ಸಮಸ್ಯಾತ್ಮಕ ಹಳ್ಳಿಗಳಿಗೆ ತ್ವರಿತವಾಗಿ ನೀರೊದಗಿಸಿ


Team Udayavani, Dec 1, 2018, 12:46 PM IST

vij-4.jpg

ರಾಯಚೂರು: ಜಿಲ್ಲೆಯಲ್ಲಿ ಭೀಕರ ಬರ ಎದುರಾಗಿದ್ದರೂ ಹಳ್ಳಿಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಖಾತೆ ಸಚಿವ ಕೃಷ್ಣ ಬೈರೇಗೌಡ, ಸಮಸ್ಯಾತ್ಮಕ ಹಳ್ಳಿಗಳಿಗೆ ಎರಡು ದಿನದೊಳಗೆ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಬರ ಕಾಮಗಾರಿಗಳ ಸಭೆ ನಡೆಸಿದ ಅವರು, ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದರು. ನಿಮ್ಮಲ್ಲಿ ಸದ್ಯ ನೀರಿನ ಪರಿಸ್ಥಿತಿ ಹೇಗಿದೆ? ಅದಕ್ಕೆ ಕೈಗೊಂಡ ಕ್ರಮಗಳೇನು ಎಂದು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಗಳು ಟಾಸ್ಕ್ಫೋರ್ಸ್‌ ಅನುದಾನದಲ್ಲಿ 25 ಲಕ್ಷ ರೂ.ಗೆ ಕ್ರಿಯಾಯೋಜನೆ ರೂಪಿಸಿರುವುದಾಗಿ ವಿವರಿಸಿದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಚಿವರು, ಸರ್ಕಾರ 50 ಲಕ್ಷ ರೂ. ನೀಡಿದರೆ ನೀವು 25 ಲಕ್ಷಕ್ಕೆ ಯಾಕೆ ಕ್ರಿಯಾಯೋಜನೆ ಮಾಡಿದಿರಿ. ಘೋಷಿತ ಅನುದಾನಕ್ಕೆ ಬಿಟ್ಟು ಬಿಡುಗಡೆಯಾದ ಅನುದಾನಕ್ಕೆ ಕ್ರಿಯಾಯೋಜನೆ ಮಾಡುತ್ತಾರಾ? ಸೇವೆಗೆ ಸೇರಿ ಎಷ್ಟು ವರ್ಷಗಳಾದವು ಎಂದು ಜಿಪಂ ಪ್ರಭಾರ ಇಇಯನ್ನು ತರಾಟೆ ತೆಗೆದುಕೊಂಡರು.

ಅದಕ್ಕೆ ಜಿಪಂ ಇಂಜನಿಯರ್‌ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ 134 ಹಳ್ಳಿಗಳಿಂದ ಅದರಲ್ಲಿ 30 ಹಳ್ಳಿಗಳಲ್ಲಿ ಗಂಭೀರ ಸಮಸ್ಯೆ ಇದೆ. ಗ್ರಾಮದಲ್ಲಿನ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆಯಲಾಗುತ್ತಿದೆ ಎಂದು ಸಮಜಾಯಿಷಿ ನೀಡಿದರು.
 
ಯಾವ ಗ್ರಾಮದಲ್ಲಿ ನೀರಿನ ಸಮಸ್ಯೆ ಇರುವುದೋ ಅಲ್ಲಿಗೆ ಎರಡು ದಿನದೊಳಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿ. ಈಗಾಗಲೇ ಸರ್ಕಾರ ಎಲ್ಲ ಕ್ಷೇತ್ರಗಳಿಗೆ 50 ಲಕ್ಷ ರೂ. ನೀಡಿದೆ. ಅದಲ್ಲದೇ, ಟ್ಯಾಂಕರ್‌ ಮೂಲಕ ಅಥವಾ ಖಾಸಗಿ ಕೊಳವೆಬಾವಿ ಬಾಡಿಗೆ ಪಡೆದು ನೀರು ಪೂರೈಸಿದರೆ ಅದಕ್ಕೆ ಪ್ರತ್ಯೇಕ ಅನುದಾನ ನೀಡಲಾಗುವುದು ಎಂದು ಹೇಳಿದರು.

ಶಾಸಕ ಡಾ| ಶಿವರಾಜ ಪಾಟೀಲ ಮಾತನಾಡಿ, ನನ್ನ ಕ್ಷೇತ್ರ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಕೊಳವೆಬಾವಿಗಳನ್ನು ಕರೆಯಿಸಿದರೂ ಪ್ರಯೋಜನವಾಗುತ್ತಿಲ್ಲ. 500 ಅಡಿ ಆಳದಲ್ಲೂ ನೀರಿಲ್ಲ. ಅಂಥ ಕಡೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಖಾಸಗಿ ಕೊಳವೆಬಾವಿ ಮಾಲೀಕರು ತಮಗೆ ಬೇಕಾದಾಗ ನೀರು ಪಡೆಯುವುದರಿಂದ ಸಮಸ್ಯೆಯಾಗುತ್ತದೆ ಎಂದು ವಿವರಿಸಿದರು. ಕೊಳವೆಬಾವಿಗಳ ಮಾಲೀಕರಿಗೆ ಪ್ರತಿ ತಿಂಗಳು ಬಾಡಿಗೆ ಪಾವತಿಸಿ. ಟ್ಯಾಂಕರ್‌ಗಳಿಗೆ ಕಾಲಕಾಲಕ್ಕೆ ಹಣ ನೀಡುವ ಮೂಲಕ ನೀರು ಪೂರೈಸಬೇಕು ಎಂದು ಡಿಸಿ, ಸಿಇಒಗೆ ಸೂಚಿಸಿದರು.
 
ಶಾಸಕರಾದ ಪ್ರತಾಪಗೌಡ ಪಾಟೀಲ, ಬಸವರಾಲ ಪಾಟೀಲ ಇಟಗಿ, ದದ್ದಲ್‌ ಬಸನಗೌಡ ಅವರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕುರ್ಡಿ, ಭೋಗಾಪುರ ಸೇರಿ ವಿವಿಧೆಡೆ ಅನೇಕ ವರ್ಷಗಳಿಂದ ಕಾಮಗಾರಿ ನಡೆದಿದೆ. ಇಂದಿಗೂ ನೀರು ಕೊಡಲು ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಪಡೆದ ಸಚಿವರು, ಎಲ್ಲಿ ಸಮಸ್ಯೆಯಾಗಿದೆ ಎಂಬುದನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಕೆಲಸ ಮುಗಿಸುವಂತೆ ತಾಕೀತು ಮಾಡಿದರು. 

ಶಾಸಕ ಡಾ| ಶಿವರಾಲ ಪಾಟೀಲ ಮಾತನಾಡಿ, ನಮಗೆ ಯಾವುದಾದರೂ ಯೋಜನೆ ವಹಿಸಬೇಕು ಎಂದರೆ ಉತ್ತಮ ಏಜೆನ್ಸಿಗಳಿಲ್ಲ. ನಿರ್ಮಿತಿ ಕೇಂದ್ರ, ಲ್ಯಾಂಡ್‌ ಆರ್ಮಿ, ಕ್ಯಾಶುಟೆಕ್‌ ಸಂಸ್ಥೆಗಳ ವಿಶ್ವಾಸ ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಲೋಕೋಪಯೋಗಿ ಇಲಾಖೆಯಿಂದ ಕೆಲಸ ಮಾಡಿಸಿಕೊಳ್ಳಿ ಎಂದು ಸಚಿವರು ಸೂಚಿಸಿದರು. 

ಉದ್ಯೋಗ ಖಾತ್ರಿಯಡಿ ಜಿಲ್ಲೆಯಲ್ಲಿ ಸಾಮೂಹಿಕ ಪ್ರಗತಿ ನಡೆಯುತ್ತಿದೆ. ಕೇವಲ ಕೂಲಿ ಸಣ್ಣ ಪುಟ್ಟ ಕೆಲಸಗಳನ್ನು ಮಾಡದೆ ವೈಯಕ್ತಿಕ ಕೆಲಸಗಳಿಗೂ ಆದ್ಯತೆ ನೀಡಬೇಕು. ದನದ ಕೊಟ್ಟಿಗೆ, ಬದುಗಳ ನಿರ್ಮಾಣ ಸೇರಿ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳಬೇಕು. 

ನರೇಗಾದರಡಿ ಎಷ್ಟೇ ಕೂಲಿ ಸೃಜನೆ ಮಾಡಿದರೂ ಚಿಂತೆ ಬೇಡ. ಸರ್ಕಾರ ಹಣ ನೀಡಲು ಸಿದ್ಧವಿದೆ ಎಂದು ಸಚಿವರು ಹೇಳಿದರು. ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ ನಾಡಗೌಡ, ಸಂಸದ ಬಿ.ವಿ.ನಾಯಕ, ಡಿಸಿ ಶರತ್‌ ಬಿ. ಸಿಇಒ ನಲಿನ್‌ ಅತುಲ್‌, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.