ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರದಬ್ಬಿ

Team Udayavani, Aug 10, 2018, 5:08 PM IST

shiv.jpg

ಶಿವಮೊಗ್ಗ: ಅಕ್ರಮವಾಗಿ ದೇಶದಲ್ಲಿ ನೆಲೆಯೂರಿರುವ ಬಾಂಗ್ಲಾ ವಲಸಿಗರನ್ನು ಕೂಡಲೇ ಹೊರಕಳಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ವತಿಯಿಂದ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ನಾಗರಿಕ ನೋಂದಣಿಯಿಂದ ಅಸ್ಸಾಂ ರಾಜ್ಯದಲ್ಲಿರುವ ಬಾಂಗ್ಲಾ ವಲಸಿಗರನ್ನು ಗುರುತಿಸಿ ಕ್ರಮ ಕೈಗೊಳ್ಳಲು ಸಹಕಾರಿಯಾಗಿದೆ. ಪೊಳ್ಳು ಸೆಕ್ಯುಲರ್‌ವಾದಿಗಳು, ಪ್ರಗತಿ ವಿರೋಧಿ ಚಿಂತಕರು ಪ್ರಮುಖವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದಕ್ಕೆ ವಿರೋಧ ವ್ಯಕ್ತಪಡಿಸಿರುವುದು ದುರುದ್ದೇಶದಿಂದ ಕೂಡಿದ ರಾಜಕೀಯ ಲೆಕ್ಕಾಚಾರ ಹಾಗೂ ಮತ ಬ್ಯಾಂಕ್‌ಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ದೂರಿದರು.

4 ಕೋಟಿಗೂ ಹೆಚ್ಚು ಬಾಂಗ್ಲಾ ವಲಸಿಗರು ಭಾರತ ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಬಾಂಗ್ಲಾ ನುಸುಳುಕೋರರಿಂದ ದೇಶದ ಆಂತರಿಕ ಭದ್ರತೆಗೆ ಧಕ್ಕೆಯಾಗಿ ಸಾಮಾಜಿಕ ಸಾಮರಸ್ಯ ದೊಡ್ಡಮಟ್ಟದಲ್ಲಿ ಹದಗೆಡುವ ಆತಂಕದ ವಾತಾವರಣ ಸೃಷ್ಟಿಸಿದೆ ಎಂದರು.

ಬಾಂಗ್ಲಾ ವಲಸಿಗರಿಂದ ನಮ್ಮ ದೇಶದ ನಾಗರಿಕರು ಎಲ್ಲ ರೀತಿಯ ಮೂಲಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ದೇಶದ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ ಅಸ್ಸಾಂ ರಾಜ್ಯದಲ್ಲಿ ನಡೆದ ಪೌರತ್ವ ನೋಂದಣಿ ಅಭಿಯಾನದಲ್ಲಿ 40 ಲಕ್ಷಕ್ಕೂ ಅಧಿಕ ಬಾಂಗ್ಲಾ ನುಸುಳುಕೋರರು ನೆಲೆಸಿರುವ ಬಗ್ಗೆ ಅಘಾತಕಾರಿ ಸಂಗತಿ ಹೊರಬಿದ್ದಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮಾಹಿತಿ ಪ್ರಕಾರ ಕರ್ನಾಟಕದಲ್ಲೂ 20 ಲಕ್ಷಕ್ಕೂ ಹೆಚ್ಚು ಬಾಂಗ್ಲಾ ನುಸುಳುಕೋರರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಮಾಹಿತಿ ಇದೆ. ನಿರಾಶ್ರಿತರೆಂಬ ಹೆಸರಿನಲ್ಲಿ ದೇಶದ ಸೌಲಭ್ಯ ಪಡೆದು ದೇಶಕ್ಕೆ ಮಾರಕವಾಗಿರುವ ಭಯೋತ್ಪಾದನೆ, ಕಳ್ಳತನ, ಮಾದಕ ವಸ್ತು ಅವ್ಯವಹಾರ, ವೇಶ್ಯಾವಾಟಿಕೆ ಸೇರಿದಂತೆ ಇನ್ನಿತರ ದುಷ್ಕೃತ್ಯಗಳಲ್ಲಿ ತೊಡಗಿದ್ದಾರೆ. ದೇಶದ ಗಡಿಭಾಗ ಸೇರಿದಂತೆ ಎಲ್ಲೆಡೆ ಬಾಂಗ್ಲಾ ವಲಸಿಗರು ಹೆಚ್ಚಾಗಿದ್ದು, ಇವರು ಉಗ್ರಗಾಮಿ ಸಂಘಟನೆಯ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಇವರಿಂದ ದೇಶದಲ್ಲಿ ಕಾನೂನುಬಾಹಿರ ಚಟುವಟಿಕೆ ಮತ್ತು ಭಯೋತ್ಪಾದನಾ ಕೃತ್ಯಗಳು ಹೆಚ್ಚಾಗುತ್ತಿವೆ. ಕೆಲವು ದಿನಗಳ ಹಿಂದೆ ಕರ್ನಾಟಕದ ರಾಮನಗರದಲ್ಲಿ ಸೆರೆಸಿಕ್ಕ ಶಂಕಿತ ಉಗ್ರ ಕೌಸರ್‌ ಇದಕ್ಕೆ ತಾಜಾ ಉದಾಹರಣೆಯಾಗಿದೆ.

ದೇಶದ ನಾಗರಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮ ವಲಸಿಗರನ್ನು ದೇಶದ ಗಡಿಯಿಂದ ಹೊರ ಹಾಕಬೇಕೆಂದು ಒತ್ತಾಯಿಸಿ ರಾಷ್ಟ್ರಪತಿಗಳಿಗೆ, ಕೇಂದ್ರ ಗ್ರಹ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್‌ ಜಿಲ್ಲಾಧ್ಯಕ್ಷ ರಮೇಶ್‌ ಬಾಬು ಜಾಧವ್‌, ಬಜರಂಗ ದಳ ಜಿಲ್ಲಾ ಸಂಯೋಜಕ ಎಚ್‌.ಕೆ. ದೀನದಯಾಳು, ಪ್ರಮುಖರಾದ ಎಸ್‌.ಎನ್‌. ಚನ್ನಬಸಪ್ಪ, ಎಸ್‌. ದತ್ತಾತ್ರಿ, ನಟರಾಜ್‌, ಚಂದ್ರಕಾಂತ್‌, ಚಂದ್ರಶೇಖರ್‌, ಜಗದೀಶ್‌ ಚಂದ್ರ, ಮಾಲತೇಶ್‌, ರಾಜು ಇನ್ನಿತರರು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.