ಮೊಹಮ್ಮದ್ ಶಮಿ ಮೊಬೈಲ್ ವಶ
Team Udayavani, Mar 14, 2018, 6:00 AM IST
ಕೋಲ್ಕತಾ: ಕಲಕಿದ ನೀರಂತಾಗಿರುವ ಭಾರತದ ವೇಗಿ ಮೊಹಮ್ಮದ್ ಶಮಿ ಅವರ ವೈವಾಹಿಕ ಬದುಕು ಸರಿದಾರಿಗೆ ಬರುವಂತೆ ಕಾಣುತ್ತಿಲ್ಲ. ಶಮಿ ಪತ್ನಿ ಹಸಿನ್ ಜಹಾನ್ ಕಳೆದ ಕೆಲವು ದಿನಗಳಿಂದ ಶಮಿ ವಿರುದ್ಧ ವಿವಿಧ ದೂರುಗಳನ್ನು ನೀಡುತ್ತಲೇ ಇದ್ದು, ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಕೋಲ್ಕತಾ ಪೊಲೀಸರು ಶಮಿಯವರ ಮೊಬೈಲ್ ಫೋನನ್ನು ವಶಕ್ಕೆ ಪಡೆದಿದ್ದಾರೆ.
ಶಮಿಯ ವಿರುದ್ಧ ಜಹಾನ್ ಕಿರುಕುಳ, ಕೊಲೆಗೆ ಯತ್ನ, ಅನೈತಿಕ ಸಂಬಂಧ, ಅತ್ಯಾಚಾರಕ್ಕೆ ಯತ್ನ, ಮ್ಯಾಚ್ ಫಿಕ್ಸಿಂಗ್ನಂಥ ಗಂಭೀರ ಆರೋಪಗಳನ್ನು ಮಾಡಿದ್ದು, ಪ್ರಕರಣವನ್ನು ಕೋಲ್ಕತಾದ ಲಾಲ್ ಬಜಾರ್ ಪೊಲೀಸ್ ತನಿಖಾ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಸಹಕರಿಸುವಂತೆ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ)ಯನ್ನು ಕೇಳಿರುವ ಪೊಲೀಸರು, ಶಮಿ ದಕ್ಷಿಣ ಆಫ್ರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಮರಳುತ್ತಿದ್ದ ವೇಳೆ ಉಳಿದುಕೊಂಡಿದ್ದ ಬಗ್ಗೆ, ಪ್ರಯಾಣದ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದಾರೆ ಎನ್ನಲಾಗಿದೆ.
ಹಸಿನ್ ಮಾಡಿರುವ ಆರೋಪದ ವಿಚಾರಣೆಗೆ ಸಂಬಂಧಿಸಿ ಶಮಿಯ ಮೊಬೈಲ್, ಸಿಮ್ ವಶಕ್ಕೆ ಪಡೆದಿರುವ ಪೊಲೀಸರು ಮೊಬೈಲನ್ನು ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ