ಕೈಗಾರಿಕೆ, ಔದ್ಯಮಿಕ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿ


Team Udayavani, Aug 16, 2017, 7:30 AM IST

170815kpn24a.jpg

ಬೆಂಗಳೂರು: ರಾಜ್ಯಕ್ಕೆ ವಿಶ್ವದೆಲ್ಲೆಡೆಯಿಂದ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ವರ್ತಕರ ಅಭಿವೃದ್ಧಿ ಮೇಳ
ಹಾಗೂ ಬಂಡವಾಳ ಹೂಡಿಕೆದಾರರ ಶೃಂಗಸಭೆಯನ್ನು ಈ ವರ್ಷದ ನವೆಂಬರ್‌ 23 ಮತ್ತು 24ರಂದು ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರೋತ್ಸವ ಭಾಷಣದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಕೈಗಾರಿಕೆ ಮತ್ತು ಔದ್ಯಮಿಕ ಕ್ಷೇತ್ರದಲ್ಲಿ ಕರ್ನಾಟಕ
ಹೊಂದಿರುವ ಹಿರಿಮೆ ಹಾಗೂ ಗರಿಮೆಯನ್ನು ಕಾಯ್ದುಕೊಳ್ಳಲು ಸರ್ಕಾರ ಬದಟಛಿವಾಗಿದ್ದು, ಈ ನಿಟ್ಟಿನಲ್ಲಿ ಸಾಧ್ಯವಾಗುವ ಯಾವ ಅವಕಾಶವನ್ನೂ ಸರ್ಕಾರ ಬಿಟ್ಟುಕೊಡುವುದಿಲ್ಲ. ಅದಕ್ಕಾಗಿಯೇ ವರ್ತಕರ ಅಭಿವೃದಿಟಛಿ ಮೇಳ ಹಾಗೂ ಬಂಡವಾಳ ಹೂಡಿಕೆದಾರರ ಶೃಂಗಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಕರ್ನಾಟಕವು ಮೊದಲಿನಿಂದಲೂ ಕೈಗಾರಿಕೆ ಹಾಗೂ ಔದ್ಯಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. 2016ರಲ್ಲಿ 1.54 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಮೂಲಕ ದೇಶದಲ್ಲೇ ಕರ್ನಾಟಕವು ಪ್ರಥಮ ಸ್ಥಾನದಲ್ಲಿದೆ. ಅಂತೆಯೇ, 17,293 ಕೋಟಿ ರೂ.ಯೋಜನೆಗಳ ಜಾರಿಯಿಂದಾಗಿ 1.6 ಲಕ್ಷ ಜನ ಉದ್ಯೋಗ ಪಡೆದಿದ್ದಾರೆ. ಇದಲ್ಲದೆ ಇನ್ನೂ 2.8 ಲಕ್ಷ ಕೋಟಿ ರೂ.ಹೂಡಿಕೆಯ 1,492 ಯೋಜನೆಗಳು ಪ್ರಗತಿಯಲ್ಲಿವೆ.

ರಾಜ್ಯವು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಪಾಲಿಗೆ ಭರವಸೆಯ ತಾಣವಾಗಿದೆ. 4 ವರ್ಷದ ಅವಧಿಯಲ್ಲಿ 22,175 ಕೋಟಿ ರೂ.ಹೂಡಿಕೆಯ 1.16 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕಾ ಘಟಕಗಳ ನೋಂದಣಿಯಾಗಿದೆ. ಇದರಿಂದ 10.3 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆತಿದೆ. ನೂತನ ಜವಳಿ ನೀತಿಯಿಂದಾಗಿ 1,918 ಕೋಟಿ ರೂ. ಹೂಡಿಕೆಯಾಗಿದ್ದು ಒಂದು ಲಕ್ಷ ಜನರಿಗೆ
ಉದ್ಯೋಗಾವಕಾಶ ದೊರೆತಿದೆ ಎಂದರು.

ಇದೆಲ್ಲಕ್ಕೂ ಕಳಶವಿಟ್ಟಂತೆ ಬೆಂಗಳೂರನ್ನು ಜಗತ್ತಿನ ಅತ್ಯಂತ ಕ್ರಿಯಾಶೀಲ ನಗರ ಎಂದು ವಿಶ್ವ ಆರ್ಥಿಕ ವೇದಿಕೆ ಗುರುತಿಸಿದೆ.
ಇಂದು “ಬ್ರಾಂಡ್‌ ಬೆಂಗಳೂರು’ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ವಲಯಗಳಲ್ಲಿ ಮಾತ್ರವೇ ಅಲ್ಲದೆ
ಭಾರತದ ಸ್ಟಾರ್ಟ್‌ ಅಪ್‌ ರಾಜಧಾನಿ ಎನ್ನುವ ಶ್ರೇಯಕ್ಕೂ ಭಾಜನವಾಗಿದೆ. ರಾಜ್ಯವು ದೇಶದಲ್ಲೇ ವಿಶಿಷ್ಟವೆನಿಸುವ ಸ್ಟಾರ್ಟ್‌
ಅಪ್‌ ನೀತಿಯನ್ನು ಹೊಂದಿದ್ದು ನವೋದ್ಯಮಗಳ ತವರಾಗಿ ಹೊರಹೊಮ್ಮಿದೆ ಎಂದಿದ್ದಾರೆ.

ಇದಲ್ಲದೇ ಕೌಶಲ್ಯ ಕರ್ನಾಟಕ ಕಾರ್ಯಕ್ರಮದಡಿ ಪ್ರತಿ ವರ್ಷ 5 ಲಕ್ಷ ಯುವ ಜನತೆಗೆ ತರಬೇತುಗೊಳಿಸಲು ಯೋಜಿಸಿದ್ದೇವೆ.
ರಾಜ್ಯದಲ್ಲಿ ಉನ್ನತ ಶಿಕ್ಷಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲು ವಿಶೇಷವಾದ “ಜ್ಞಾನ ನಗರ’ ಪ್ರಾರಂಭಿಸಲು ಯೋಜನೆ ರೂಪಿಸಲಾಗುವುದು. ಪಡಿತರ ಸೀಮೆ ಎಣ್ಣೆಯನ್ನು ಬಿಟ್ಟುಕೊಡುವವರಿಗೆ “ಪುನರ್‌ ಬೆಳಕು’ ಯೋಜನೆಯಡಿ ಉಚಿತವಾಗಿ ರೀಚಾರ್ಜಬಲ್‌ ಎಲ್‌ಇಡಿ ದೀಪ ನೀಡಲು ಯೋಜಿಸಲಾಗಿದೆ. ತಲಾ 2 ಕೋಟಿ ರೂ. ವೆಚ್ಚದಲ್ಲಿ ಎರಡು ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಬೆಳಗಾವಿ,ಮೈಸೂರು, ಬೆಂಗಳೂರು. ಉಡುಪಿಯಲ್ಲಿ ತಲಾ 2 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಜಿಮ್‌ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವರ್ಷದ ಅಂತ್ಯದ ವೇಳೆಗೆ2,500 ಗ್ರಾಪಂಗಳಿಗೆ ವೈ-ಫೈ ಸೌಲಭ್ಯ ಕಲ್ಪಿಸಲಾಗುವುದು. ಉಳಿದ 3,500 ಗ್ರಾಪಂಗಳಿಗೆ 2018 ರಲ್ಲಿ ವೈ-ಫೈ ಸೌಲಭ್ಯ ಕಲ್ಪಿಸುವ ಮೂಲಕ ಕರ್ನಾಟಕವನ್ನು ಸಂಪೂರ್ಣವಾಗಿ ವೈ-ಫೈ ಯುಕ್ತ ರಾಜ¤ವನ್ನಾಗಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. 

ಬೆಂಗಳೂರು ನಗರದ ಕೊಳಚೆ ಪ್ರದೇಶದ ನಿವಾಸಿಗಳಿಗೆ ಪ್ರತಿ ತಿಂಗಳು ಹತ್ತು ಸಾವಿರ ಲೀಟರ್‌ ನೀರನ್ನು ಉಚಿತವಾಗಿ ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿನ ನಿವಾಸಿಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗುವುದು. ಇದರಿಂದ ಒಂದು ಲಕ್ಷ ಕುಟುಂಬಗಳು ಈ ಸೌಲಭ್ಯವನ್ನು ಪಡೆಯಲಿವೆ ಎಂದು ಮುಖ್ಯಮಂತ್ರಿ ಹೇಳಿದರು.

ಸಮಗ್ರ ಡಿಜಿಟಲ್‌ ವೇದಿಕೆ ಪ್ರವಾಸೋದ್ಯಮ ಇಲಾಖೆಯ ಸಮಗ್ರ ಮಾಹಿತಿ ಹಾಗೂ ಅದರ ಅಧೀನದಲ್ಲಿರುವ ಸಂಸ್ಥೆಗಳ ಸಮಗ್ರ ಮಾಹಿತಿಯನ್ನು ಒಂದೇ ವೇದಿಕೆಯಡಿ ದೇಶೀಯ ಹಾಗೂ ವಿದೇಶಿ ಪ್ರವಾಸಿಗರಿಗೆ ಒದಗಿಸಲು ಸಮಗ್ರ ಡಿಜಿಟಲ್‌ ವೇದಿಕೆ ಅಭಿವೃದ್ಧಿ ಪಡಿಸಲು ಯೋಜಿಸಲಾಗಿದೆ. ವಿವಿಧ ಧರ್ಮಗಳ ಪ್ರವಾಸಿಗರು ತಮ್ಮ ಪುಣ್ಯ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ಭೇಟಿ ನೀಡಲು ಅನುಕೂಲವಾಗುವಂತೆ ಪುನೀತ ಯಾತ್ರೆ ಯೋಜನೆಯಲ್ಲಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಬಸ್‌ಗಳಲ್ಲಿ ರಿಯಾಯಿತಿ ದರದಲ್ಲಿ ಸಂಚರಿಸಲು ಅವಕಾಶ ಕಲ್ಪಿಸುವ ಯೋಜನೆಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಸ್ವಾತಂತ್ರೋತ್ಸವ ಭಾಷಣದಲ್ಲಿ ಹೇಳಿದ್ದಾರೆ.

ಇದೇ ವೇಳೆ ರೈತರ ಸಾಲ ಮನ್ನಾ ಸೇರಿದಂತೆ ಕೃಷಿ, ನೀರಾವರಿ, ಶಿಕ್ಷಣ, ಆರೋಗ್ಯ, ಉದ್ಯೋಗ, ಕೈಗಾರಿಕೆ, ಪ್ರಾದೇಶಿಕ ಅಭಿವೃದ್ಧಿ, ಮೂಲಸೌಕರ್ಯಗಳ ಅಭಿವೃದ್ಧಿ ಸೇರಿಕೊಂಡಂತೆ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಮಾಡಿರುವ ಸಾಧನೆಗಳ ಬಗ್ಗೆಯೂ ಮುಖ್ಯಮಂತ್ರಿಯವರು ತಮ್ಮ ಭಾಷಣದಲ್ಲಿ ಸಮಗ್ರ ಮಾಹಿತಿಯನ್ನು ನೀಡಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.