ಮಕ್ಕಳಿಗೆ ಬದುಕಿನ ಜ್ಞಾನ ತಿಳಿಸಿ

Team Udayavani, Nov 15, 2018, 4:16 PM IST

ram-2.jpg

ರಾಮನಗರ: ಮಕ್ಕಳಿಗೆ ಬದುಕಿನ ಜ್ಞಾನವನ್ನು ಕಲಿಸುವಂತೆ ಜಾನಪದ ಲೋಕದ ಆಡಳಿತಾಧಿಕಾರಿ ಕುರುವ ಬಸವರಾಜ್‌ ಪೋಷಕರಿಗೆ ಸಲಹೆ ನೀಡಿದರು.

ನಗರದ ಶರತ್‌ ಮೆಮೋರಿಯಲ್‌ ಆಂಗ್ಲ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ, 63ನೇ ಕನ್ನಡ ರಾಜ್ಯೋತ್ಸವ, ಜಾನಪದ ಜಾತ್ರೆಯ ಅಂಗವಾಗಿ ಆಯೋಜಿಸಲಾಗಿದ್ದ ಮಕ್ಕಳೇ ಅಭಿನಯಿಸಿದ ಕುರುಕ್ಷೇತ್ರ ಪೌರಾಣಿಕ ನಾಟಕದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೆಚ್ಚುಗೆ: ಮಕ್ಕಳು ಬೆಳೆದಂತೆಲ್ಲ ಪಠ್ಯಕ್ರಮದ ಜೊತೆಗೆ ಭವಿಷ್ಯವನ್ನು ಎದುರಿಸುವ ಬಗ್ಗೆಯೂ ಮಕ್ಕಳಿಗೆ ತಿಳುವಳಿಕೆ ಮೂಡಿಸಬೇಕು. ಪ್ರಾಥಮಿಕ ಹಂತದ ಪ್ರೌಢವಾದ ನಾಟಕಗಳನ್ನು ಕರಗತ ಮಾಡಿಸಿ ಪ್ರದರ್ಶನ ಮಾಡಿಸುತ್ತಿರುವುದು ಸವಾಲಿನ ವಿಷಯ ಎಂದು ಶರತ್‌ ಶಾಲೆಯ ಶಿಕ್ಷಕರ ಮತ್ತು ಆಡಳಿತ ವರ್ಗದ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಪೌರಾಣಿಕ ನಾಟಕಗಳ ಪ್ರದರ್ಶನ ವಿರಳವಾಗುತ್ತಿದೆ. ಹಿಂದೆ ರಾತ್ರಿ ಇಡೀ ಪೌರಾಣಿಕ ನಾಟಕಗಳು ನಡೆಯುತ್ತಿದ್ದವು. ನಾಗರಿಕರು ಸಹ ಆಸಕ್ತಿಯಿಂದ ನೋಡುತ್ತಿದ್ದರು. ಪೌರಾಣಿಕ ನಾಟಕಗಳ ಪಾತ್ರಗಳನ್ನು ವಯಸ್ಕರು ನಿರ್ವಹಿಸುತ್ತಿದ್ದರು. ಇಂದು ಅದೇ ಪಾತ್ರಧಾರಿಗಳು, ಹಿರಿಯರಂತೆ ವೇಷಭೂಷಣ ತೊಡಿಸಿ, ಸಂಭಾಷಣೆಗಳನ್ನು ಶಾಲೆ ಕಟ್ಟಿ ಕೊಟ್ಟಿದೆ ಎಂದರು.
 
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್‌. ಕೆ.ಬೈರಲಿಂಗಯ್ಯ ಮಾತನಾಡಿ, ತಂತ್ರಜ್ಞಾನದ ಯುಗದಲ್ಲಿ ನಶಿಸುತ್ತಿರುವ ನಾಟಕ ಕಲೆ ಉಳಿಸಲು ಈ ಪ್ರಯತ್ನ ಮೆಚ್ಚುವಂತಹದ್ದು ಎಂದರು.

ಮಾದರಿ: ರಂಗಕಲೆಯ ಅರಿವೇ ಇಲ್ಲದ ವಯಸ್ಸಿನ ಮಕ್ಕಳಲ್ಲಿ ಪೌರಾಣಿಕ ನಾಟಕದಲ್ಲಿ ಬರುವ ವಿವಿಧ ಪಾತ್ರಗಳ ಅರಿವು ಮೂಡಿಸಿ, ಅವರಿಂದಲೇ ಪ್ರದರ್ಶನ ಮಾಡುವ ಕೆಲಸ ಜಿಲ್ಲೆಯಲ್ಲಿಯೇ ಇದು ಎರಡನೇ ಪ್ರದರ್ಶನವಾಗಿದ್ದು, ಜಿಲ್ಲೆಯಲ್ಲಿ ಇತರೆ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು. ಸಂಸ್ಥೆಯ ಕಾರ್ಯದರ್ಶಿ ಎನ್‌.ರಾಜೇಶ್ವರಿ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ಮಮತಾ ಇನ್ನಿತರ ರಿದ್ದರು. ಭರತನಾಟ್ಯ ಕಲಾವಿದೆ ಕುಮಾರಿ ಕನ್ನಿಕಾ ಮತ್ತು ರಂಗನಿರ್ದೇಶಕ ಸಿದ್ದಪ್ಪ ಅವರನ್ನು ಸನ್ಮಾನಿಸಲಾಯಿತು. ರಂಗನಿರ್ದೇಶಕ ಕೃಷ್ಣರಾಜು ನಾಟಕ ನಿರ್ದೇಶಿಸಿದರು. ಶ್ರೀಕೃಷ್ಣ, ಧರ್ಮರಾಯ, ಬಲರಾಮ, ಭೀಮ, ಅರ್ಜುನ, ದುರ್ಯೋಧನ, ದುಶ್ಯಾಸನ, ಸೈಂದವ, ಶಕುನಿ, ಕರ್ಣ, ಭೀಷ್ಮ, ಸೂತ್ರಧಾರಿ, ಶಿಖಂಡಿ, ಅಭಿಮನ್ಯು, ದ್ರೋಣಾಚಾರ್ಯ, ಸಹದೇವ, ಪಾತ್ರಗಳನ್ನು ಹಾಕಿದ್ದ ತಮ್ಮ ಮಕ್ಕಳನ್ನು ಕಂಡ ಪೋಷಕರು ಪುಳಕಿತರಾದರು. 

ನಾವು ಗಳಿಸಿರುವ ಜ್ಞಾನ ಮತ್ತು ಸಂಸ್ಕೃತಿ ಮಾತ್ರ ಶಾಶ್ವತವಾಗಿದೆ. ಆದರೆ ಬಹುಪಾಲು ಜನರು ಮಕ್ಕಳಿಗೆ ಅಗತ್ಯವಾಗಿರುವುದನ್ನು ಬಿಟ್ಟು ಉಳಿದೆಲ್ಲವನ್ನೂ ನೀಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಏನು ಬೇಕು ಎಂಬುದನ್ನು ಅರಿತು ಪೌರಾಣಿಕ ನಾಟಕದ ಮೂಲಕ ಮಕ್ಕಳಿಗೆ ಜ್ಞಾನ ನೀಡುವ ಪ್ರಯತ್ನ ಮಾಡಲಾಗುತ್ತಿದೆ.
ಆದಿನಾರಾಯಣ ರೆಡ್ಡಿ, ಅಧ್ಯಕ್ಷ, ಶರತ್‌ ಮೆಮೋರಿಯಲ್‌ ಆಂಗ್ಲ ಶಾಲೆ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.