ಕಾರ್ಮಿಕರನ್ನು ಗುಲಾಮರಾಗಿಸುವ ಹುನ್ನಾರ

Team Udayavani, Jan 10, 2019, 11:16 AM IST

ray-1.jpg

ಗೊರೇಬಾಳ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ದೇಶವ್ಯಾಪಿ ಮುಷ್ಕರ ಎರಡನೇ ದಿನ ಬುಧವಾರ ಸಿಂಧನೂರು ತಾಲೂಕಿನಲ್ಲಿ ಭಾಗಶಃ ಯಶಸ್ವಿಯಾಗಿದೆ.

ಬಂದ್‌ ಪ್ರಯುಕ್ತ ಸಿಂಧನೂರು ನಗರದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ದೇಶದ ಆರ್ಥಿಕ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತ 1991ರ ಹೊಸ ಆರ್ಥಿಕ ನೀತಿಗಳನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಹಳಷ್ಟು ವೇಗವಾಗಿ ಜಾರಿಗೆ ತರುತ್ತಿದೆ. ಕಾರ್ಮಿಕ ಕಾನೂನುಗಳನ್ನು ತಿದ್ದಪಡಿ ಮಾಡುವ ಮೂಲಕ ಮತ್ತೂಮ್ಮೆ ಕಾರ್ಮಿಕರನ್ನು ಗುಲಾಮರನ್ನಾಗಿಸುವ, ಶೋಷಣೆಗೆ ದಾರಿ ಮಾಡಿಕೊಡಲಾಗುತ್ತಿದೆ. ಸಾರ್ವಜನಿಕ ಉದ್ಯಮಗಳಲ್ಲಿನ ಬಂಡವಾಳವನ್ನು ಹಿಂಪಡೆಯುವ ಮೂಲಕ ಖಾಸಗೀಕರಣದ ಹುನ್ನಾರ ನಡೆಸುತ್ತಿದೆ. ದೇಶಕ್ಕೆ ಅನ್ನಕೊಡುವ ರೈತರು, ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕರು, ಸೇವೆಯನ್ನು ಮಾಡುತ್ತಿರುವ ನೌಕರರು, ಕೂಲಿಯನ್ನು ನಂಬಿ ಬದುಕುತ್ತಿರುವ ಕೃಷಿ ಕೂಲಿಕಾರರು ಕಠಿಣ ಪರಿಸ್ಥಿತಿ ಎದುರಿಸಲು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳೇ ಕಾರಣವಾಗಿವೆ ಎಂದು ಕಾರ್ಮಿಕ ಮುಖಂಡರು ಆರೋಪಿಸಿದರು.

ಎಲ್ಲ ಕಾರ್ಮಿಕರಿಗೆ 18 ಸಾವಿರ ವೇತನ ನೀಡಬೇಕು. ದುಡಿಯುವ ಜನರಿಗೆ ಕನಿಷ್ಠ 6 ಸಾವಿರ ಪಿಂಚಣಿ, ಹಮಾಲಿ ಕಾರ್ಮಿಕರಿಗೆ ಉಚಿತ ನಿವೇಶನ-ಮನೆ ನೀಡಬೇಕು. ಉದ್ದೇಶಿತ ಅಸಂಘಟಿತ ಕಾರ್ಮಿಕರ ಭವಿಷ್ಯನಿಧಿ ಯೋಜನೆಯನ್ನು ಹಾಗೂ ಪಿಂಚಣಿ ಯೋಜನೆಯನ್ನು ಜಾರಿ ಮಾಡಬೇಕು. ಎಲ್ಲ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೆ ವಿಸ್ತರಿಸಬೇಕು ಎಂಬುದು ಸೇರಿ 17 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಬಾಷುಮಿಯಾ, ದೇವೇಂದ್ರಗೌಡ, ಡಿ.ಎಚ್.ಕಂಬಳಿ, ನರಸಿಂಹಪ್ಪ, ಯಂಕಪ್ಪ ಕೆಂಗಲ್‌, ಹುಲಿಗಯ್ಯ, ಶರಣಬಸವ, ಮರಿಸ್ವಾಮಿ, ತಿರುಮಲರಾವ್‌, ಭೀಮರಾಯ್‌, ರೇಣುಕಮ್ಮ, ವಿಶಾಲಾಕ್ಷಮ್ಮ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.