ಶಬರಿಮಲೆಯಲ್ಲಿ ಬಿಜೆಪಿ ಸತ್ಯಶೋಧನೆ

Team Udayavani, Dec 3, 2018, 6:00 AM IST

sabarimala-temple.jpg

ತಿರುವನಂತಪುರ/ಪಂಪಾ: ಶಬರಿಮಲೆಯಲ್ಲಿನ ಪರಿಸ್ಥಿತಿ, ಪೊಲೀಸ್‌ ದೌರ್ಜನ್ಯ ಕುರಿತು ಮಾಹಿತಿ ಸಂಗ್ರಹಿಸಿ ವರದಿ ಪಡೆದುಕೊಳ್ಳುವ ಉದ್ದೇಶದಿಂದ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಕಳುಹಿಸಿರುವ ನಾಲ್ವರು ನಾಯಕರ ತಂಡ ಭಾನುವಾರ ಶಬರಿಮಲೆ ಪ್ರವೇಶಿಸಿದೆ.

ಬಿಜೆಪಿ ನಾಯಕರಾದ ನಳಿನ್‌ಕುಮಾರ್‌ ಕಟೀಲ್‌, ಪ್ರಹ್ಲಾದ್‌ ಜೋಷಿ, ವಿನೋದ್‌ ಸೋನ್ಕರ್‌, ಸರೋಜ್‌ ಪಾಂಡೆ ಅವರನ್ನೊಳಗೊಂಡ ತಂಡ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾರಂಭಿಸಿದೆ. ಭಕ್ತರು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ, ವಾಸ್ತವಿಕ ಅಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಿ 15 ದಿನಗಳೊಳಗೆ ಅಮಿತ್‌ ಶಾಗೆ ವರದಿ ನೀಡಲಿದೆ.

ಖ್ಯಾತನಾಮರ ಆಹ್ವಾನಿಸಲು ಚಿಂತನೆ: ಮತ್ತೂಂದೆಡೆ, ಶಬರಿಮಲೆಗೆ ಭೇಟಿ ನೀಡುವಂತೆ ಭಕ್ತಾದಿಗಳ ಮನವೊಲಿಸುವ ನಿಟ್ಟಿನಲ್ಲಿ ಸಿನಿಮಾ ಕ್ಷೇತ್ರದ ಪ್ರಮುಖರು ಸೇರಿದಂತೆ ಸೆಲೆಬ್ರಿಟಿಗಳಿಂದ ಜಾಹೀರಾತು ನೀಡಿಸಲು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಚಿಂತನೆ ನಡೆಸಿದೆ. 

ಸುಪ್ರೀಂಕೋರ್ಟ್‌ ತೀರ್ಪು ಜಾರಿ ಪರ-ವಿರೋಧದ ಬಗ್ಗೆ ನಡೆದ ಹಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸಕ್ತ ಸಾಲಿನಲ್ಲಿ ಭಕ್ತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಈ ಯೋಚನೆ ಮಾಡಲಾಗಿದೆ. ಸೆಲೆಬ್ರಿಟಿಗಳಿಂದ ಜಾಹೀರಾತು ನೀಡಿಸುವ ಮೂಲಕ ಭಕ್ತರಲ್ಲಿನ ಆತಂಕವನ್ನು ನಿವಾರಣೆ ಮಾಡುವುದು ಇದರ ಉದ್ದೇಶ. ಈ ಬಗ್ಗೆ ಡಿ.3ರಂದು ಅಂತಿಮ ನಿರ್ಧಾರ ಹೊರ ಬೀಳಲಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸ್ಥಳೀಯರಿಗಿಂತ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಿಂದ ಭೇಟಿ ನೀಡುವವರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕೋರ್ಟ್‌ ಟೀಂನಿಂದ ಮಂಗಳವಾರ ಭೇಟಿ
ಶಬರಿಮಲೆ ದೇಗುಲದ ಸುತ್ತಮುತ್ತ ಯಾವುದೇ ಮೂಲಸೌಕರ್ಯ ನೀಡಲಾಗುತ್ತಿಲ್ಲ ಎಂಬ ಆರೋಪದ ಮೇರೆಗೆ ಕೇರಳ ಹೈಕೋರ್ಟ್‌ ನೇಮಕ ಮಾಡಿದ್ದ ತ್ರಿಸದಸ್ಯ ಸಮಿತಿ ಸೋಮವಾರ ಮತ್ತು ಮಂಗಳವಾರ ದೇಗುಲಕ್ಕೆ ಭೇಟಿ ನೀಡಲಿದೆ. ಸೋಮವಾರ ಪಂಪಾ ಮತ್ತು ನಲ್ಲಿಕಳ್‌ಗೆ ತೆರಳಿ ಪರಿಶೀಲನೆ ನಡೆಸಲಿದ್ದರೆ, ಮಂಗಳವಾರ ದೇಗುಲದ ಆವರಣದತ್ತ ಹೋಗಲಿದೆ. ಇಲ್ಲಿ ಭಕ್ತರಿಗೆ ಯಾವ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂಬುದನ್ನು ನೋಡುವುದಲ್ಲದೇ, ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೂ ಸೂಚನೆ ನೀಡಲಿದೆ.

75 ಸಾವಿರ- ಶನಿವಾರ ಸಂಜೆಯವರೆಗೆ ಭೇಟಿ ನೀಡಿದವರು
61 ಸಾವಿರ- ಶುಕ್ರವಾರ ಭೇಟಿ ನೀಡಿದ ಯಾತ್ರಿಗಳು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.