ಕೆರೆ-ಕಾಲುವೆ ಕಾಮಗಾರಿಯಲ್ಲಿ ಭ್ರಷ್ಟಾಚಾರ: ತನಿಖೆಗೆ ಆಗ್ರಹ

Team Udayavani, Nov 21, 2017, 6:25 PM IST

21-19.jpg

ಶಿವಮೊಗ್ಗ: ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ಮತ್ತು ಕಾಲುವೆ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವುದರಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮನವಿ 
ಸಲ್ಲಿಸಲಾಯಿತು.

ಶಿವಮೊಗ್ಗ ತಾಲೂಕು ಆಯನೂರು, ಕುಂಸಿ, ಹಾರನಹಳ್ಳಿ ಹೋಬಳಿಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 26 ಕರೆ ಮತ್ತು ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ 1,76,66,972 ರೂ. ಪ್ಯಾಕೇಜ್‌ ಟೆಂಡರ್‌ ಕರೆದಿದ್ದು, ಶೇ. 20.11ರಷ್ಟು ಕಡಿಮೆಗೆ ಬೆಂಗಳೂರಿನ ಗುತ್ತಿಗೆದಾರರಿಗೆ ಟೆಂಡರ್‌ ನೀಡಲಾಗಿತ್ತು. ಒಂಬತ್ತು ತಿಂಗಳ ಗಡುವು ನೀಡಲಾಗಿತ್ತು ಎಂದು ಹೇಳಿದರು.  ಸ್ಥಳೀಯ ಶಾಸಕರ ಸೂಚನೆ ಮೇರೆಗೆ ಮೂಲ ಗುತ್ತಿಗೆದಾರರು ಶಾಸಕರ ಆಪ್ತರಿಗೆ ಉಪಗುತ್ತಿಗೆ ನೀಡಿ ಕಳಪೆ ಕಾಮಗಾರಿ ನಡೆಸಲಾಗಿದೆ. ಕೆಲವೆಡೆ ಕೆಲಸವನ್ನೇ ಮಾಡದೆ ಬಿಲ್‌ ಮಂಜೂರು ಮಾಡಿಸಿಕೊಂಡು ಭ್ರಷ್ಟಾಚಾರ ಎಸಗಲಾಗಿದ್ದು, ರೈತರಿಗೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿದರು.

ಗುತ್ತಿಗೆದಾರರ ಜೊತೆ ಅಧಿಕಾರಿಗಳು ಸೇರಿಕೊಂಡಿದ್ದಾರೆ. ಸ್ಥಳೀಯ ಶಾಸಕರು ಕೂಡ ಇದರಲ್ಲಿ ಶಾಮೀಲಾಗಿರುವ ಶಂಕೆ ಇದೆ. ಈ ಕುರಿತು ಬಿಜೆಪಿ ಹಿಂದೆಯೇ ಪ್ರತಿಭಟನೆ ನಡೆಸಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಜಿಲ್ಲಾಡಳಿತ ಕ್ರಮ ವಹಿಸದ ಕಾರಣ ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಚ್‌.ಸಿ. ಬಸವರಾಜಪ್ಪ, ಧೀರರಾಜ್‌ ಹೊನ್ನವಿಲೆ, ಎಂ.ಎಸ್‌. ಮಹೇಂದ್ರನಾಥ್‌, ನಾಗರಾಜ್‌, ಸುರೇಶ್‌, ಚೂಡಾನಾಯ್ಕ ಇದ್ದರು. 

ಟಾಪ್ ನ್ಯೂಸ್

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

ಕೆ.ಎಸ್ ಈಶ್ವರಪ್ಪ

Shimoga; ಮೋದಿ ಬಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ: ಕೆ.ಎಸ್ ಈಶ್ವರಪ್ಪ

4-shivamogga

LS Polls: ‘ಮೋದಿ ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಿ’

ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ

ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.