ಟೆಸ್ಟ್ಗೆ ಜಸ್ಪ್ರೀತ್ ಬುಮ್ರಾ ಪಾದಾರ್ಪಣೆ
Team Udayavani, Jan 6, 2018, 6:30 AM IST
ಕೇಪ್ ಟೌನ್: ಡೆತ್ ಓವರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧ ಶುಕ್ರವಾರ ಆರಂಭವಾಗಿರುವ ಮೊದಲನೇ ಟೆಸ್ಟ್ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕ್ಯಾಪ್ ನೀಡಿ ಸ್ವಾಗತಿಸಿದ್ದಾರೆ.
ಬುಮ್ರಾ ಇಲ್ಲಿಯವರೆಗೆ 31 ಏಕದಿನ ಮತ್ತು 32 ಟ್ವೆಂಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನಲ್ಲಿ 56 ವಿಕೆಟ್, ಟಿ20ಯಲ್ಲಿ 40 ವಿಕೆಟ್ ಪಡೆದಿದ್ದಾರೆ. ಟ್ವೆಂಟಿ20ಯಲ್ಲಿ ಭಾರತ ಹಲವು ಪಂದ್ಯಗಳಲ್ಲಿ ಗೆಲುವು ದಾಖಲಿಸಲು ಬುಮ್ರಾ ಕಾರಣರಾಗಿದ್ದರು. ಆದರೆ ಇಲ್ಲಿಯವರೆಗೆ ಬುಮ್ರಾ ಅವರಿಗೆ ಟೆಸ್ಟ್ಗೆ ಅವಕಾಶ ಸಿಕ್ಕಿರಲಿಲ್ಲ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಗೆ ಬುಮ್ರಾ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ಪಂದ್ಯಕ್ಕೆ ವೇಗಿಗಳಾದ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ.