ಟ್ರಾಫೀಕ್‌ ಜಾಮ್‌ ಸಮಸ್ಯೆಗೆ ಜನ ತತ್ತರ

Team Udayavani, Jun 2, 2018, 12:35 PM IST

ray-2.jpg

ರಾಯಚೂರು: ಕೇಂದ್ರ ಬಸ್‌ ನಿಲ್ದಾಣಕ್ಕೆ ತೆರಳುವ ದ್ವಾರದ ಕೋಟೆ ಮುಂಭಾಗದಲ್ಲಿ ಯುಜಿಡಿ ಕಾಮಗಾರಿಗಾಗಿ ರಸ್ತೆ ಅಗೆದು ವಾರ ಕಳೆದರೂ ಕಾಮಗಾರಿ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಇದರಿಂದ ದಿನೇದಿನೆ ಟ್ರಾಫೀಕ್‌ ಜಾಮ್‌
ಸಮಸ್ಯೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಹೈರಾಣಾಗುತ್ತಿದ್ದಾರೆ.

ನಿತ್ಯ ವಾಹನಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ನಗರಸಭೆ ಸುತ್ತುವರಿದು ಬರಬೇಕಿದೆ. ಇದರಿಂದ ಗಳಿಗೆಗೊಮ್ಮೆ ಟ್ರಾಫೀಕ್‌ ಜಾಮ್‌ ಉಂಟಾಗುತ್ತಿದ್ದು, ಪ್ರಯಾಣಿಕರು ಹೈರಾಣಾಗುತ್ತಿದ್ದಾರೆ. ಸಾರಿಗೆ ಬಸ್‌ಗಳು ಕೂಡ ಇದೇ ಮಾರ್ಗವಾಗಿ ಓಡಾಡಬೇಕಿರುವುದರಿಂದ ಇಕ್ಕಟ್ಟಾದ ರಸ್ತೆಯಲ್ಲಿ ಎರಡು ಬಸ್‌ಗಳು ಎದುರು ಬದರಾದರೂ ಟ್ರಾಫೀಕ್‌ ಉಲ್ಬಣಗೊಳ್ಳುತ್ತಿದೆ. ಅಲ್ಲದೇ, ಟ್ರಾಫೀಕ್‌ ಸಿಬ್ಬಂದಿ ಇದ್ದರೂ ಪರಿಸ್ಥಿತಿ ನಿಭಾಯಿಸುವುದು
ಕಷ್ಟವಾಗುತ್ತಿದೆ. ಚಂದ್ರಮೌಳೇಶ್ವರ ವೃತ್ತ, ತಹಶೀಲ್ದಾರ್‌ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಬಸವೇಶ್ವರ ವೃತ್ತದ ಬಳಿ ಟ್ರಾಫೀಕ್‌ ಜಾಮ್‌ ನಿರ್ಮಾಣವಾಗುತ್ತಿದೆ.

ಸೂಚನಾ ಫಲಕವಿಲ್ಲ: ಒಂದೆಡೆ ಕಾಮಗಾರಿ ಶುರುವಾಗಿ ಐದಾರು ದಿನಗಳಾಯಿತು. ಮತ್ತೂಂದೆಡೆ ನಗರಕ್ಕೆ ಬರುವ ಹೊಸಬರಿಗೆ ಬಸ್‌ ನಿಲ್ದಾಣ ಮಾರ್ಗ ಬಂದ್‌ ಆಗಿರುವ ಮಾಹಿತಿ ಇಲ್ಲ. ಕಾಮಗಾರಿ ನಿರ್ವಹಿಸುತ್ತಿರುವರು ಕೂಡ ಬಸವೇಶ್ವರ ವೃತ್ತದಲ್ಲಿ ಸೂಚನಾ ಫಲಕ ಅಳವಡಿಸಿಲ್ಲ. ಇದರಿಂದ ಅಂಬೇಡ್ಕರ್‌ ವೃತ್ತದವರೆಗೆ ತೆರಳಿ ಹಿಂದಿರುಗುವಂತಾಗಿದೆ. ಸಾರಿಗೆ ಇಲಾಖೆಯಲ್ಲಿ ಹೊಸ ಮಾರ್ಗಕ್ಕೆ ಬಂದ ಚಾಲಕರಿಗೂ ಕೂಡ ಗೊಂದಲ ತಪ್ಪಿದ್ದಲ್ಲ.

ಕಾಮಗಾರಿ ನಿರ್ವಹಣೆ ಮಾಡುತ್ತಿರುವವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ. ಇನ್ನಾದರೂ ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಲಿ ಎಂಬುದು ಸ್ಥಳೀಯರ ಒತ್ತಾಸೆ. 

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.