40 ಎಕರೆ ಭತ್ತದ ಬೆಳೆ ಹಾನಿ; ರೈತರ ಆಕ್ರೋಶ


Team Udayavani, Dec 11, 2018, 11:57 AM IST

ray-1.jpg

ದೇವದುರ್ಗ: ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಆಲ್ದರ್ತಿ ಸಮೀಪ ನಾರಾಯಣಪುರ ಬಲದಂಡೆ ನಾಲೆಯ 17ನೇ ವಿತರಣೆ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿ ಸುಮಾರು 40ಕ್ಕೂ ಹೆಚ್ಚು ಎಕರೆ ಹೊಲಕ್ಕೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾರಾಯಣಪುರ ಬಲದಂಡೆ ನಾಲೆಯ 17ನೇ ವಿತರಣೆ ಕಾಲುವೆ ಎಲ್ಲೆಂದರಲ್ಲಿ ಬಿರುಕು ಬಿಟ್ಟು ಒಡೆಯುವ ಹಂತಕ್ಕೆ ಬಂದಿತ್ತು. ಕಾಲುವೆ ದುರಸ್ತಿ ಮಾಡುವಂತೆ ಸುತ್ತಲಿನ ಗ್ರಾಮಸ್ಥರು ಹಲವಾರು ಬಾರಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು
ಬರೀ ಭರವಸೆಯಲ್ಲೇ ಕಾಲಹರಣ ಮಾಡಿದ್ದರಿಂದ ಇದೀಗ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲು ಜೊತೆಗೆ ಲಕ್ಷಾಂತರ ಮೌಲ್ಯದ ಭತ್ತದ ಬೆಳೆ ಹಾನಿಯಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.8ರಂದು ನಾರಾಯಣಪುರು ಬಲದಂಡೆ ಕಾಲುವೆಗೆ ನೀರು ಬಿಡಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದ ಕಾರಣ 17ನೇ ವಿತರಣೆ ಕಾಲುವೆ ಒಡೆದಿದೆ ಎಂದು ರೈತರು ದೂರಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ಅಧಿಕಾರಿಗಳ ತಂಡ ಕಾಲುವೆ ಸ್ಥಿತಿಗತಿ ಮತ್ತು ಹೊಲಕ್ಕೆ ನೀರು ನುಗ್ಗಿದ್ದನ್ನು ಪರಿಶೀಲಿಸಿದರು. ಈ ವೇಳೆ ರೈತರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ರೈತರ ಆಗ್ರಹ ಏನು?: ಸರ್ಕಾರ ಪ್ರತಿ ವರ್ಷ ಬೇಸಿಗೆ ಅವಧಿಯಲ್ಲಿ ಕಾಲುವೆ ದುರಸ್ತಿ, ಜಂಗಲ್‌ ಕಟ್ಟಿಂಗ್‌ ಗೆ, ಕಾಲುವೆಯಲ್ಲಿನ ಹೂಳು ಎತ್ತಲು ಕೋಟ್ಯಂತರ ರೂ. ಅನುದಾನ ವ್ಯಯಿಸುತ್ತಿದೆ. ಆದರೆ ಅಧಿಕಾರಿಗಳು ಟೆಂಡರ್‌ ಕರೆಯಲು ವಿಳಂಬ ಮಾಡುವುದರಿಂದ ಮತ್ತು ಗುತ್ತಿಗೆದಾರರ ಜತೆ ಶಾಮೀಲಾಗಿ ಮಳೆಗಾಲ ಆರಂಭವಾಗುವ ವೇಳೆ ಜೂನ್‌ನಲ್ಲಿ ಕಾಲುವೆ ದುರಸ್ತಿ ಕೈಗೊಂಡು ಅರರೆಬರೆ ಕಾಮಗಾರಿ ಮಾಡುವುದರಿಂದ ಕಾಲುವೆಗಳು ಒಡೆಯುತ್ತಿವೆ.

ಇದೀಗ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಲು ಮತ್ತು ಬೆಳೆ ಹಾನಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಬೆಳೆ ಹಾನಿಗೀಡಾದ ರೈತರಿಗೆ ಕೂಡಲೇ ಪರಿಹಾರ ವಿತರಿಸಬೇಕು ಎಂದು ರೈತ ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ. ಅಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಬಾರಕೋಲು ಚಳವಳಿ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಕಾರ್ಯದರ್ಶಿ ಶಿವನಗೌಡ ಹೂವಿನಹೆಡ್ಗಿ ಎಚ್ಚರಿಸಿದ್ದಾರೆ.

ನಾರಾಯಣಪುರ ಬಲದಂಡೆ ನಾಲೆಯ 17ನೇ ವಿತರಣೆ ಕಾಲುವೆ ಅಲ್ಲಲ್ಲಿ ಬಿರುಕು ಬಿಟ್ಟಿತ್ತು. ಇಲ್ಲಿನ ಸಮಸ್ಯೆ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅವರು ದುರಸ್ತಿಗೆ ಕ್ರಮ ಕೈಗೊಳ್ಳದೇ ನಿರ್ಲಕ್ಷಿಸಿದ್ದರಿಂದ ಕಾಲುವೆ ಒಡೆದಿದೆ. ಬೆಳೆ ಹಾನಿಗೀಡಾದ ರೈರಿಗೆ ಪರಿಹಾರ ಕೊಡಬೇಕು.
 ಸಿದ್ಧಲಿಂಗಪ್ಪ ನಾಯಕ, ರೈತ

ಟಾಪ್ ನ್ಯೂಸ್

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.