ಪೆಟ್ರೋಲ್‌ ಬೆಲೆ ನಿಯಂತ್ರಿಸುವಲ್ಲಿ  ಕೇಂದ್ರ ವಿಫಲ

Team Udayavani, Sep 17, 2017, 11:29 AM IST

SHIVAMOGA-2.jpg

ಶಿವಮೊಗ್ಗ: ಕೇಂದ್ರ ಸರ್ಕಾರ ಪೆಟ್ರೋಲ್‌- ಡೀಸೆಲ್‌, ಎಲ್‌ಪಿಜಿ ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ತಳ್ಳುಗಾಡಿಗಳ ಮೇಲೆ ದ್ವಿಚಕ್ರವಾಹನಗಳನ್ನಿಟ್ಟು ಜಿಲ್ಲಾಧಿಕಾರಿ ಕಚೇರಿ ಎದುರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ದೈನಂದಿನ ಬೆಲೆ ಪರಿಷ್ಕರಣೆ ಜಾರಿಗೆ ಬಂದಾಗಿನಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಚ್ಚೇ ದಿನ್‌ ಬರುತ್ತೆ ಎಂದು ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನಾಲ್ಕು ವರ್ಷ ಕಳೆದರೂ ಅಚ್ಚೇ ದಿನ್‌ ತರಲೇ ಇಲ್ಲ, ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೀವನ ದುಸ್ತರವಾಗುತ್ತಿದೆ ಎಂದು ದೂರಿದರು.

ಪದೇ ಪದೇ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡುತ್ತಿರುವುದರಿಂದ ಸರಕು ಸಾಗಣೆ ವೆಚ್ಚ ದುಬಾರಿಯಾಗುತ್ತಿದ್ದು ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದೆ. ನೋಟ್‌ ಬ್ಯಾನ್‌ ನಂತಹ ಕ್ರಮಗಳಿಂದ ಜನಸಮಾನ್ಯರ ಮೇಲೆ ಆರ್ಥಿಕ ಗದಾಪ್ರಹಾರ ನಡೆಸಿದ ಕೇಂದ್ರ ಸರ್ಕಾರ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗುವ ಮೂಲಕ ಜನರನ್ನು ಕಷ್ಟಕ್ಕೆ ದೂಡಿ ಹೊರೆ ಹೊರಿಸಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ಆರ್ಥಿಕ ನೀತಿಗಳನ್ನು ಬದಲಿಸಿಕೊಳ್ಳಬೇಕು. ಅಂತರರಾಷ್ಟ್ರೀಯ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ನಿಯಂತ್ರಿಸಬೇಕೆಂದು ಒತ್ತಾಯಿಸಿದರು. ಉರುವಲು ಬದಲಿಗೆ ಎಲ್‌ಪಿಜಿ ಬಳಸಿ ಎಂದು ಪ್ರಚಾರ ಮಾಡುತ್ತಿರುವ ಕೇಂದ್ರ ಸರ್ಕಾರ ಗ್ಯಾಸ್‌ ಬೆಲೆಯನ್ನು ಏರಿಕೆ ಮಾಡುತ್ತಿದೆ. ಗ್ಯಾಸ್‌ಗೆ ನೀಡುತ್ತಿದ್ದ ಸಬ್ಸಿಡಿಯನ್ನು ರದ್ದುಗೊಳಿಸಲು ಮುಂದಾಗಿದೆ. ಇಂತಹ ಕ್ರಮವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ರಮೇಶ್‌ ಹೆಗ್ಡೆ, ಕಾಶಿ ವಿಶ್ವನಾಥ್‌, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಎಚ್‌. ಎಸ್‌. ಬಾಲಾಜಿ, ರಾಜ್ಯ ಉಪಾಧ್ಯಕ್ಷ ಕೆ. ಚೇತನ್‌, ವಿಕಾಸ್‌ ನಾಡಿಗ್‌, ಪ್ರಮೋದ್‌, ವಿಜಯ್‌, ಧನಂಜಯ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !

Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.