ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಯತ್ನಕ್ಕೆ ಆಕ್ರೋಶ

Team Udayavani, Jan 18, 2019, 10:09 AM IST

chikk-3.jpg

ಶಿವಮೊಗ್ಗ: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ನಾಯಕರ ವರ್ತನೆಯನ್ನು ಖಂಡಿಸಿ ಗುರುವಾರ ಬೆಳಗ್ಗೆ ಜಿಲ್ಲಾ ಕಾಂಗ್ರೆಸ್‌ ಸಮಿತಿಯವರು ಮಹಾವೀರ ಸರ್ಕಲ್‌ನಲ್ಲಿ ಮಾವನ ಸರಪಳಿ ರಚಿಸಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಬಹುಮತದಿಂದ ರಚನೆಯಾಗಿದ್ದು, ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಿ ಉತ್ತಮ ಕೆಲಸ ಮಾಡುತ್ತಿರುವ ಇಂತಹ ಸಂದರ್ಭದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಪ್ರಜಾಪ್ರಭುತ್ವಕ್ಕೆ ಅವಮಾನ ಎಂಬಂತೆ ಕಾಂಗ್ರೆಸ್‌ ಶಾಸಕರನ್ನು ಖರೀದಿ ಮಾಡಿ ರಾಜೀನಾಮೆ ಕೊಡಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ತಿಳಿಸಿದರು.

ಬಿಜೆಪಿ ಕಾಂಗ್ರೆಸ್‌ ಶಾಸಕರನ್ನು ಸೆಳೆಯುವ ಕೆಲಸವನ್ನು ಕಳೆದ 6 ತಿಂಗಳಿನಿಂದ ಮಾಡುತ್ತಲೇ ಬಂದಿದೆ. ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನವಾಗಿದೆ. ಯಡಿಯೂರಪ್ಪನವರು ಅಧಿಕಾರ ಕಳೆದುಕೊಂಡು ಅವಮಾನವಾದರೂ ಕೂಡ ತಮ್ಮ ವರ್ತನೆಯನ್ನು ಬಿಟ್ಟಿಲ್ಲ. ಅವರಿಗೆ ಬುದ್ಧಿ ಬರುವುದಿಲ್ಲ. ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರಗಾಲ ಕಾಲಿಟ್ಟಿದೆ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಸರ್ಕಾರದ ಜೊತೆಗೆ ಸಹಕಾರ ನೀಡಿ ಈ ನಾಡಿನ ರೈತರ, ಬಡವರ ನೆರವಿಗೆ ಧಾವಿಸುವುದನ್ನು ಬಿಟ್ಟು ಐಷಾರಾಮಿ ಹೊಟೇಲ್‌ಗ‌ಳಲ್ಲಿ ಸೇರಿಕೊಂಡು ಕೋಟ್ಯಂತರ ರೂ. ಖರ್ಚು ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಬಿಜೆಪಿ ಶಾಸಕರ ಮತ್ತು ಮುಖಂಡರ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು.

ಕಾಂಗ್ರೆಸ್‌ ಶಾಸಕರು ಯಾರೂ ಸ್ವಯಂಪ್ರೇರಿತವಾಗಿ ಹೋಗಿಲ್ಲ. ಇವರಿಗೆ ಆಮಿಷ ತೋರಿಸಲಾಗಿದೆ. ಈ ತಂತ್ರಕ್ಕೆ ಕಾಂಗ್ರೆಸ್‌ ಶಾಸಕರು ಬಲಿಯಾಗುವುದಿಲ್ಲ ಎಂದು ಮತ್ತೂಮ್ಮೆ ತೋರಿಸಿದ್ದಾರೆ. ಬಿಜೆಪಿ ಮತ್ತೂಮ್ಮೆ ತನ್ನ ಮರ್ಯಾದೆಯನ್ನು ಕಳೆದುಕೊಂಡಿದೆ ಎಂದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್.ಎಸ್‌. ಸುಂದರೇಶ್‌ ವಹಿಸಿದ್ದರು. ಮುಖಂಡರಾದ ಕೆ.ಬಿ.ಪ್ರಸನ್ನಕುಮಾರ್‌, ವಿಶ್ವನಾಥ ಕಾಶಿ, ಎಚ್.ಸಿ. ಯೋಗೇಶ್‌, ಎಸ್‌.ಪಿ. ದಿನೇಶ್‌, ಕೆ.ದೇವೇಂದ್ರಪ್ಪ, ರಮೇಶ್‌ ಹೆಗ್ಡೆ, ವಿಜಯಲಕ್ಷ್ಮೀ ಪಾಟೀಲ್‌, ಪಲ್ಲವಿ, ಆರೀಫುಲ್ಲಾ, ಎಲ್‌. ರಾಮೇಗೌಡ, ಸಿ.ಎಚ್. ಚಂದ್ರಭೂಪಾಲ್‌, ವೈ.ಎಚ್. ನಾಗರಾಜ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.