ಅಮ್ಮನಾದ ಬಳಿಕ ಸೆರೆನಾಗೆ ಮೊದಲ ಸೋಲು
Team Udayavani, Dec 31, 2017, 6:15 AM IST
ಅಬುಧಾಬಿ: ಇತ್ತೀಚೆಗಷ್ಟೇ ಹೆಣ್ಣು ಮಗುವಿಗೆ ತಾಯಿಯಾದ ಖ್ಯಾತ ಟೆನಿಸ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಟೆನಿಸ್ಗೆ ಮರಳಿದ ಮೊದಲ ಪಂದ್ಯದಲ್ಲೇ ಸೋಲುಂಡಿದ್ದಾರೆ.
ಅಬುಧಾಬಿಯಲ್ಲಿ ನಡೆದ ಸೌಹಾರ್ದ ಪಂದ್ಯದಲ್ಲಿ ಅಮೆರಿಕದ ವಿಲಿಯಮ್ಸ್ ಫ್ರೆಂಚ್ ಓಪನ್ ಚಾಂಪಿಯನ್ ಜೆಲೆನಾ ಒಸ್ಟಾಪೆಂಕೊ ವಿರುದ್ಧ 6-2, 3-6 ಸೆಟ್ಗಳ ಅಂತರದಿಂದ ಸೋಲು ಅನುಭವಿಸಿದರು. ಸೋತರೂ ಸೆರೆನಾ ಅತ್ಯುತ್ತಮ ಆಟ ಪ್ರದರ್ಶಿಸಿ ಗಮನ ಸೆಳೆದರು. 36 ವರ್ಷದ ಸೆರೆನಾ ವಿಲಿಯಮ್ಸ್ ಜನವರಿಯಲ್ಲಿ ಆಸ್ಟ್ರೇಲಿಯನ್ ಓಪನ್ ಸಿಂಗಲ್ಸ್ ಪ್ರಶಸ್ತಿ ಗೆದ್ದಿದ್ದರು. ಇದಾದ ಬಳಿಕ ಅವರು ತಾಯಿಯಾಗುತ್ತಿರುವ ಸುದ್ದಿ ಪ್ರಕಟವಾಯಿತು. ಬಳಿಕ ಟೆನಿಸ್ನಿಂದ ದೂರ ಉಳಿದಿದ್ದರು. ಇದೀಗ ಮುಂದಿನ ಆಸ್ಟ್ರೇಲಿಯನ್ ಓಪನ್ಗೂ ಮೊದಲು ಸೌಹಾರ್ದ ಪಂದ್ಯ ಆಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ