ಸಮಸ್ಯಾತ್ಮಕ ಹಳ್ಳಿಗಳಿಗೆ ನೀರು ಒದಗಿಸಲು ಸೂಚನೆ

Team Udayavani, Feb 12, 2019, 10:36 AM IST

ray-2.jpg

ರಾಯಚೂರು: ಬರದ ಜತೆಗೆ ಬೇಸಿಗೆ ಸಮೀಪಿಸುತ್ತಿದ್ದು, ತೀವ್ರ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳಿಗೆ ತಕ್ಷಣಕ್ಕೆ ಕುಡಿಯುವ ನೀರು ಸರಬರಾಜಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಯಾವ ಹಳ್ಳಿಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಡಿಯುವ ನೀರು ವಿಭಾಗದ ಅಧಿಕಾರಿ, ಜಿಲ್ಲೆಯ 9 ಹಳ್ಳಿಗಳಲ್ಲಿ ಸಮಸ್ಯೆ ಇರುವುದಾಗಿ ತಿಳಿಸಿದರು.

ಬೇಸಿಗೆ ಸಮಿಪಿಸುತ್ತಿದ್ದು, ಜನರಿಗೆ ಟ್ಯಾಂಕರ್‌ ಮೂಲಕ ಅಥವಾ ಆಯಾ ಹಳ್ಳಿಗಳ ಗ್ರಾಮಸ್ಥರ ಸಲಹೆಗಳನ್ನು ಪಡೆದು ಬೋರ್‌ವೆಲ್‌ ಮೂಲಕ ನೀರು ಪೂರೈಸಿ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಯಾವುದೇ ಇಲಾಖೆ ಅಧಿಕಾರಿಗಳು ಸಭೆಗೆ ಬರುವ ಮುನ್ನ ದಾಖಲೆಗಳ ಸಮೇತ ಬರಬೇಕು ಎಂದ ಅವರು, ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ನೋಟಿಸ್‌ ಜಾರಿ ಮಾಡುವಂತೆ ಸೂಚಿಸಿದರು. ಸರ್ಕಾರದ ವಿವಿಧ ಇಲಾಖೆಗಳ ನಿಗದಿಯಂತೆ ಭೌತಿಕ ಗುರಿ ಸಾಧಿಸಬೇಕು. ಪ್ರಸಕ್ತ ವರ್ಷದ ಅಂತ್ಯದೊಳಗೆ ಗುರಿ ಸಾಧಿಸುವತ್ತ ಎಲ್ಲರೂ ಶ್ರಮ ವಹಿಸಿ ಕೆಲಸ ಮಾಡುವಂತೆ ತಾಕೀತು ಮಾಡಿದರು.

ಯೋಜನಾಧಿಕಾರಿ ಡಾ| ರೋಣಿ ಮಾತನಾಡಿ, ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿ ವಾರದಲ್ಲಿ ಎರಡು ಬಾರಿ ಆಯಾ ಇಲಾಖೆಗಳಲ್ಲಿ ಮತದಾರರ ಜಾಗೃತಿ ಜಾಥಾ, ಘೋಷಣೆ, ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ನಂತರ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆ ಪ್ರಗತಿ ವರದಿ ವಿವರಿಸಿದರು. ಜಿಪಂ ಉಪಾಧ್ಯಕ್ಷೆ ಗೀತಾ ಕರಿಯಪ್ಪ ವಜ್ಜಲ್‌, ಉಪ ಕಾರ್ಯದರ್ಶಿ ಮಹ್ಮದ್‌ ಯೂಸೂಫ್‌, ಜಿಲ್ಲಾ ಯೋಜನಾ ನಿರ್ದೇಶಕ ಕೆ.ಶರಣಬಸವ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.