ಚುನಾವಣೆ ದೃಷ್ಟಿಯಲ್ಲಿ ಬಜೆಟ್ ಮಂಡನೆ

Team Udayavani, Feb 2, 2019, 7:09 AM IST

chunavane.jpg

ರಾಮನಗರ: ಶುಕ್ರವಾರ ಕೇಂದ್ರ ವಿತ್ತ ಸಚಿವ ಪಿಯೂಷ್‌ ಗೋಯೆಲ್‌ ಮಂಡಿಸಿರುವ ಮಧ್ಯಂತರ ಬಜೆಟ್‌ನಲ್ಲಿ ಒಂದೆರೆಡು ಅಂಶಗಳನ್ನು ಹೊರತು ಪಡಿಸಿದರೆ, ಇಡೀ ಬಜೆಟ್ ಚುನಾವಣೆಯ ದೃಷ್ಟಿ ಇರಿಸಿಕೊಂಡು ಮಂಡಿಸಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ಹಾಗೂ ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಮಾಜಿ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.

ಉದಯವಾಣಿಯೊಂದಿಗೆ ಪ್ರತಿಕ್ರಿಯಿಸಿದ ಅವರು, ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಮಂಡಿಸಿರುವ ಬಜೆಟ್ ಇದಾಗಿದೆ. ಕೃಷಿ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಡುವ ನಿರೀಕ್ಷೆ ದೇಶ ವ್ಯಾಪಿ ರೈತ ಸಮುದಾಯ ಇರಿಸಿಕೊಂಡಿತ್ತು. ಸಾಲ ಮನ್ನಾ ಮಾಡುವ ನಿರೀಕ್ಷೆ ಇತ್ತು. ಆದರೆ, ಈ ನಿರೀಕ್ಷೆಗಳು ಹುಸಿಯಾಗಿವೆ. ಸಣ್ಣ ರೈತರಿಗೆ ವಾರ್ಷಿಕ 6 ಸಾವಿರ ಪ್ರೋತ್ಸಾಹ ಧನ ನೀಡುವುದು ಏನೇನು ಸಾಲುವುದಿಲ್ಲ. ಕೃಷಿ ಬೆಳೆಗಳಿಗೆ ನೀಡುವ ಎಂ.ಎಸ್‌.ಪಿ ದರಗಳಲ್ಲೂ ಹೆಚ್ಚಳವಾಗಿಲ್ಲ ಎಂಬುದು ಬೇಸರದ ಸಂಗತಿ ಎಂದು ತಿಳಿಸಿದರು.

ಉದ್ಯಮಕ್ಕೆ ಸಹಕಾರಿ: ರಿಯಲ್‌ ಎಸ್ಟೇಟ್ ಉದ್ಯಮಕ್ಕೆ ಸಹಕಾರಿಯಾಗುವ ಬಜೆಟ್ ಮಂಡನೆಯಾಗಿದೆ. ಜಿ.ಎಸ್‌.ಟಿ ದರಗಳನ್ನು ಕಡಿಮೆ ಮಾಡುವ ನಿರೀಕ್ಷೆ ಇತ್ತು. ಅದು ಕೂಡ ಈಡೇರಲಿಲ್ಲ. ಕಳೆದ 5 ವರ್ಷಗಲ್ಲಿ ದೇಶದ ನಿರುದ್ಯೋಗ ಸಮಸ್ಯೆ ದುಪ್ಪಟ್ಟಾಗಿದೆ ಎಂದು ಕೆಲವು ವರದಿಗಳು ಹೇಳಿವೆ. ಈ ವಿಚಾರ ಕೇಂದ್ರ ಸರ್ಕಾರಕ್ಕೆ ಗೊತ್ತಿದೆ. 2 ಕೋಟಿ ಉದ್ಯೋಗ ಸೃಷ್ಟಿ ಮತ್ತು ಅಚ್ಚೇದಿನ್‌ ನೀಡುವ ಭರವಸೆ ಕೊಟ್ಟಿದ್ದ ನರೇಂದ್ರ ಮೋದಿ ಸರ್ಕಾರ ನಿರುದ್ಯೋಗ ಸಮಸ್ಯೆಗೆ ಸ್ಪಂದಿಸದಿರುವುದು ದುರಂತ.

ಶುಕ್ರವಾರ ಮಂಡನೆಯಾಗಿರುವ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗೆ ಯಾವ ಯೋಜನೆಯೂ ಇಲ್ಲ. ರಾಮನಗರ -ಹೆಜ್ಜಾಲ- ಕನಕಪುರ- ಚಾಮರಾಜನಗರ ರೈಲು ಮಾರ್ಗದ ಬಗ್ಗೆ ಪ್ರಸ್ತಾಪವಿಲ್ಲ. ಹೆಚ್ಚುವರಿ ರೈಲುಗಳನ್ನು ಪರಿಚಯಿಸುವ ಚಿಂತನೆಗಳು ಇಲ್ಲ. ಬುಲೆಟ್ ರೈಲು ಓಡಿಸುವ ನಿರ್ಧಾರವೂ ಹುಸಿಯಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದರು.

ಯುವಕರಿಗೆ ಸ್ಪಂದನೆ ಇಲ್ಲ: ಯುವ ಸಮುದಾಯದ ಆಶೋತ್ತರಗಳಿಗೆ ಈ ಬಜೆಟ್‌ನಲ್ಲಿ ಸ್ಪಂದನೆ ಇಲ್ಲ ಎಂದಿರುವ ಅವರು, ಆದಾಯ ತೆರಿಗೆ ವಿಚಾರದಲ್ಲಿ ವಿತ್ತ ಸಚಿವರ ನಿರ್ಧಾರವನ್ನು ಸ್ವಾಗತಿಸಿದ್ದಾರೆ. 5 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ ಎಂಬ ವಿಚಾರ ಸ್ವಾಗತಾರ್ಹ ಎಂದಿರುವ ಅವರು ಈ ನಿರ್ಧಾರ ಮಧ್ಯಮವರ್ಗದ ಕುಟುಂಬಗಳಿಗೆ ಸಹಕಾರಿ ಎಂದು ತಿಳಿಸಿದರು.

ನಿರೀಕ್ಷೆ ಹುಸಿ: ಕೇಂದ್ರ ಬಜೆಟ್‌ನಲ್ಲಿ ಹಲವು ನಿರೀಕ್ಷೆಗಳು ಇದ್ದವು. ಈ ದೇಶದ ಬೆನ್ನೆಲುಬಾದ ರೈತರ ಕಷ್ಟಗಳಿಗೆ ಸ್ಪಂದಿಸುವ ಬಜೆಟ್ ಆಗಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಚುಣಾವಣೆಯನ್ನು ಗಮನದಲ್ಲಿಟ್ಟುಕೊಂಡು ರೈತರ ಮನವೊಲಿಸುವ ಬಜೆಟ್ ಇದಾಗಿದೆ. ಇದರಿಂದ ಅನ್ನದಾತ ಸಮಸ್ಯೆ ನೀಗಲು ಅಸಾಧ್ಯವಾಗಿದೆ. ದೇಶಾದ್ಯಂತ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಾದರೆ ಮಾತ್ರ ರೈತರ ಪ್ರಗತಿ ಸಾಧ್ಯವಾಗುತ್ತದೆ ಎಂದು ಕನಕಪುರದ ರೈತ ಮುಖಂಡ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.