ಭಾರತ-ಪಾಕ್ ಕ್ರಿಕೆಟ್ ಸರಣಿ: ಕೇಂದ್ರದಿಂದ ಸ್ಪಷ್ಟನೆ ಕೇಳಿದ ಬಿಸಿಸಿಐ
Team Udayavani, May 29, 2018, 6:00 AM IST
ಹೊಸದಿಲ್ಲಿ: ಭಾರತ ಜತೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಡಲು ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಹಲವು ಸಲ ಬೇಡಿಕೆ ಇಟ್ಟ ಬೆನ್ನಲ್ಲೇ ಪಾಕ್ ಜತೆ ಕ್ರಿಕೆಟ್ ಸರಣಿ ಆಡುವ ಕುರಿತಂತೆ ಕೇಂದ್ರ ಸರಕಾರಕ್ಕೆ ಸ್ಪಷ್ಟನೆ ನೀಡುವಂತೆ ಕೋರಿ ಬಿಸಿಸಿಐ ಪತ್ರ ಬರೆದಿದೆ.
ಇದೇ ವೇಳೆ ಕೇಂದ್ರ ಸರಕಾರದ ಮಾರ್ಗಸೂಚಿ ಇಲ್ಲದೆ ಭಾರತ-ಪಾಕ್ ಸರಣಿ ಆಯೋಜಿಸಲು ಸಾಧ್ಯವೇ ಇಲ್ಲ ಎನ್ನುವುದನ್ನು ಬಿಸಿಸಿಐ ಸ್ಪಷ್ಟಪಡಿಸಿದೆ. ಕಳೆದ ವಾರ ಭಾರತ ಕ್ರೀಡಾ ಸಚಿವಾಲಯಕ್ಕೆ ಬಿಸಿಸಿಐ ಪತ್ರ ಬರೆದಿತ್ತು. ಸದ್ಯ ಪಾಕ್ ಜತೆ ಕ್ರಿಕೆಟ್ ಸಂಬಂಧಕ್ಕಾಗಿ ಸರಕಾರದ ಸ್ಪಷ್ಟನೆ ಬೇಕಿದ್ದು, ನೀವು ನೀಡಿರುವ ಆದೇಶದಂತೆ ಪಾಕ್ನಲ್ಲಿ ನಾವು ಸರಣಿ ಆಡುವುದು ಅಥವಾ ಪಾಕಿಸ್ಥಾನ ನಮ್ಮಲ್ಲಿಗೆ ಬಂದು ಸರಣಿ ಆಡುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಬಿಸಿಸಿಐ ತಿಳಿಸಿತ್ತು. ಎರಡೂ ರಾಷ್ಟ್ರಗಳ ರಾಜಕೀಯ ಬಿಕ್ಕಟ್ಟಿನಿಂದಾಗಿ ಕಳೆದ ಕೆಲವು ವರ್ಷಗಳಿಂದ ಉಭಯ ರಾಷ್ಟ್ರಗಳ ನಡುವಿನ ಕ್ರಿಕೆಟ್ ಸರಣಿಗೆ ಹಿನ್ನಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ