತೆ ಹತ್ತಾರು ಗ್ರಾಮಗಳ ರೈತರಿಗೆ ನೀರು ಬಿಡಬೇಕು ಎಂಬ ಆದೇಶವಿಲ್ಲ. ಮುಖ್ಯ
ನಾಲೆಯಿಂದ ರೈತರ ಜಮೀನಿಗೆ ನೀರಿನ ಲಭ್ಯತೆ ಇಲ್ಲ. ಅದಕ್ಕಾಗಿ ರೆಗ್ಯೂಲೇಟರ್‌ ಎಸ್ಕೇಪ್‌ ಗೇಟ್‌ ಬಂದ್‌
ಮಾಡಲಾಗಿದೆ.  ಅಶೋಕ ಅಭಿಯಂತರ, ಕೆಬಿಜೆಎನ್‌ ಎಲ್‌ ರೋಡಲಬಂಡಾ (ಯುಕೆಪಿ)

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.