ಬೇಸಿಗೆ ಬೆಳೆಗೆ ಟಿಬಿ ಡ್ಯಾಂ ನೀರು; ಶೀಘ್ರ ಐಸಿಸಿ ಸಭೆ

Team Udayavani, Nov 11, 2018, 3:44 PM IST

ray-3.jpg

ರಾಯಚೂರು: ತುಂಗಭದ್ರಾ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಹರಿಸುವ ವಿಚಾರವಾಗಿ ಚರ್ಚಿಸಲು ನ.15 ಅಥವಾ 18ರಂದು ಐಸಿಸಿ ಸಭೆ ಕರೆಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ತುಂಗಭದ್ರಾ ಜಲಾಯಶದಿಂದ ನೀರು ಹರಿಸುವ ಸಂಬಂಧ
ಜಲಸಂಪನ್ಮೂಲ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ ಅವರನ್ನು ಸಂಪರ್ಕಿಸಿ ಸಭೆ ಆಯೋಜಿಸಲಾಗುವುದು. ಐಸಿಸಿ ಸಭೆ ನಡೆಸಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿ ಮುಂದಿನ ನಿರ್ಧಾರಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಕ್ರಮ ನೀರಾವರಿ ಪತ್ತೆಗಾಗಿ ನಡೆಸಿದ ಗೂಗಲ್‌ ಸರ್ವೆ ಈಗಾಗಲೇ ಮುಗಿದಿದೆ. ಆದರೆ, ಈಗಲೇ ಕ್ರಮಕ್ಕೆ ಮುಂದಾದರೆ ರೈತರ ಬೆಳೆ ಹಾನಿಯಾಗಿ ನಷ್ಟವಾಗಲಿದೆ. ಐಸಿಸಿ ಸಭೆಯಲ್ಲಿ ಸಚಿವರೊಂದಿಗೆ ಈ ಬಗ್ಗೆ ಚರ್ಚಿಸಿ ಕ್ರಮ ಜರುಗಿಸಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ 15 ಟಿಎಂಸಿ ಅಡಿ ನೀರು ಅಕ್ರಮವಾಗಿ ಪಡೆಯಲಾಗುತ್ತದೆ ಎಂಬ ಆರೋಪ ಸತ್ಯಕ್ಕೆ ದೂರ. ನೀರು ಕಳ್ಳತನವಾಗಿರುವ ಬಗ್ಗೆ ಯಾವುದೇ ದಾಖಲೆಗಳಿಲ್ಲದೇ ಆರೋಪ ಮಾಡುವುದು ಸರಿಯಲ್ಲ. ನಮ್ಮ ಪಕ್ಷದವರಾಗಿರಲಿ ಅಥವಾ ಮಾಜಿ, ಹಾಲಿ ಶಾಸಕರಾಗಲಿ ದಾಖಲೆ ಸಹಿತ ಆರೋಪ ಮಾಡಲಿ ಎಂದು ಹೇಳಿದರು.

ಜಿಲ್ಲಾದ್ಯಂತ ಅಕ್ರಮ ಮರಳು ಸಾಗಣೆ ಸಂಪೂರ್ಣ ನಿಯಂತ್ರಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೂ ಸೂಚಿಸಲಾಗಿದೆ. ಅಲ್ಲದೇ ಅಕ್ರಮ ಚಟುವಟಿಕೆಗಳಿಗೂ ಕಡಿವಾಣ ಹಾಕಲು ಕ್ರಮಕ್ಕೆ ಸೂಚಿಸಿದ್ದೇನೆ. ಅಷ್ಟು ಮಾತ್ರವಲ್ಲ ದೀಪವಾಳಿ ವೇಳೆ ಗ್ಯಾಂಬ್ಲಿಂಗ್‌ ನಡೆಯದಂತೆಯೂ ಕ್ರಮಕ್ಕೆ ಸೂಚಿಸಲಾಗಿತ್ತು.

ರಾಜ್ಯದ ಶಾಖೋತ್ಪನ್ನ ವಿದ್ಯುತ್‌ ಕೇಂದ್ರಗಳಿಗೆ ಕಲ್ಲಿದ್ದಲು ಕೊರತೆ ಇರುವುದರಿಂದ ಸಿಎಂ ಕುಮಾರಸ್ವಾಮಿ ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕಲ್ಲಿದ್ದಲು ಸಮರ್ಪಕವಾಗಿ ಪೂರೈಸಲು ಒತ್ತಡ ಹೇರಿದ್ದಾರೆ. ವಿದ್ಯುತ್‌ ಉತ್ಪಾದನೆ ಕಡಿಮೆ ಇದ್ದರೂ ಲೋಡ್‌ ಶೆಡ್ಡಿಂಗ್‌ ಮಾಡುತ್ತಿಲ್ಲ. ಮೇವು ಕೊರತೆ ಸದ್ಯಕ್ಕೆ ಆಗುತ್ತಿಲ್ಲ. ಮೇವಿನ ಬಂಡಲ್‌ ಮಾಡುವ ಯಂತ್ರಗಳು ನಮ್ಮಲ್ಲಿ ಲಭ್ಯವಿದ್ದು, ರಾಜ್ಯದಲ್ಲಿ ಅಗತ್ಯ ಇರುವ ಕಡೆ ಪೂರೈಸಲಾಗುವುದು ಎಂದರು.

ಸಿಂಧನೂರಿನಲ್ಲಿ ಪಶುಸಂಗೋಪನಾ ಕಾಲೇಜು ಆರಂಭಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಯಚೂರು ವಿವಿ ಕಾರ್ಯ ಆರಂಭಿಸುವ ಕುರಿತು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಲಾಗುವುದು.
 ವೆಂಕಟರಾವ್‌ ನಾಡಗೌಡ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.