ಅಭಿವೃದ್ಧಿ ಕಾರ್ಯದಲ್ಲಿ ನಿರ್ಲಕ್ಷ್ಯ ಸಲ್ಲ

Team Udayavani, Dec 9, 2018, 12:38 PM IST

ray-2.jpg

ಸಿಂಧನೂರು: ಕೆಲ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳು ಅವಧಿ ಮುಗಿದರೂ ಇನ್ನೂ ಪೂರ್ಣಗೊಂಡಿಲ್ಲ. ಅಧಿಕಾರಿಗಳು ಇದೇ ರೀತಿ ನಿರ್ಲಕ್ಷ್ಯ ಮುಂದುವರಿಸಿದರೆ ಅಮಾನತು ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಎಚ್ಚರಿಸಿದರು.

ನಗರದ ಸರ್ಕೂಟ್‌ ಹೌಸ್‌ನಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ಮೂರು ವರ್ಷ ಕಳೆದರೂ ಇನ್ನೂ ಕೆಲಸ ಬಾಕಿ ಇದೆ ಎಂದು ಹೇಳುತ್ತಿರುವ ಅಧಿಕಾರಿಗಳಿಗೆ ನಾಚಿಕೆ ಆಗಬೇಕು. 24/7, ನಗರೋತ್ಥಾನ, ಒಳಚರಂಡಿ ಕಾಮಗಾರಿಗಳು ಇನ್ನೂ ಮುಗಿದಿಲ್ಲ. ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡದಿದ್ದರೆ ರಾಜೀನಾಮೆ ಕೊಡಿ. ಹೊಸ ವರ್ಷದಿಂದ ಹೊಸಬರಿಗೆ
ಕೆಲಸ ಕೊಡುತ್ತೇನೆ. ಹುಚ್ಚುತನ ವರ್ತನೆ ಮಾಡೋದು ಬಿಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಬಸ್‌ ನಿಲ್ದಾಣವನ್ನು ಜನರಿಗೆ ಅನುಕೂಲವಾಗುವ ಸ್ಥಳದಲ್ಲಿ ಮಾಡಬೇಕು. ಮಿನಿ ವಿಧಾನಸೌಧದ ಬಳಿ ಇರುವ ಬಸ್‌ ತಂಗುದಾಣವನ್ನು ಬೇರೆಕಡೆ ಸ್ಥಳಾಂತರಿಸುವಂತೆ ಸಚಿವರು ವಿಜಯ ಪಾಟೀಲರಿಗೆ ಎಚ್ಚರಿಸಿದರು.

ಅಧಿಕಾರಿಗಳು ತಮ್ಮ ಇಲಾಖೆಯ ಕೆಲಸದ ಕಡೆ ಗಮನಹರಿಸಬೇಕು. ಅಭಿವೃದ್ಧಿ ಕಾಮಗಾರಿ ವಿಷಯದಲ್ಲಿ ಅಲಕ್ಷ್ಯ, ಬೇಜವಾಬ್ದಾರಿ ತೋರಿದರೆ ಸಹಿಸಲಾಗದು. ಅಂತಹ ಅಧಿಕಾರಿಗಳಿಗೆ ಅಮಾನತು ಶಿಕ್ಷೆ ನೀಡಲಾಗುವುದು. ಯಾವುದೇ ಕೆಲಸವನ್ನು ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ನಿರ್ವಹಿಸಿ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.

ಜ.5ಕ್ಕೆ ಸಿಎಂ ಭೇಟಿ: 2019ರ ಜನವರಿ 5ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸಿಂಧನೂರಿಗೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಗಿಸಬೇಕು. 24/7 ಕುಡಿಯುವ ನೀರಿನ ಕಾಮಗಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದಲೇ ಚಾಲನೆ ಕೊಡಿಸುವುದಾಗಿ ಹೇಳಿದರು.

ಲಿಂಗಸುಗೂರು ಸಹಾಯಕ ಆಯುಕ್ತ ಮಾರುತಿ, ತಹಶೀಲ್ದಾರ್‌ ಶಿವಾನಂದ, ನಗರಸಭೆ ಪೌರಾಯುಕ್ತ ವಿರೂಪಾಕ್ಷ್ಯ ಮೂರ್ತಿ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿ ವಿಜಯ ಪಾಟೀಲ ಬಿಜಾಪುರ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಮೊಬೈಲ್‌ ಬಂದ್‌: ಸಭೆ ಆರಂಭಕ್ಕೂ ಮುನ್ನವೇ ಸಚಿವ ವೆಂಕಟರಾವ್‌ ನಾಡಗೌಡ ಅಧಿಕಾರಿಗಳಿಗೆ ಮೊಬೈಲ್‌ ಸ್ವಿಚ್‌ ಆಫ್‌ ಮಾಡುವಂತೆ ಸೂಚಿಸಿದ್ದರು. ಪರಿಣಾಮ ಸಭೆ ಮುಗಿಯುವವರೆಗೆ ಮೊಬೈಲ್‌ ರಿಂಗಣಿಸಲಿಲ್ಲ.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.