ಆಕಸ್ಮಿಕ ಬೆಂಕಿಗೆ ಮಾವಿನ ಮರಗಳು ಭಸ್ಮ


Team Udayavani, Mar 15, 2019, 7:26 AM IST

akasmika.jpg

ರಾಮನಗರ: ಆಕಸ್ಮಿಕ ಬೆಂಕಿಗೆ ತಾಲೂಕಿನ ಕಸಬಾ ಹೋಬಳಿ ಪಾದರಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಮಾವಿನ ಮರಗಳು ಸುಟ್ಟು ಕರಕಲಾಗಿವೆ. ಜನವಸತಿಯತ್ತ ಹರಡುತ್ತಿದ್ದ ಬೆಂಕಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ. 

ಪಾದರಹಳ್ಳಿ ಗ್ರಾಮದಿಂದ ಆಲೆಮರದೊಡ್ಡಿಗೆ ಹೋಗುವ ರಸ್ತೆಯಲ್ಲಿರುವ ತೊಟ್ಟಿಲಸೊಣೆ ಬಳಿ ಗಿಡಗಂಟೆಗಳಲ್ಲಿ ಆರಂಭವಾದ ಬೆಂಕಿ, ಬಿಸಿಲಿನ ಝಳಕ್ಕೆ ಕ್ಷಿಪ್ರವಾಗಿ ವ್ಯಾಪ್ತಿಸಿದೆ. ರಸ್ತೆಯ ಎಡ ಮತ್ತು ಬಲ ಭಾಗದಲ್ಲಿರುವ ಸೋಮಯ್ಯ, ಚಿಕ್ಕಣ್ಣಯ್ಯ, ಚಂದ್ರಮ್ಮ ಅವರ ಜಮೀನುಗಳಿಗೆ ಬೆಂಕಿ ವ್ಯಾಪಿಸಿ, ಗಿಡಗಂಟೆಗಳನ್ನೇಲ್ಲ ಭಸ್ಮ ಮಾಡಿವೆ. 

ಗ್ರಾಮಕ್ಕೆ ಹೊಂದಿಕೊಂಡಂತಿರುವ ನಾಗಪ್ಪನ ಬಾರೆ ಬಳಿಯ ಮುನಿಯಾಬೋವಿ ಅವರ ಜಮೀನಿಗೂ ಬೆಂಕಿ ವ್ಯಾಪ್ತಿಸಿದೆ. ಬೆಂಕಿಯ ಕೆನ್ನಾಲಾಗಿಯ ಅನಾಹುತವನ್ನು ಕಂಡ ಅಲ್ಲೇ ಪಕ್ಕದಲ್ಲಿದ್ದ ಜನತಾ ಕಾಲೋನಿಯ ನಿವಾಸಿಗಳೂ ಹೌಹಾರಿದ್ದಾರೆ.

ಇನ್ನೇನು ತಮ್ಮ ಕಾಲೋನಿಗೂ ಬೆಂಕಿ ವ್ಯಾಪ್ತಿಸುತ್ತದೆ ಎಂಬ ಭಯಭೀತರಾಗಿ ಗುಡಿಸಲುಗಳಿಂದ ಹೊರಗೋಡಿದ್ದಾರೆ. ಬೆಂಕಿಯನ್ನು ಹತೋಟಿಗೆ ತರಲು ಗ್ರಾಮಸ್ಥರು, ಯುವಕರು ನಡೆಸಿದ ಪ್ರಯತ್ನ ಫ‌ಲ ಕೊಡಲಿಲ್ಲ. ಅಷ್ಟರಲ್ಲಾಗಲೆ ನಾಗರಿಕರೊಬ್ಬರು ಅಗ್ನಿ ಶಾಮಕ ದಳಕ್ಕೆ ಮಾಡಿದ್ದ ಕರೆಯನ್ವಯ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. 

ಕಿಡಿಗೇಡಿಗಳ ಕೃತ್ಯದ ಬಗ್ಗೆ ಗ್ರಾಮಸ್ಥರು ಅನುಮಾನ: ಪಾದರಹಳ್ಳಿ ಗ್ರಾಮದ ಬಳಿ ಗುರುವಾರ ಸಂಭವಿಸಿರುವ ಬೆಂಕಿ ಅನಾಹುತಕ್ಕೆ ಕಿಡಿಗೇಡಿಗಳ ಕೃತ್ಯ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಬೀಡಿ ಸೇದಿ ಬೀಸಾಡಿದ ಕಾರಣವನ್ನು ಕೆಲವು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ. ಬೇಸಿಗೆಯ ಬಿಸಿಲಿನ ತಾಪಕ್ಕೆ ಸಣ್ಣ ಕಿಡಿಯೂ ದೊಡ್ಡ ಅನಾಹುತವನ್ನು ಸೃಷ್ಠಿಸುತ್ತಿದೆ ಎಂದು ಗ್ರಾಮಸ್ಥರು ಪ್ರತಿಕ್ರಿಯಸಿದ್ದಾರೆ.

ಗ್ರಾಮಪಂಚಾಯ್ತಿ ಸದಸ್ಯ ಪುಟ್ಟೇಗೌಡ, ಬೆಂಕಿ ಅನಾಹುತದಿಂದ ರೈತರು ಮತ್ತೆ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ಮಾವಿನ ಮರಗಳು ಸುಟ್ಟು ಹೋಗಿ ಅಪಾರ ನಷ್ಟ ಸಂಭವಿಸುತ್ತಿದೆ. ರೈತರ ನಷ್ಟವನ್ನು ಸರ್ಕಾರ ಭರಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. 

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.